1 Reis 8
Kannada Bible (GL_KANNADA) vs BKJ
BKJ BKJ
1 ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.
1 Então Salomão reuniu os anciãos de Israel, e todos os cabeças das tribos, os chefes dos pais dos filhos de Israel, diante do rei Salomão em Jerusalém, para que eles pudessem fazer subir a arca do pacto do SENHOR para fora da cidade de Davi, que é Sião.
2 ಏಳನೇ ತಿಂಗಳಾದ ಏತಾನೀಮ್ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.
2 E todos os homens de Israel se reuniram diante do rei Salomão na festa no mês de Etanim, que é o sétimo mês.
3 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
3 E vieram todos os anciãos de Israel, e os sacerdotes ergueram a arca.
4 ಯಾಜಕರೂ ಲೇವಿಯರೂ ಇವುಗಳನ್ನು ತಂದರು.
4 E trouxeram a arca do SENHOR, e o tabernáculo da congregação, e todos os vasos santos que estavam no tabernáculo, assim os trouxeram para cima os sacerdotes e os levitas.
5 ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.
5 E o rei Salomão, e toda a congregação de Israel, que estavam reunidos com ele, estiveram diante da arca, sacrificando ovelhas e bois, que não podiam ser contados ou enumerados por causa da sua multidão.
6 ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.
6 E os sacerdotes trouxeram a arca do pacto do SENHOR até ao seu lugar, dentro do oráculo da casa, ao lugar santíssimo, bem debaixo das asas dos querubins.
7 ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
7 Porquanto os querubins estendiam as suas duas asas sobre o lugar da arca, e os querubins cobriam a arca e as suas hastes pelo alto.
8 ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
8 E eles removeram as hastes, de forma que as extremidades das hastes eram vistas fora, no lugar santo na frente do oráculo, e não eram vistas na parte de fora; e ali estão até este dia.
9 ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
9 Não havia nada na arca, salvo as duas tábuas de pedra, as quais Moisés ali colocou em Horebe, quando o SENHOR fez um pacto com os filhos de Israel, quando eles saíram da terra do Egito.
10 ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.
10 E sucedeu, quando os sacerdotes haviam saído do lugar santo, que a nuvem encheu a casa do SENHOR,
11 ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
11 de tal modo que os sacerdotes não conseguiam ficar de pé para ministrar por causa da nuvem; porque a glória do SENHOR havia enchido a casa do SENHOR.
12 ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
12 Então, falou Salomão: O SENHOR disse que habitaria na profunda escuridão.
13 ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
13 Seguramente edifiquei para ti uma casa para nela habitares, um lugar firme para habitares eternamente.
14 ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
14 E o rei virou a sua face, e abençoou toda a congregação de Israel; e toda a congregação de Israel se pôs de pé;
15 ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--
15 e disse: Bendito seja o SENHOR de Israel, o qual falou com a sua boca a Davi, o meu pai, e, pela sua mão o cumpriu, dizendo:
16 ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
16 Desde o dia em que retirei o meu povo Israel do Egito, não escolhi cidade alguma de todas as tribos de Israel para edificar uma casa, a fim de que o meu nome pudesse nela estar; mas escolhi Davi para estar sobre o meu povo, Israel.
17 ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
17 E estava no coração de Davi, o meu pai, edificar uma casa para o nome do SENHOR Deus de Israel.
18 ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
18 E o SENHOR disse a Davi, o meu pai: Porquanto estava no teu coração edificar uma casa para o meu nome, fizeste bem ao teres isto no teu coração.
19 ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
19 Todavia não edificarás a casa; mas o teu filho que sairá dos teus lombos, ele edificará a casa para o meu nome.
20 ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
20 E o SENHOR cumpriu a sua palavra que falou, e me levantei no lugar de Davi, o meu pai, e me assentei no trono de Israel, como o SENHOR prometeu, e edifiquei uma casa para o nome do SENHOR Deus de Israel.
21 ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.
21 E pus ali um lugar para a arca, no qual está o pacto do SENHOR, o qual ele fez com os nossos pais, quando os retirou da terra do Egito.
22 ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
22 E Salomão se pôs de pé diante do altar do SENHOR na presença de toda a congregação de Israel, e estendeu as suas mãos em direção ao céu;
23 ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,
23 e ele disse: SENHOR, Deus de Israel, não há Deus como tu, no céu acima, nem na terra abaixo, que guarda o pacto e a misericórdia para com os teus servos que andam diante de ti com todo o seu coração;
24 ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
24 que tem guardado com o teu servo Davi, o meu pai, como lhe prometeste; tu falaste também com a tua boca, e com a tua mão o cumpriste, como é neste dia.
