1 Reis 15
Kannada Bible (GL_KANNADA) vs NVT
NVT Nova Versão Transformadora
1 ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
1 No décimo oitavo ano do reinado de Jeroboão, filho de Nebate, Abias começou a reinar em Judá.
2 ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
2 Reinou por três anos em Jerusalém. Sua mãe se chamava Maaca e era neta de Absalão.
3 ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
3 Cometeu os mesmos pecados que seu pai e não foi inteiramente fiel ao S enhor , seu Deus, como seu antepassado Davi.
4 ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
4 Mas, por causa de Davi, o S enhor , seu Deus, permitiu que seus descendentes continuassem a brilhar como uma lâmpada em Jerusalém e deu a Abias um filho para reinar depois dele.
5 ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
5 Pois Davi tinha feito o que era certo aos olhos do S enhor e obedecido a seus mandamentos durante toda a vida, exceto no caso de Urias, o hitita.
6 ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
6 Durante todo o reinado de Abias, houve guerra entre Abias e Jeroboão.
7 ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
7 Os demais acontecimentos do reinado de Abias e tudo que ele fez estão registrados no Livro da História dos Reis de Judá . Houve guerra constante entre Abias e Jeroboão.
8 ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.
8 Quando Abias morreu e se reuniu a seus antepassados, foi sepultado na Cidade de Davi. Seu filho Asa foi seu sucessor.
9 ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು.
9 No vigésimo ano do reinado de Jeroboão em Israel, Asa começou a reinar em Judá.
10 ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
10 Reinou em Jerusalém por 41 anos. Sua avó se chamava Maaca e era neta de Absalão.
11 ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
11 Asa fez o que era certo aos olhos do S enhor , como seu antepassado Davi.
12 ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
12 Expulsou da terra os prostitutos cultuais e removeu todos os ídolos que seus antepassados haviam feito.
13 ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
13 Chegou a depor sua avó Maaca da posição de rainha-mãe, pois ela havia feito um poste obsceno para a deusa Aserá. Derrubou esse poste obsceno e o queimou no vale de Cedrom.
14 ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
14 Embora os santuários idólatras não tivessem sido removidos, o coração de Asa permaneceu inteiramente fiel ao S enhor durante toda a sua vida.
15 ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
15 Ele trouxe para o templo do S enhor a prata, o ouro e os diversos utensílios que ele e seu pai haviam consagrado.
16 ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
16 Houve guerra constante entre Asa e Baasa, rei de Israel.
17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
17 Baasa, rei de Israel, invadiu Judá e fortificou Ramá, a fim de impedir que qualquer um entrasse ou saísse do território de Asa, rei de Judá.
18 ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
18 Em resposta, Asa juntou toda a prata e todo o ouro que restavam na tesouraria do templo do S enhor e no palácio real. Enviou alguns de seus oficiais a Ben-Hadade, rei da Síria, que governava em Damasco, filho de Tabrimom e neto de Heziom, com a prata e o ouro e a seguinte mensagem:
19 ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
19 “Façamos um acordo, você e eu, como aquele que houve entre seu pai e o meu. Envio um presente de prata e ouro. Rompa seu acordo com Baasa, rei de Israel, para que ele me deixe em paz”.
20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
20 Ben-Hadade aceitou a proposta do rei Asa e enviou os comandantes de seu exército para atacarem as cidades de Israel. Eles conquistaram Ijom, Dã, Abel-Bete-Maaca e todo o Quinerete, bem como a terra de Naftali.
21 ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
21 Quando Baasa, rei de Israel, soube do que havia acontecido, abandonou seu projeto de fortificar Ramá e permaneceu em Tirza.
22 ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
22 Então o rei Asa decretou que todos os homens de Judá, sem exceção, ajudassem a levar embora as pedras e a madeira usadas por Baasa para fortificar Ramá. Asa empregou esses materiais para fortificar a cidade de Geba, em Benjamim, e a cidade de Mispá.
23 ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
23 Os demais acontecimentos do reinado de Asa, a extensão de seu poder, tudo que ele fez e o nome das cidades que ele construiu, estão registrados no Livro da História dos Reis de Judá . Em sua velhice, sofreu de uma doença nos pés.
24 ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
24 Quando Asa morreu, foi sepultado com seus antepassados na Cidade de Davi. Seu filho Josafá foi seu sucessor.
25 ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
25 Nadabe, filho de Jeroboão, começou a reinar em Israel no segundo ano do reinado de Asa, rei de Judá. Reinou em Israel por dois anos.
26 ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
26 Fez o que era mau aos olhos do S enhor ; seguiu o exemplo de seu pai, Jeroboão, e persistiu nos pecados que ele havia levado Israel a cometer.
27 ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
27 Baasa, filho de Aías, da tribo de Issacar, conspirou contra Nadabe e o assassinou enquanto ele e o exército israelita sitiavam a cidade filisteia de Gibetom.
28 ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
28 Baasa matou Nadabe no terceiro ano do reinado de Asa, rei de Judá, e se tornou seu sucessor.
29 ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
29 Assim que Baasa subiu ao poder, matou todos os descendentes de Jeroboão. Não restou ninguém de sua família, exatamente como o S enhor havia anunciado por meio do profeta Aías, de Siló.
30 ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
30 Isso aconteceu porque Jeroboão havia provocado a ira do S enhor com os pecados que tinha cometido e levado Israel a cometer.
31 ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
31 Os demais acontecimentos do reinado de Nadabe e tudo que ele fez estão registrados no Livro da História dos Reis de Israel .
32 ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
32 Houve guerra constante entre Asa, rei de Judá, e Baasa, rei de Israel.
33 ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.
33 Baasa, filho de Aías, começou a reinar sobre todo o Israel no terceiro ano do reinado de Asa, rei de Judá. Reinou em Tirza por 24 anos.
34 ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
34 Fez o que era mau aos olhos do S enhor ; seguiu o exemplo de Jeroboão e persistiu nos pecados que Jeroboão havia levado Israel a cometer.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 15, comparar traduções ou montar um estudo — tudo direto pelo WhatsApp.