1 João 5

Kannada Bible (GL_KANNADA) vs NTLH

Sair da comparação
NTLH Nova Tradução na Linguagem de Hoje 2000
1 ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
1 Todos aqueles que creem que Jesus é o Messias são filhos de Deus. E quem ama um pai ama também os filhos desse pai.
2 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
2 Nós sabemos que amamos os filhos de Deus quando amamos a Deus e obedecemos aos seus mandamentos.
3 ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
3 Pois amar a Deus é obedecer aos seus mandamentos. E os seus mandamentos não são difíceis de obedecer
4 ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
4 porque todo filho de Deus pode vencer o mundo. Assim, com a nossa fé conseguimos a vitória sobre o mundo.
5 ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
5 Quem pode vencer o mundo? Somente aquele que crê que Jesus é o Filho de Deus.
6 ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
6 Jesus Cristo é aquele que veio com a água do seu batismo e com o sangue da sua morte. Ele veio com a água e com o sangue e não somente com a água. E o próprio Espírito Santo é testemunha de que isso é verdade porque o Espírito é a verdade.
7 ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
7 Há três testemunhas:
8 ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
8 o Espírito, a água e o sangue; e esses três estão de pleno acordo.
9 ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
9 Nós aceitamos o testemunho dos seres humanos, mas o testemunho de Deus tem mais valor. E esse é o testemunho que Deus deu a respeito do seu Filho.
10 ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
10 Aquele que crê no Filho de Deus tem esse testemunho no seu próprio coração. Mas quem não crê em Deus faz de Deus um mentiroso, porque não crê no testemunho que Deus deu a respeito do seu Filho.
11 ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
11 E este é o testemunho: Deus nos deu a vida eterna, e essa vida é nossa por meio do seu Filho.
12 ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
12 Quem tem o Filho tem a vida; quem não tem o Filho de Deus não tem a vida.
13 ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
13 Eu escrevo essas coisas a vocês que creem no Filho de Deus, para que vocês saibam que têm a vida eterna.
14 ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
14 Quando estamos na presença de Deus, temos coragem por causa do seguinte: se pedimos alguma coisa de acordo com a sua vontade, temos a certeza de que ele nos ouve.
15 ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
15 Assim sabemos que ele nos ouve quando lhe pedimos alguma coisa. E, como sabemos que isso é verdade, sabemos também que ele nos dá o que lhe pedimos.
16 ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
16 Se alguém vê o seu irmão cometer algum pecado que não traz a morte, deve orar a Deus, e ele dará a vida a essa pessoa. Isso, no caso de pecados que não trazem a morte. Mas há pecado que traz a morte, e eu não digo que vocês orem a respeito desse pecado.
17 ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
17 Toda maldade é pecado; porém há pecados que não trazem a morte.
18 ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
18 Sabemos que os filhos de Deus não continuam pecando, porque o Filho de Deus os guarda, e o Maligno não pode tocar neles.
19 ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
19 Sabemos que somos de Deus e que o mundo todo está debaixo do poder do Maligno.
20 ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
20 Sabemos também que o Filho de Deus já veio e nos deu entendimento para conhecermos o Deus verdadeiro. A nossa vida está unida com o Deus verdadeiro, unida com o seu Filho, Jesus Cristo. Este é o Deus verdadeiro, e esta é a vida eterna.
21 ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್‌.
21 Meus filhinhos , cuidado com os falsos deuses!

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 João 5, comparar traduções ou montar um estudo — tudo direto pelo WhatsApp.