1 Reis 3

Kannada Bible (GL_KANNADA) vs NTLH

Sair da comparação
NTLH Nova Tradução na Linguagem de Hoje 2000
1 ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
1 Salomão fez um acordo com Faraó, rei do Egito, casando com a sua filha. Ele a levou para morar na Cidade de Davi até que acabasse a construção do seu palácio e a construção do Templo e das muralhas em volta de Jerusalém.
2 ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
2 Ainda não havia sido construído um templo para Deus, o Senhor , e por isso o povo ainda continuava oferecendo sacrifícios em vários altares, nos montes.
3 ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
3 Salomão amava o Senhor e seguia os conselhos de Davi, seu pai, mas também matava animais e os oferecia em sacrifício em vários altares, nos montes.
4 ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
4 Certa vez, Salomão foi a Gibeão oferecer sacrifícios porque naquele lugar estava o altar mais famoso de todos. No passado ele havia queimado ali mil animais como sacrifício a Deus.
5 ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
5 Naquela noite, o Senhor Deus apareceu num sonho a Salomão e perguntou: — O que você quer que eu lhe dê?
6 ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
6 Ele respondeu: — Tu sempre mostraste grande amor por Davi, meu pai, teu
7 ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
7 Ó Senhor Deus, tu deixaste que eu ficasse como rei no lugar do meu pai, embora eu seja muito jovem e não saiba governar.
8 ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
8 Aqui estou eu no meio do povo que escolheste para ser teu, um povo que é tão numeroso, que nem pode ser contado.
9 ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
9 Portanto, dá-me sabedoria para que eu possa governar o teu povo com justiça e saber a diferença entre o bem e o mal. Se não for assim, como é que eu poderei governar este teu grande povo?
10 ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.
10 Deus gostou de Salomão ter pedido isso
11 ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
11 e disse: — Já que você pediu sabedoria para governar com justiça, em vez de pedir vida longa, ou riquezas, ou a morte dos seus inimigos,
12 ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
12 eu darei o que você pediu. Darei a você sabedoria e inteligência, como ninguém teve antes de você, nem terá depois.
13 ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
13 Mas lhe darei também o que não pediu: durante toda a sua vida, você terá riquezas e honras, mais do que qualquer outro rei.
14 ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
14 E, se você me obedecer e guardar as minhas leis e os meus mandamentos, como fez Davi, o seu pai, eu lhe darei uma vida longa.
15 ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
15 Quando acordou, Salomão compreendeu que Deus havia falado com ele no sonho. Então foi para Jerusalém, ficou diante da arca da aliança e apresentou a Deus ofertas de paz e sacrifícios que foram completamente queimados. Depois deu uma festa para todas as autoridades.
16 ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
16 Certo dia, duas prostitutas apresentaram-se diante do rei Salomão,
17 ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
17 e uma delas disse: — Ó rei Salomão! Eu e esta mulher moramos na mesma casa. Eu dei à luz um menino, e ela estava lá comigo.
18 ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು.
18 Dois dias depois do nascimento do meu filho, ela também deu à luz um menino. Somente nós duas estávamos na casa; não havia mais ninguém lá.
19 ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು.
19 Uma noite, ela rolou sem querer sobre o seu filho e o sufocou.
20 ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.
20 Então levantou-se durante a noite, enquanto eu dormia, pegou o meu filho e o colocou na cama dela. Depois colocou o menino morto nos meus braços.
21 ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.
21 No outro dia de manhã, quando eu me levantei para dar de mamar ao meu filho, vi que estava morto. Porém, quando reparei bem, percebi que não era o meu filho.
22 ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು.
22 Mas a outra mulher disse: — Não é verdade. Pelo contrário, meu filho é o que está vivo, e o seu é o que está morto! E a primeira mulher respondeu: — Não é, não! A criança morta é a sua, e a viva é a minha! E foi assim que discutiram na frente do rei.
23 ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
23 Então o rei Salomão disse: — Cada uma de vocês diz que a criança viva é a sua, e que a morta é da outra.
24 ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.
24 Então mandou buscar uma espada e, quando a trouxeram,
25 ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು.
25 disse: — Cortem a criança viva pelo meio e deem metade para cada uma destas mulheres.
26 ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
26 A verdadeira mãe do menino, com o coração cheio de amor pelo filho, disse: — Por favor, senhor, não mate o meu filho! Entregue-o a esta mulher! Mas a outra disse: — Podem cortá-lo em dois pedaços! Assim ele não será nem meu nem seu.
27 ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.
27 Aí Salomão disse: — Não matem a criança! Entreguem o menino à primeira mulher porque ela é a mãe dele.
28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
28 Todo o povo de Israel soube dessa decisão do rei Salomão, e aí todos sentiram um grande respeito por ele, pois viram que Deus lhe tinha dado sabedoria para julgar com justiça.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Reis 3, comparar traduções ou montar um estudo — tudo direto pelo WhatsApp.