25 ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
25 Portanto, agora, SENHOR Deus de Israel, guarda com o teu servo Davi, o meu pai, como lhe prometeste, dizendo: Não te faltará um homem no trono de Israel; de modo que os teus filhos atentem ao seu caminho, que andem diante de mim como tu tens caminhado diante de mim.
26 ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
26 E, agora, ó Deus de Israel, rogo-te, cumpra-se a tua palavra que falaste a teu servo Davi, meu pai.
27 ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
27 Todavia, habitará verdadeiramente Deus na terra? Eis que, o céu e o céu dos céus não podem te conter; tanto menos esta casa que eu tenho edificado?
28 ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
28 Contudo, tem tu respeito pela oração do teu servo, e pela sua súplica, ó SENHOR meu Deus, para atentarem ao clamor e a oração, a qual o teu servo suplica diante de ti hoje;
29 ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
29 para que os teus olhos noite e dia possam estar abertos em direção a esta casa em direção ao lugar do qual tens dito: O meu nome estará ali; para que possas ouvir a oração que o teu servo fará em direção a este lugar.
30 ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
30 E ouve a súplica do teu servo, e do teu povo Israel, quando eles orarem em direção a este lugar; e ouve tu no céu, o teu lugar de habitação; e, quando ouvires, perdoa.
31 ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ
31 Se qualquer homem transgredir contra o seu próximo, e lançado um juramento sobre ele para fazer com que ele blasfeme, e o juramento chegar diante do teu altar nesta casa;
32 ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
32 ouve no céu, move-te, e julga os teus servos, condenando ao ímpio, para fazeres recair o seu proceder sobre sua cabeça, e justificando ao justo, para lhe retribuíres segundo a sua justiça.
33 ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
33 Quando o teu povo, Israel, for abatido diante do inimigo, por terem pecado contra ti, e retornar a ti, e confessar o teu nome, e orar, e fizer súplica a ti nesta casa;
34 ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
34 então, ouve tu no céu, e perdoa o pecado do teu povo, Israel, e traz-lhe de volta para a terra que tu deste aos seus pais.
35 ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ
35 Quando o céu estiver recolhido, e não houver chuva, por terem pecado contra ti; se orarem em direção a este lugar, e confessarem o teu nome, e se converterem do seu pecado, quando tu os afligires;
36 ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
36 então, ouve tu no céu, e perdoa o pecado dos teus servos, e do teu povo, Israel, ensinando-lhes o bom caminho no qual eles devem caminhar, e dês chuva sobre a tua terra, a qual deste ao teu povo como herança.
37 ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
37 Se houver na terra fome, se houver peste, crestamento, mofo, locusta, ou se houver lagarta; se o seu inimigo o cercar na terra das suas cidades; qualquer praga, qualquer enfermidade que houver.
38 ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
38 Qualquer forma de oração e súplica que for feita por qualquer homem, ou por todo o teu povo, Israel, cada homem que conhecer a praga do seu próprio coração, e estender as suas mãos em direção a esta casa;
39 ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,
39 então, ouve tu no céu, o teu lugar de habitação, e perdoa, e faz, e concede a cada homem, cujo coração conheces, conforme os seus caminhos; (pois tu, somente tu, conheces os corações de todos os filhos dos homens);
40 ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
40 para que eles possam te temer todos os dias em que viverem na terra que tu deste aos nossos pais.
41 ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
41 Além disso, acerca de um estrangeiro que não for do teu povo Israel, quando sair de uma região distante por causa do teu nome;
42 ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.
42 (porque eles ouvirão do teu grande nome, e da tua mão forte, e do teu braço estendido); quando ele vier e orar na direção desta casa;
43 ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
43 ouve tu no céu, o teu lugar de habitação, e faz segundo tudo o que o estrangeiro te clamar; para que todos os povos da terra possam conhecer o teu nome, temer-te como faz o teu povo, Israel; e que eles possam saber que esta casa, a qual edifiquei, é chamada pelo teu nome.
44 ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
44 Se o teu povo sair à batalha contra o seu inimigo, para onde quer que os enviares, e orarem ao SENHOR em direção à cidade que tu escolheste, e em direção à casa que edifiquei para o teu nome;
45 ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
45 então, ouve tu no céu a sua oração e a sua súplica, e sustenta a sua causa.
