1 Reis 19
Kannada Bible (GL_KANNADA) vs ARC
ARC Almeida Revista e Corrigida 2009
1 ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
1 E Acabe fez saber a Jezabel tudo quanto Elias havia feito e como totalmente matara todos os profetas à espada.
2 ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
2 Então, Jezabel mandou um mensageiro a Elias, a dizer-lhe: Assim me façam os deuses e outro tanto, se decerto amanhã a estas horas não puser a tua vida como a de um deles.
3 ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
3 O que vendo ele, se levantou, e, para escapar com vida, se foi, e veio a Berseba, que é de Judá, e deixou ali o seu moço.
4 ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
4 E ele se foi ao deserto, caminho de um dia, e veio, e se assentou debaixo de um zimbro; e pediu em seu ânimo a morte e disse: Já basta, ó Senhor ; toma agora a minha vida, pois não sou melhor do que meus pais.
5 ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
5 E deitou-se e dormiu debaixo de um zimbro; e eis que, então, um anjo o tocou e lhe disse: Levanta-te e come.
6 ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
6 E olhou, e eis que à sua cabeceira estava um pão cozido sobre as brasas e uma botija de água; e comeu, e bebeu, e tornou a deitar-se.
7 ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
7 E o anjo do Senhor tornou segunda vez, e o tocou, e disse: Levanta-te e come, porque mui comprido te será o caminho.
8 ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
8 Levantou-se, pois, e comeu, e bebeu, e, com a força daquela comida, caminhou quarenta dias e quarenta noites até Horebe, o monte de Deus.
9 ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
9 E ali entrou numa caverna e passou ali a noite; e eis que a palavra do Senhor veio a ele e lhe disse: Que fazes aqui, Elias?
10 ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
10 E ele disse: Tenho sido muito zeloso pelo Senhor , Deus dos Exércitos, porque os filhos de Israel deixaram o teu concerto, derribaram os teus altares e mataram os teus profetas à espada; e eu fiquei só, e buscam a minha vida para ma tirarem.
11 ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.
11 E ele lhe disse: Sai para fora e põe-te neste monte perante a face do Senhor . E eis que passava o Senhor , como também um grande e forte vento, que fendia os montes e quebrava as penhas diante da face do Senhor ; porém o Senhor não estava no vento; e, depois do vento, um terremoto; também o Senhor não estava no terremoto;
12 ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.
12 e, depois do terremoto, um fogo; porém também o Senhor não estava no fogo; e, depois do fogo, uma voz mansa e delicada.
13 ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
13 E sucedeu que, ouvindo-a Elias, envolveu o seu rosto na sua capa, e saiu para fora, e pôs-se à entrada da caverna; e eis que veio a ele uma voz, que dizia: Que fazes aqui, Elias?
14 ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
14 E ele disse: Eu tenho sido em extremo zeloso pelo Senhor , Deus dos Exércitos, porque os filhos de Israel deixaram o teu concerto, derribaram os teus altares e mataram os teus profetas à espada; e eu fiquei só, e buscam a minha vida para ma tirarem.
15 ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
15 E o Senhor lhe disse: Vai, volta pelo teu caminho para o deserto de Damasco, vem e unge a Hazael rei sobre a Síria.
16 ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
16 Também a Jeú, filho de Ninsi, ungirás rei de Israel e também Eliseu, filho de Safate, de Abel-Meolá, ungirás profeta em teu lugar.
17 ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
17 E há de ser que o que escapar da espada de Hazael, matá-lo-á Jeú; e o que escapar da espada de Jeú, matá-lo-á Eliseu.
18 ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
18 Também eu fiz ficar em Israel sete mil: todos os joelhos que se não dobraram a Baal, e toda boca que o não beijou.
19 ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
19 Partiu, pois, Elias dali e achou a Eliseu, filho de Safate, que andava lavrando com doze juntas de bois adiante dele; e ele estava com a duodécima. Elias passou por ele e lançou a sua capa sobre ele.
20 ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.
20 Então, deixou ele os bois, e correu após Elias, e disse: Deixa-me beijar a meu pai e a minha mãe e, então, te seguirei. E ele lhe disse: Vai e volta; porque que te tenho eu feito?
21 ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
21 Voltou, pois, de atrás dele, e tomou uma junta de bois, e os matou, e, com os aparelhos dos bois, cozeu as carnes, e as deu ao povo, e comeram. Então, se levantou, e seguiu a Elias, e o servia.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 19, comparar traduções ou montar um estudo — tudo direto pelo WhatsApp.