1 Pedro 1

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
1 Pedro, apóstolo de Jesus Cristo, aos peregrinos da Dispersão no Ponto, Galácia, Capadócia, Ásia e Bitínia.
2 ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
2 eleitos segundo a presciência de Deus Pai, na santificação do Espírito, para a obediência e aspersão do sangue de Jesus Cristo: Graça e paz vos sejam multiplicadas.
3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
3 Bendito seja o Deus e Pai de nosso Senhor Jesus Cristo, que, segundo a sua grande misericórdia, nos regenerou para uma viva esperança, pela ressurreição de Jesus Cristo dentre os mortos,
4 ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
4 para uma herança incorruptível, incontaminável e imarcescível, reservada nos céus para vós,
5 ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
5 que pelo poder de Deus sois guardados, mediante a fé, para a salvação que está preparada para se revelar no último tempo;
6 ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
6 na qual exultais, ainda que agora por um pouco de tempo, sendo necessário, estejais contristados por várias provações,
7 ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
7 para que a prova da vossa fé, mais preciosa do que o ouro que perece, embora provado pelo fogo, redunde para louvor, glória e honra na revelação de Jesus Cristo;
8 ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
8 a quem, sem o terdes visto, amais; no qual, sem agora o verdes, mas crendo, exultais com gozo inefável e cheio de glória,
9 ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
9 alcançando o fim da vossa fé, a salvação das vossas almas.
10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
10 Desta salvação inquiririam e indagaram diligentemente os profetas que profetizaram da graça que para vós era destinada,
11 ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
11 indagando qual o tempo ou qual a ocasião que o Espírito de Cristo que estava neles indicava, ao predizer os sofrimentos que a Cristo haviam de vir, e a glória que se lhes havia de seguir.
12 ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
12 Aos quais foi revelado que não para si mesmos, mas para vós, eles ministravam estas coisas que agora vos foram anunciadas por aqueles que, pelo Espírito Santo enviado do céu, vos pregaram o evangelho; para as quais coisas os anjos bem desejam atentar.
13 ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
13 Portanto, cingindo os lombos do vosso entendimento, sede sóbrios, e esperai inteiramente na graça que se vos oferece na revelação de Jesus Cristo.
14 ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
14 Como filhos obedientes, não vos conformeis às concupiscências que antes tínheis na vossa ignorância;
15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.
15 mas, como é santo aquele que vos chamou, sede vós também santos em todo o vosso procedimento;
16 ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
16 porquanto está escrito: Sereis santos, porque eu sou santo.
17 ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
17 E, se invocais por Pai aquele que, sem acepção de pessoas, julga segundo a obra de cada um, andai em temor durante o tempo da vossa peregrinação,
18 ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
18 sabendo que não foi com coisas corruptíveis, como prata ou ouro, que fostes resgatados da vossa vã maneira de viver, que por tradição recebestes dos vossos pais,
19 ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
19 mas com precioso sangue, como de um cordeiro sem defeito e sem mancha, o sangue de Cristo,
20 ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
20 o qual, na verdade, foi conhecido ainda antes da fundação do mundo, mas manifesto no fim dos tempos por amor de vós,
21 ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
21 que por ele credes em Deus, que o ressuscitou dentre os mortos e lhe deu glória, de modo que a vossa fé e esperança estivessem em Deus.
22 ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
22 Já que tendes purificado as vossas almas na obediência à verdade, que leva ao amor fraternal não fingido, de coração amai-vos ardentemente uns aos outros,
23 ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
23 tendo renascido, não de semente corruptível, mas de incorruptível, pela palavra de Deus, a qual vive e permanece.
24 ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;
24 Porque: Toda a carne é como a erva, e toda a sua glória como a flor da erva. Secou-se a erva, e caiu a sua flor;
25 ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
25 mas a palavra do Senhor permanece para sempre. E esta é a palavra que vos foi evangelizada.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Pedro 1, comparar traduções ou montar um estudo — tudo direto pelo WhatsApp.