1 João 2

Kannada Bible (GL_KANNADA) vs NVT

Sair da comparação
NVT Nova Versão Transformadora
1 ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
1 Meus filhinhos, escrevo-lhes estas coisas para que vocês não pequem. Se, contudo, alguém pecar, temos um advogado que defende nossa causa diante do Pai: Jesus Cristo, aquele que é justo.
2 ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
2 Ele mesmo é o sacrifício para o perdão de nossos pecados, e não apenas de nossos pecados, mas dos pecados de todo o mundo.
3 ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
3 E sabemos que o conhecemos se obedecemos a seus mandamentos.
4 ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
4 Se alguém diz: “Eu o conheço”, mas não obedece a seus mandamentos, é mentiroso e a verdade não está nele.
5 ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
5 Mas quem obedece à palavra de Deus mostra que o amor que vem dele está se aperfeiçoando em sua vida. Desse modo, sabemos que estamos nele.
6 ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
6 Quem afirma que permanece nele deve viver como ele viveu.
7 ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.
7 Amados, não lhes escrevo um novo mandamento, mas um antigo, que vocês têm desde o princípio. É a mesma mensagem que ouviram antes.
8 ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
8 E, no entanto, também é um novo mandamento, cuja verdade ele demonstrou, e vocês também a demonstram. Pois a escuridão está se dissipando, e a verdadeira luz já brilha.
9 ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
9 Se alguém afirma: “Estou na luz”, mas odeia seu irmão, ainda está na escuridão.
10 ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
10 Quem ama seu irmão permanece na luz e não leva outros a tropeçar.
11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
11 Mas quem odeia seu irmão ainda está na escuridão e anda na escuridão. Não sabe para onde vai, pois a escuridão o cegou.
12 ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
12 Escrevo a vocês, filhinhos, porque seus pecados foram perdoados pelo nome de Jesus.
13 ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
13 Escrevo a vocês, pais, porque conhecem aquele que existia desde o princípio. Escrevo a vocês, jovens, porque venceram a batalha contra o maligno.
14 ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.
14 Escrevi a vocês, filhinhos, porque conhecem o Pai. Escrevi a vocês, pais, porque conhecem aquele que existia desde o princípio. Escrevi a vocês, jovens, porque são fortes. A palavra de Deus permanece em seu coração, e vocês venceram o maligno.
15 ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
15 Não amem este mundo, nem as coisas que ele oferece, pois, quando amam o mundo, o amor do Pai não está em vocês.
16 ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
16 Porque o mundo oferece apenas o desejo intenso por prazer físico, o desejo intenso por tudo que vemos e o orgulho de nossas realizações e bens. Isso não provém do Pai, mas do mundo.
17 ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
17 E este mundo passa, e com ele tudo que as pessoas tanto desejam. Mas quem faz o que agrada a Deus vive para sempre.
18 ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
18 Filhinhos, chegou a hora final. Vocês ouviram que o anticristo está por vir, e muitos anticristos já apareceram. Por isso sabemos que chegou a hora final.
19 ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
19 Eles saíram de nosso meio, mas, na verdade, nunca foram dos nossos; do contrário, teriam permanecido conosco. Quando saíram, mostraram que não eram dos nossos.
20 ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
20 Mas vocês não são assim, pois o Santo lhes deu sua unção, e todos vocês conhecem a verdade.
21 ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
21 Não lhes escrevo porque não conhecem a verdade, mas porque a conhecem e sabem que a verdade não produz mentira alguma.
22 ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
22 E quem é mentiroso? Aquele que afirma que Jesus não é o Cristo. Quem nega o Pai e o Filho é o anticristo.
23 ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
23 Aquele que nega o Filho também não tem o Pai. Quem reconhece o Filho tem também o Pai.
24 ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
24 Portanto, cuidem para que permaneça em vocês o que lhes foi ensinado desde o começo. Se o fizerem, permanecerão em comunhão com o Filho e com o Pai.
25 ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
25 E, nessa comunhão, desfrutamos a vida eterna que ele nos prometeu.
26 ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
26 Escrevo estas coisas para adverti-los sobre os que desejam enganá-los.
27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
27 Vocês, porém, receberam dele a unção, e ela permanece em vocês, de modo que não precisam que alguém lhes ensine a verdade. Pois o que a unção lhes ensina é verdade, e não mentira, e é tudo que precisam saber. Portanto, como lhes ensinou a unção, permaneçam nele.
28 ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.
28 Agora, filhinhos, permaneçam nele para que, quando ele voltar, estejamos confiantes e não nos afastemos dele, envergonhados.
29 ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
29 Porque sabemos que ele é justo, também sabemos que todo o que pratica a justiça é nascido de Deus.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 João 2, comparar traduções ou montar um estudo — tudo direto pelo WhatsApp.