1 Samuel 10

Kannada Bible (GL_KANNADA) vs NVI

Sair da comparação
NVI Nova Versão Internacional
1 ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
1 Então Samuel apanhou um jarro de óleo, derramou-o sobre a cabeça de Saul e o beijou, dizendo: "O Senhor o tem ungido como líder da herança dele.
2 ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
2 Hoje, quando você partir, encontrará dois homens perto do túmulo de Raquel, em Zelza, na fronteira de Benjamim. Eles lhe dirão: ‘As jumentas que você foi procurar já foram encontradas. Agora seu pai deixou de se importar com elas e está preocupado com vocês. Ele está perguntando: "Como encontrarei meu filho? "
3 ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
3 Então, dali, você prosseguirá para o carvalho de Tabor. Três homens virão subindo ao santuário de Deus em Betel, e encontrarão você ali. Um estará levando três cabritos, outro três pães, e outro uma vasilha de couro cheia de vinho.
4 ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
4 Eles o cumprimentarão e lhe oferecerão dois pães, que você deve aceitar.
5 ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
5 Depois você irá a Gibeá de Deus, onde há um destacamento filisteu. Ao chegar à cidade, você encontrará um grupo de profetas descendo do altar no monte tocando liras, tamborins, flautas e harpas; e eles estarão profetizando.
6 ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
6 O Espírito do Senhor se apossará de você, e com eles você profetizará em transe, e será um novo homem.
7 ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
7 Assim que esses sinais tiverem se cumprido, faça o que achar melhor, pois Deus está com você.
8 ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
8 Vá na minha frente até Gilgal. Depois eu irei também, para oferecer holocaustos e sacrifícios de comunhão, mas você deve esperar sete dias, até que eu chegue e lhe diga o que fazer".
9 ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
9 Quando se virou para afastar-se de Samuel, Deus mudou o coração de Saul, e todos esses sinais se cumpriram naquele dia.
10 ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
10 Chegando em Gibeá, um grupo de profetas o encontrou; o Espírito de Deus se apossou dele, e ele profetizou em transe no meio deles.
11 ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
11 Quando os que já o conheciam viram-no profetizando com os profetas, perguntaram uns aos outros: "O que aconteceu ao filho de Quis? Saul também está entre os profetas? "
12 ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
12 Um homem daquele lugar respondeu: "E quem é o pai deles? " De modo que isto se tornou um ditado: "Saul também está entre os profetas? "
13 ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
13 Depois que Saul parou de profetizar, foi para o altar no monte.
14 ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
14 Então o tio de Saul perguntou a ele e ao seu servo: "Aonde vocês foram? " Ele respondeu: "Procurar as jumentas. Quando, porém, vimos que não seriam encontradas, fomos falar com Samuel".
15 ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
15 "O que Samuel lhe disse? ", perguntou o tio.
16 ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
16 Saul respondeu: "Ele nos garantiu que as jumentas tinham sido encontradas". Todavia, Saul não contou ao tio o que Samuel tinha dito sobre o reino.
17 ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
17 Samuel convocou o povo de Israel ao Senhor, em Mispá,
18 ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
18 e lhes disse: "Assim diz o Senhor, o Deus de Israel: ‘Eu tirei Israel do Egito, e libertei vocês do poder do Egito e de todos os reinos que os oprimiam’.
19 ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
19 Mas vocês agora rejeitaram o Deus que os salva de todas as suas desgraças e angústias. E disseram: ‘Não! Escolhe um rei para nós’. Por isso, agora, apresentem-se perante o Senhor, de acordo com as suas tribos e clãs".
20 ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
20 Tendo Samuel feito todas as tribos de Israel se aproximarem, a de Benjamim foi escolhida.
21 ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
21 Então fez ir à frente a tribo de Benjamim, clã por clã, e o clã de Matri foi escolhido. Finalmente foi escolhido Saul, filho de Quis. Quando, porém, o procuraram, ele não foi encontrado.
22 ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
22 Então consultaram novamente o Senhor: "Ele já chegou? " E o Senhor disse: "Sim, ele está escondido no meio da bagagem".
23 ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
23 Então correram e o tiraram de lá. Quando ficou de pé no meio do povo; os mais altos do povo batiam-lhe nos ombros.
24 ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
24 E Samuel disse a todos: "Vocês vêem o homem que o Senhor escolheu? Não há ninguém como ele entre todo o povo". Então todos gritaram: "Viva o rei! "
25 ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
25 Samuel expôs ao povo as leis do reino. Ele as escreveu num livro e o pôs perante o Senhor. Então Samuel mandou o povo de volta para suas casas.
26 ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.
26 Saul também foi para sua casa em Gibeá, acompanhado por guerreiros, cujos corações Deus tinha tocado.
27 ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
27 Alguns vadios, porém, disseram: "Como este homem pode nos salvar? " Desprezaram-no e não lhe trouxeram presente algum. Mas Saul ficou calado.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 10, comparar traduções ou montar um estudo — tudo direto pelo WhatsApp.