1 Coríntios 7

Kannada Bible (GL_KANNADA) vs NVI

Sair da comparação
NVI Nova Versão Internacional
1 ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
1 Quanto aos assuntos sobre os quais vocês escreveram, é bom que o homem não toque em mulher,
2 ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
2 mas, por causa da imoralidade, cada um deve ter sua esposa, e cada mulher o seu próprio marido.
3 ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.
3 O marido deve cumprir os seus deveres conjugais para com a sua mulher, e da mesma forma a mulher para com o seu marido.
4 ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
4 A mulher não tem autoridade sobre o seu próprio corpo, mas sim o marido. Da mesma forma, o marido não tem autoridade sobre o seu próprio corpo, mas sim a mulher.
5 ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
5 Não se recusem um ao outro, exceto por mútuo consentimento e durante certo tempo, para se dedicarem à oração. Depois, unam-se de novo, para que Satanás não os tente por não terem domínio próprio.
6 ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.
6 Digo isso como concessão, e não como mandamento.
7 ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.
7 Gostaria que todos os homens fossem como eu; mas cada um tem o seu próprio dom da parte de Deus; um de um modo, outro de outro.
8 ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;
8 Digo, porém, aos solteiros e às viúvas: é bom que permaneçam como eu.
9 ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
9 Mas, se não conseguem controlar-se, devem casar-se, pois é melhor casar-se do que ficar ardendo de desejo.
10 ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.
10 Aos casados dou este mandamento, não eu, mas o Senhor: que a esposa não se separe do seu marido.
11 ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
11 Mas, se o fizer, que permaneça sem se casar ou, então, reconcilie-se com o seu marido. E o marido não se divorcie da sua mulher.
12 ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
12 Aos outros eu mesmo digo isto, e não o Senhor: se um irmão tem mulher descrente, e ela se dispõe a viver com ele, não se divorcie dela.
13 ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.
13 E, se uma mulher tem marido descrente, e ele se dispõe a viver com ela, não se divorcie dele.
14 ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
14 Pois o marido descrente é santificado por meio da mulher, e a mulher descrente é santificada por meio do marido. Se assim não fosse, seus filhos seriam impuros, mas agora são santos.
15 ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.
15 Todavia, se o descrente separar-se, que se separe. Em tais casos, o irmão ou a irmã não fica debaixo de servidão; Deus nos chamou para vivermos em paz.
16 ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
16 Você, mulher, como sabe se salvará seu marido? Ou você, marido, como sabe se salvará sua mulher?
17 ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
17 Entretanto, cada um continue vivendo na condição que o Senhor lhe designou e de acordo com o chamado de Deus. Esta é a minha ordem para todas as igrejas.
18 ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
18 Foi alguém chamado sendo já circunciso? Não desfaça a sua circuncisão. Foi alguém chamado sendo incircunciso? Não se circuncide.
19 ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
19 A circuncisão não significa nada, e a incircuncisão também nada é; o que importa é obedecer aos mandamentos de Deus.
20 ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
20 Cada um deve permanecer na condição em que foi chamado por Deus.
21 ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
21 Foi você chamado sendo escravo? Não se incomode com isso. Mas, se você puder conseguir a liberdade, consiga-a.
22 ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
22 Pois aquele que, sendo escravo, foi chamado pelo Senhor, é liberto e pertence ao Senhor; semelhantemente, aquele que era livre quando foi chamado, é escravo de Cristo.
23 ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.
23 Vocês foram comprados por alto preço; não se tornem escravos de homens.
24 ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.
24 Irmãos, cada um deve permanecer diante de Deus na condição em que foi chamado.
25 ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
25 Quanto às pessoas virgens, não tenho mandamento do Senhor, mas dou meu parecer como alguém que, pela misericórdia de Deus, é digno de confiança.
26 ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.
26 Por causa dos problemas atuais, penso que é melhor o homem permanecer como está.
27 ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.
27 Você está casado? Não procure separar-se. Está solteiro? Não procure esposa.
28 ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
28 Mas, se vier a casar-se, não comete pecado; e, se uma virgem se casar, também não comete pecado. Mas aqueles que se casarem enfrentarão muitas dificuldades na vida, e eu gostaria de poupá-los disso.
29 ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
29 O que quero dizer é que o tempo é pouco. De agora em diante, aqueles que têm esposa, vivam como se não tivessem;
30 ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ
30 aqueles que choram, como se não chorassem; os que estão felizes, como se não estivessem; os que compram algo, como se nada possuíssem;
31 ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
31 os que usam as coisas do mundo, como se não as usassem; porque a forma presente deste mundo está passando.
32 ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
32 Gostaria de vê-los livres de preocupações. O homem que não é casado preocupa-se com as coisas do Senhor, em como agradar ao Senhor.
33 ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
33 Mas o homem casado preocupa-se com as coisas deste mundo, em como agradar sua mulher,
34 ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
34 e está dividido. Tanto a mulher não casada como a virgem preocupam-se com as coisas do Senhor, para serem santas no corpo e no espírito. Mas a casada preocupa-se com as coisas deste mundo, em como agradar seu marido.
35 ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.
35 Estou dizendo isso para o próprio bem de vocês; não para lhes impor restrições, mas para que vocês possam viver de maneira correta, em plena consagração ao Senhor.
36 ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
36 Se alguém acha que não está tratando sua filha como é devido e que ela está numa idade madura, pelo que ele se sente obrigado a casá-la, faça como achar melhor. Com isso não peca. Deve permitir que se case.
37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.
37 Contudo, o que se mantém firme no seu propósito e não é dominado por seus impulsos mas domina sua própria vontade, e resolveu manter solteira sua filha, este também faz bem.
38 ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
38 De modo que aquele que dá sua filha em casamento faz bem, mas o que não a dá em casamento faz melhor.
39 ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.
39 A mulher está ligada a seu marido enquanto ele viver. Mas, se o seu marido morrer, ela estará livre para se casar com quem quiser, contanto que ele pertença ao Senhor.
40 ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
40 Em meu parecer, ela será mais feliz se permanecer como está; e penso que também tenho o Espírito de Deus.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Coríntios 7, comparar traduções ou montar um estudo — tudo direto pelo WhatsApp.