1 Coríntios 15

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
1 Ora, eu vos lembro, irmãos, o evangelho que já vos anunciei; o qual também recebestes, e no qual perseverais,
2 ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
2 pelo qual também sois salvos, se é que o conservais tal como vo-lo anunciei; se não é que crestes em vão.
3 ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
3 Porque primeiramente vos entreguei o que também recebi: que Cristo morreu por nossos pecados, segundo as Escrituras;
4 ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
4 que foi sepultado; que foi ressuscitado ao terceiro dia, segundo as Escrituras;
5 ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
5 que apareceu a Cefas, e depois aos doze;
6 ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
6 depois apareceu a mais de quinhentos irmãos duma vez, dos quais vive ainda a maior parte, mas alguns já dormiram;
7 ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
7 depois apareceu a Tiago, então a todos os apóstolos;
8 ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
8 e por derradeiro de todos apareceu também a mim, como a um abortivo.
9 ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
9 Pois eu sou o menor dos apóstolos, que nem sou digno de ser chamado apóstolo, porque persegui a igreja de Deus.
10 ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
10 Mas pela graça de Deus sou o que sou; e a sua graça para comigo não foi vã, antes trabalhei muito mais do que todos eles; todavia não eu, mas a graça de Deus que está comigo.
11 ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
11 Então, ou seja eu ou sejam eles, assim pregamos e assim crestes.
12 ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
12 Ora, se prega que Cristo foi ressuscitado dentre os mortos, como dizem alguns entre vós que não há ressurreição de mortos?
13 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.
13 Mas se não há ressurreição de mortos, também Cristo não foi ressuscitado.
14 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.
14 E, se Cristo não foi ressuscitado, logo é vã a nossa pregação, e também é vã a vossa fé.
15 ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
15 E assim somos também considerados como falsas testemunhas de Deus que ele ressuscitou a Cristo, ao qual, porém, não ressuscitou, se, na verdade, os mortos não são ressuscitados.
16 ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ.
16 Porque, se os mortos não são ressuscitados, também Cristo não foi ressuscitado.
17 ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
17 E, se Cristo não foi ressuscitado, é vã a vossa fé, e ainda estais nos vossos pecados.
18 ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
18 Logo, também os que dormiram em Cristo estão perdidos.
19 ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
19 Se é só para esta vida que esperamos em Cristo, somos de todos os homens os mais dignos de lástima.
20 ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
20 Mas na realidade Cristo foi ressuscitado dentre os mortos, sendo ele as primícias dos que dormem.
21 ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
21 Porque, assim como por um homem veio a morte, também por um homem veio a ressurreição dos mortos.
22 ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
22 Pois como em Adão todos morrem, do mesmo modo em Cristo todos serão vivificados.
23 ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
23 Cada um, porém, na sua ordem: Cristo as primícias, depois os que são de Cristo, na sua vinda.
24 ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
24 Então virá o fim quando ele entregar o reino a Deus o Pai, quando houver destruído todo domínio, e toda autoridade e todo poder.
25 ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
25 Pois é necessário que ele reine até que haja posto todos os inimigos debaixo de seus pés.
26 ನಾಶವಾಗಲಿರುವ ಕಡೇ ಶತ್ರುವು ಮರಣ.
26 Ora, o último inimigo a ser destruído é a morte.
27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
27 Pois se lê: Todas as coisas sujeitou debaixo de seus pés. Mas, quando diz: Todas as coisas lhe estão sujeitas, claro está que se excetua aquele que lhe sujeitou todas as coisas.
28 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
28 E, quando todas as coisas lhe estiverem sujeitas, então também o próprio Filho se sujeitará àquele que todas as coisas lhe sujeitou, para que Deus seja tudo em todos.
29 ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
29 De outra maneira, que farão os que se batizam pelos mortos? Se absolutamente os mortos não ressuscitam, por que então se batizam por eles?
30 ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
30 E por que nos expomos também nós a perigos a toda hora?
31 ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
31 Eu vos declaro, irmãos, pela glória que de vós tenho em Cristo Jesus nosso Senhor, que morro todos os dias.
32 ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
32 Se, como homem, combati em Éfeso com as feras, que me aproveita isso? Se os mortos não são ressuscitados, comamos e bebamos, porque amanhã morreremos.
33 ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
33 Não vos enganeis. As más companhias corrompem os bons costumes.
34 ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
34 Acordai para a justiça e não pequeis mais; porque alguns ainda não têm conhecimento de Deus; digo-o para vergonha vossa.
35 ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
35 Mas alguém dirá: Como ressuscitam os mortos? e com que qualidade de corpo vêm?
36 ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
36 Insensato! o que tu semeias não é vivificado, se primeiro não morrer.
37 ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
37 E, quando semeias, não semeias o corpo que há de nascer, mas o simples grão, como o de trigo, ou o de outra qualquer semente.
38 ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.
38 Mas Deus lhe dá um corpo como lhe aprouve, e a cada uma das sementes um corpo próprio.
39 ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ.
39 Nem toda carne é uma mesma carne; mas uma é a carne dos homens, outra a carne dos animais, outra a das aves e outra a dos peixes.
40 ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
40 Também há corpos celestes e corpos terrestres, mas uma é a glória dos celestes e outra a dos terrestres.
41 ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
41 Uma é a glória do sol, outra a glória da lua e outra a glória das estrelas; porque uma estrela difere em glória de outra estrela.
42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
42 Assim também é a ressurreição, é ressuscitado em incorrupção.
43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
43 Semeia-se em ignomínia, é ressuscitado em glória. Semeia-se em fraqueza, é ressuscitado em poder.
44 ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
44 Semeia-se corpo animal, é ressuscitado corpo espiritual. Se há corpo animal, há também corpo espiritual.
45 ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
45 Assim também está escrito: O primeiro homem, Adão, tornou-se alma vivente; o último Adão, espírito vivificante.
46 ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು.
46 Mas não é primeiro o espiritual, senão o animal; depois o espiritual.
47 ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
47 O primeiro homem, sendo da terra, é terreno; o segundo homem é do céu.
48 ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
48 Qual o terreno, tais também os terrenos; e, qual o celestial, tais também os celestiais.
49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
49 E, assim como trouxemos a imagem do terreno, traremos também a imagem do celestial.
50 ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
50 Mas digo isto, irmãos, que carne e sangue não podem herdar o reino de Deus; nem a corrupção herda a incorrupção.
51 ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
51 Eis aqui vos digo um mistério: Nem todos dormiremos mas todos seremos transformados,
52 ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
52 num momento, num abrir e fechar de olhos, ao som da última trombeta; porque a trombeta soará, e os mortos serão ressuscitados incorruptíveis, e nós seremos transformados.
53 ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
53 Porque é necessário que isto que é corruptível se revista da incorruptibilidade e que isto que é mortal se revista da imortalidade.
54 ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
54 Mas, quando isto que é corruptível se revestir da incorruptibilidade, e isto que é mortal se revestir da imortalidade, então se cumprirá a palavra que está escrito: Tragada foi a morte na vitória.
55 ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
55 Onde está, ó morte, a tua vitória? Onde está, ó morte, o teu aguilhão?
56 ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
56 O aguilhão da morte é o pecado, e a força do pecado é a lei.
57 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
57 Mas graça a Deus que nos dá a vitória por nosso Senhor Jesus Cristo.
58 ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
58 Portanto, meus amados irmãos, sede firmes e constantes, sempre abundantes na obra do Senhor, sabendo que o vosso trabalho não é vão no Senhor.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Coríntios 15, comparar traduções ou montar um estudo — tudo direto pelo WhatsApp.