1 Reis 5
Kannada Bible (GL_KANNADA) vs BKJ
BKJ BKJ
1 ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
1 E Hirão, o rei de Tiro, enviou os seus servos até Salomão; porque ele havia ouvido que lhe haviam ungido rei no lugar do seu pai; porquanto Hirão sempre teve amizade por Davi.
2 ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--
2 E Salomão enviou a Hirão, dizendo:
3 ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
3 Tu sabes que Davi, o meu pai, não pôde edificar uma casa para o nome do SENHOR seu Deus, por causa das guerras que estiveram junto a ele por todos os lados, até que o SENHOR os colocou debaixo das solas dos seus pés.
4 ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.
4 Agora, porém, o SENHOR meu Deus me deu descanso em todos os lados, de forma que não há nem adversário, nem mal que ocorra.
5 ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
5 E, eis que me proponho a construir uma casa para o nome do SENHOR meu Deus, como o SENHOR falou a Davi, o meu pai, dizendo: O teu filho, sobre quem porei no teu trono, em teu lugar, ele edificará uma casa para o meu nome.
6 ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
6 Agora, portanto, ordena que eles me cortem cedros do Líbano; e os meus servos serão com os teus servos; e a ti darei o salário dos teus servos segundo tudo o que indicares; porquanto tu sabes que não há entre nós nenhum que possa talhar a madeira com a destreza dos sidônios.
7 ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
7 E sucedeu, quando Hirão ouviu as palavras de Salomão, que ele se regozijou grandemente, e disse: Bendito seja o SENHOR neste dia, que deu a Davi um filho sábio sobre este grande povo.
8 ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
8 E Hirão enviou a Salomão, dizendo: Eu tenho considerado as coisas que enviaste para mim; e cumprirei todo o teu desejo acerca da madeira de cedro, e acerca da madeira de cipreste.
9 ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
9 Os meus servos lhes farão descer do Líbano até o mar; e eu os transportarei pelo mar em jangadas até o local que tu me indicares, e farei com que elas sejam ali descarregadas, e tu as receberás; e tu atenderás o meu desejo, ao dares alimento para a minha casa.
10 ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
10 Assim, Hirão deu a Salomão árvores de cedro e de cipreste segundo todo o seu desejo.
11 ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
11 E Salomão deu a Hirão vinte medidas de trigo como alimento para a sua casa, e vinte medidas de azeite puro; assim dava Salomão a Hirão ano a ano.
12 ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
12 E o SENHOR deu sabedoria a Salomão, como lhe prometeu; e houve paz entre Hirão e Salomão; e os dois celebraram um pacto juntos.
13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು.
13 E o rei Salomão levantou uma leva de gente oriunda de todo o Israel; e a leva era de trinta mil homens.
14 ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
14 E ele os enviou para o Líbano, dez mil por mês, em alternância; um mês eles estavam no Líbano, e dois meses em casa; e Adonirão estava sobre a leva.
15 ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
15 E Salomão tinha setenta mil que levavam as cargas, e oitenta mil serradores nos montes;
16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
16 além do chefe dos oficiais de Salomão que estavam acima do trabalho, três mil e trezentos, os quais dominavam sobre o povo que trabalhava na obra.
17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ ಬೆಲೆಯುಳ್ಳ ಕಲ್ಲುಗಳನ್ನೂ ಮನೆಯ ಅಸ್ತಿವಾರವನ್ನು ಹಾಕಲು ಕಟ್ಟಿದ ಕಲ್ಲುಗಳನ್ನೂ ತಂದರು.
17 E o rei ordenou, e trouxeram pedras grandes, pedras caras, e pedras talhadas, para a fundação da casa.
18 ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
18 E os construtores de Salomão e os construtores de Hirão, talhavam tanto a elas, quanto os que preparavam as pedras quadradas; assim eles prepararam a madeira e as pedras para a construção da casa.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 5, comparar traduções ou montar um estudo — tudo direto pelo WhatsApp.