46 ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
46 Se eles pecarem contra ti, (pois não há homem que não peque) e tu estiveres irado com eles, e os entregares ao inimigo, de modo que esses os levem cativos para a terra do inimigo, longe ou perto;
47 ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
47 se na terra para onde foram levados cativos, eles tornarem em si, e se arrependerem, e fizerem súplica a ti na terra daqueles que os levaram cativos, dizendo: Temos pecado, e temos agido perversamente, temos cometido iniquidade;
48 ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
48 e assim retornarem a ti com todo o seu coração, e com toda a sua alma, na terra dos seus inimigos, o qual os levou cativos, e orarem a ti em direção à sua terra, a qual deste aos seus pais, à cidade que tu escolheste, e à casa que edifiquei para o teu nome;
49 ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
49 então, ouve tu a sua oração e a sua súplica no céu, o teu lugar de habitação, e sustenta a sua causa,
50 ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
50 e perdoa o teu povo que pecou contra ti, e todas as transgressões com as quais eles transgrediram contra ti, e dá-lhes compaixão diante daqueles que os levaram cativos, para que possam ter compaixão deles;
51 ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
51 porque eles são o teu povo, e a tua herança, que tiraste do Egito, do meio da fornalha de ferro;
52 ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,
52 para que os teus olhos possam estar abertos à súplica do teu servo, e à súplica do teu povo, Israel, para atentares a eles em tudo o que a ti clamarem.
53 ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
53 Porque tu os separaste dentre todos os povos da terra, para serem a tua herança, como falaste pela mão de Moisés, o teu servo, quando retiraste os nossos pais do Egito, ó SENHOR Deus.
54 ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.
54 E foi assim que, quando Salomão terminou de orar toda esta oração e súplica ao SENHOR, ele se levantou da frente do altar do SENHOR, onde estava ajoelhado, com as suas mãos estendidas ao céu.
55 ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
55 E ele se pôs de pé, e abençoou toda a congregação de Israel em voz alta, dizendo:
56 ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
56 Bendito seja o SENHOR, que tem dado descanso para o seu povo, Israel, segundo tudo o que prometeu; não tem falhado nenhuma palavra de toda a sua boa promessa, a qual ele prometeu pela mão de Moisés, o seu servo.
57 ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
57 O SENHOR, nosso Deus, seja conosco, assim como esteve com os nossos pais; que ele não nos deixe, nem nos abandone;
58 ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.
58 para que possa inclinar os nossos corações a ele, para andarmos em todos os seus caminhos, e para guardarmos os seus mandamentos, os seus estatutos e os seus juízos, os quais ele ordenou aos nossos pais.
59 ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ
59 E que estas minhas palavras, com as quais fiz súplica diante do SENHOR, estejam próximas do SENHOR nosso Deus dia e noite, que ele sustente a causa do seu servo, e a causa do seu povo, Israel, em todos os tempos, de acordo com o que precisarem;
60 ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
60 que todo o povo da terra possa saber que o SENHOR é Deus, e que não há nenhum outro.
61 ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
61 Que o vosso coração, portanto, seja perfeito diante do SENHOR nosso Deus, para andardes nos seus estatutos e para guardar os seus mandamentos, como neste dia.
62 ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
62 E o rei, e com ele todo o Israel, ofereceu sacrifício diante do SENHOR.
63 ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
63 E Salomão ofereceu um sacrifício de ofertas de paz, o qual ele ofereceu ao SENHOR vinte e dois mil bois, e cento e vinte mil ovelhas. Assim, o rei e todos os filhos de Israel dedicaram a casa do SENHOR.
64 ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
64 No mesmo dia o rei consagrou o meio do pátio que havia diante da casa do SENHOR; porquanto ali ele ofereceu ofertas queimadas, e ofertas de alimento, e a gordura das ofertas de paz; porque o altar de bronze que estava diante do SENHOR era demasiadamente pequeno para receber as ofertas queimadas, e as ofertas de alimento, e a gordura das ofertas de paz.
65 ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.
65 E, naquele tempo, Salomão fez uma festa, e com ele todo o Israel, uma grande congregação, desde a entrada de Hamate até o rio do Egito, diante do SENHOR nosso Deus, por sete dias, e mais sete dias, a saber, catorze dias.
66 ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
66 No oitavo dia ele despediu o povo; e eles bendisseram o rei, e foram até as suas tendas alegres e contentes de coração por toda a bondade que o SENHOR havia feito a Davi, o seu servo, e a Israel, o seu povo.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Reis 8, comparar traduções ou montar um estudo — tudo direto pelo WhatsApp.