1 João 3
Kannada Bible (GL_KANNADA) vs NAA
NAA Nova Almeida Atualizada 2017
1 ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
1 Vejam que grande amor o Pai nos tem concedido, a ponto de sermos chamados filhos de Deus; e, de fato, somos filhos de Deus. Por essa razão, o mundo não nos conhece, porque não o conheceu.
2 ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
2 Amados, agora somos filhos de Deus, mas ainda não se manifestou o que haveremos de ser. Sabemos que, quando ele se manifestar, seremos semelhantes a ele, porque haveremos de vê-lo como ele é.
3 ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
3 E todo o que tem essa esperança nele purifica a si mesmo, assim como ele é puro.
4 ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
4 Todo aquele que pratica o pecado também transgride a lei, porque o pecado é a transgressão da lei.
5 ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
5 E vocês sabem que ele se manifestou para tirar os pecados, e nele não existe pecado.
6 ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
6 Todo aquele que permanece nele não vive pecando; todo aquele que vive pecando não o viu, nem o conheceu.
7 ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
7 Filhinhos, não se deixem enganar por ninguém. Aquele que pratica a justiça é justo, assim como ele é justo.
8 ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
8 Aquele que pratica o pecado procede do diabo, porque o diabo vive pecando desde o princípio. Para isto se manifestou o Filho de Deus: para destruir as obras do diabo.
9 ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
9 Todo aquele que é nascido de Deus não vive na prática de pecado, porque nele permanece a semente divina; esse não pode viver pecando, porque é nascido de Deus.
10 ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
10 Nisto são manifestos os filhos de Deus e os filhos do diabo: todo aquele que não pratica a justiça não procede de Deus, e o mesmo vale para aquele que não ama o seu irmão.
11 ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
11 Porque a mensagem que vocês ouviram desde o princípio é esta: que nos amemos uns aos outros.
12 ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
12 Não sejamos como Caim, que era do Maligno e matou o seu irmão. E por que o matou? Porque as suas obras eram más, e as de seu irmão eram justas.
13 ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
13 Irmãos, não se admirem se o mundo odeia vocês.
14 ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
14 Nós sabemos que já passamos da morte para a vida, porque amamos os irmãos. Quem não ama permanece na morte.
15 ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
15 Todo aquele que odeia o seu irmão é assassino, e vocês sabem que todo assassino não tem a vida eterna permanente em si.
16 ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
16 Nisto conhecemos o amor: que Cristo deu a sua vida por nós; portanto, também nós devemos dar a nossa vida pelos irmãos.
17 ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
17 Ora, se alguém possui recursos deste mundo e vê seu irmão passar necessidade, mas fecha o coração para essa pessoa, como pode permanecer nele o amor de Deus?
18 ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
18 Filhinhos, não amemos de palavra, nem da boca para fora, mas de fato e de verdade.
19 ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
19 E nisto conheceremos que somos da verdade, bem como, diante dele, tranquilizaremos o nosso coração.
20 ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
20 Pois, se o nosso coração nos acusar, Deus é maior do que o nosso coração e conhece todas as coisas.
21 ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
21 Amados, se o coração não nos acusar, temos confiança diante de Deus;
22 ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
22 e aquilo que pedimos dele recebemos, porque guardamos os seus mandamentos e fazemos diante dele o que lhe é agradável.
23 ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
23 E o seu mandamento é este: que creiamos no nome de seu Filho, Jesus Cristo, e nos amemos uns aos outros, segundo o mandamento que nos ordenou.
24 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
24 Quem guarda os seus mandamentos permanece em Deus, e Deus permanece nele. E nisto conhecemos que ele permanece em nós, pelo Espírito que nos deu.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 João 3, comparar traduções ou montar um estudo — tudo direto pelo WhatsApp.