1 Coríntios 11
Kannada Bible (GL_KANNADA) vs ARA
ARA Almeida Revista e Atualizada 1993
1 ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
1 Sede meus imitadores, como também eu sou de Cristo.
2 ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
2 De fato, eu vos louvo porque, em tudo, vos lembrais de mim e retendes as tradições assim como vo-las entreguei.
3 ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
3 Quero, entretanto, que saibais ser Cristo o cabeça de todo homem, e o homem, o cabeça da mulher, e Deus, o cabeça de Cristo.
4 ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
4 Todo homem que ora ou profetiza, tendo a cabeça coberta, desonra a sua própria cabeça.
5 ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
5 Toda mulher, porém, que ora ou profetiza com a cabeça sem véu desonra a sua própria cabeça, porque é como se a tivesse rapada.
6 ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
6 Portanto, se a mulher não usa véu, nesse caso, que rape o cabelo. Mas, se lhe é vergonhoso o tosquiar-se ou rapar-se, cumpre-lhe usar véu.
7 ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.
7 Porque, na verdade, o homem não deve cobrir a cabeça, por ser ele imagem e glória de Deus, mas a mulher é glória do homem.
8 ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು.
8 Porque o homem não foi feito da mulher, e sim a mulher, do homem.
9 ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
9 Porque também o homem não foi criado por causa da mulher, e sim a mulher, por causa do homem.
10 ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
10 Portanto, deve a mulher, por causa dos anjos, trazer véu na cabeça, como sinal de autoridade.
11 ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.
11 No Senhor, todavia, nem a mulher é independente do homem, nem o homem, independente da mulher.
12 ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.
12 Porque, como provém a mulher do homem, assim também o homem é nascido da mulher; e tudo vem de Deus.
13 ನಿಮ್ಮೊಳಗೆ ನೀವೇ ತೀರ್ಪು ಮಾಡಿ ಕೊಳ್ಳಿರಿ; ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?
13 Julgai entre vós mesmos: é próprio que a mulher ore a Deus sem trazer o véu?
14 ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?
14 Ou não vos ensina a própria natureza ser desonroso para o homem usar cabelo comprido?
15 ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;
15 E que, tratando-se da mulher, é para ela uma glória? Pois o cabelo lhe foi dado em lugar de mantilha.
16 ಒಬ್ಬನು ವಾಗ್ವಾದ ಪ್ರಿಯನಾಗಿ ಕಾಣಿಸಿ ಕೊಂಡರೆ ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳುಕೊಳ್ಳಲಿ.
16 Contudo, se alguém quer ser contencioso, saiba que nós não temos tal costume, nem as igrejas de Deus.
17 ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರು ವದರಿಂದ ಕೇಡಾಗುತ್ತದೆಯೇ ಹೊರತು ಮೇಲಾ ಗುವದಿಲ್ಲ.
17 Nisto, porém, que vos prescrevo, não vos louvo, porquanto vos ajuntais não para melhor, e sim para pior.
18 ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
18 Porque, antes de tudo, estou informado haver divisões entre vós quando vos reunis na igreja; e eu, em parte, o creio.
19 ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
19 Porque até mesmo importa que haja partidos entre vós, para que também os aprovados se tornem conhecidos em vosso meio.
20 ಆದರೆ ನೀವು ಒಂದು ಸ್ಥಳದಲ್ಲಿ ಕೂಡಿಬರುವಾಗ ಮಾಡುವ ಭೋಜನವು ಕರ್ತನ ಭೋಜನವಲ್ಲ.
20 Quando, pois, vos reunis no mesmo lugar, não é a ceia do Senhor que comeis.
21 ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
21 Porque, ao comerdes, cada um toma, antecipadamente, a sua própria ceia; e há quem tenha fome, ao passo que há também quem se embriague.
22 ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
22 Não tendes, porventura, casas onde comer e beber? Ou menosprezais a igreja de Deus e envergonhais os que nada têm? Que vos direi? Louvar-vos-ei? Nisto, certamente, não vos louvo.
23 ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
23 Porque eu recebi do Senhor o que também vos entreguei: que o Senhor Jesus, na noite em que foi traído, tomou o pão;
24 ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
24 e, tendo dado graças, o partiu e disse: Isto é o meu corpo, que é dado por vós; fazei isto em memória de mim.
25 ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
25 Por semelhante modo, depois de haver ceado, tomou também o cálice, dizendo: Este cálice é a nova aliança no meu sangue; fazei isto, todas as vezes que o beberdes, em memória de mim.
26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
26 Porque, todas as vezes que comerdes este pão e beberdes o cálice, anunciais a morte do Senhor, até que ele venha.
27 ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
27 Por isso, aquele que comer o pão ou beber o cálice do Senhor, indignamente, será réu do corpo e do sangue do Senhor.
28 ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
28 Examine-se, pois, o homem a si mesmo, e, assim, coma do pão, e beba do cálice;
29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
29 pois quem come e bebe sem discernir o corpo, come e bebe juízo para si.
30 ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
30 Eis a razão por que há entre vós muitos fracos e doentes e não poucos que dormem.
31 ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
31 Porque, se nos julgássemos a nós mesmos, não seríamos julgados.
32 ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
32 Mas, quando julgados, somos disciplinados pelo Senhor, para não sermos condenados com o mundo.
33 ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.
33 Assim, pois, irmãos meus, quando vos reunis para comer, esperai uns pelos outros.
34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
34 Se alguém tem fome, coma em casa, a fim de não vos reunirdes para juízo. Quanto às demais coisas, eu as ordenarei quando for ter convosco.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Coríntios 11, comparar traduções ou montar um estudo — tudo direto pelo WhatsApp.