1 Samuel 13

Kannada Bible (GL_KANNADA) vs NVI

Sair da comparação
NVI Nova Versão Internacional
1 ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.
1 Saul tinha trinta anos de idade quando começou a reinar, e reinou sobre Israel quarenta e dois anos.
2 ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
2 Saul escolheu três mil homens de Israel; dois mil ficaram com ele em Micmás e nos montes de Betel, e mil ficaram com Jônatas em Gibeá de Benjamim. O restante dos homens ele mandou de volta para suas tendas.
3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
3 Jônatas atacou os destacamentos dos filisteus em Gibeá, e os filisteus foram informados disso. Então Saul mandou tocar a trombeta por todo o país dizendo: "Que os hebreus fiquem sabendo disto! "
4 ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
4 E todo Israel ouviu a notícia de que Saul tinha atacado o destacamento dos filisteus atraindo o ódio dos filisteus sobre Israel. Então os homens foram convocados para se unirem a Saul em Gilgal.
5 ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
5 Os filisteus reuniram-se para lutar contra Israel, com três mil carros de guerra, seis mil condutores de carros e tantos soldados quanto a areia da praia. Eles foram a Micmás, a leste de Bete-Áven e lá acamparam.
6 ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
6 Quando os soldados de Israel viram que a situação era difícil e que seu exército estava sendo muito pressionado, esconderam-se em cavernas e buracos, entre as rochas e em poços e cisternas.
7 ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್‌ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
7 Alguns hebreus até atravessaram o Jordão para chegar à terra de Gade e de Gileade. Saul ficou em Gilgal, e os soldados que estavam com ele tremiam de medo.
8 ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
8 Ele esperou sete dias, o prazo estabelecido por Samuel; mas este não chegou a Gilgal, e os soldados de Saul começaram a se dispersar.
9 ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
9 Então ele ordenou: "Tragam-me o holocausto e os sacrifícios de comunhão". Saul ofereceu então o holocausto,
10 ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.
10 e quando ele terminou de oferecê-lo, Samuel chegou, e Saul foi saudá-lo.
11 ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
11 E perguntou-lhe Samuel: "O que você fez? " Saul respondeu: "Quando vi que os soldados estavam se dispersando e que você não tinha chegado no prazo estabelecido e que os filisteus estavam reunidos em Micmás,
12 ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
12 pensei: ‘Agora, os filisteus me atacarão em Gilgal, e eu não busquei o Senhor’. Por isso senti-me obrigado a oferecer o holocausto".
13 ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
13 Disse Samuel: "Você agiu como tolo, desobedecendo ao mandamento que o Senhor seu Deus lhe deu; se você tivesse obedecido, ele teria estabelecido para sempre o seu reinado sobre Israel.
14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
14 Mas agora seu reinado não permanecerá; o Senhor procurou um homem segundo o seu coração e o designou líder de seu povo, pois você não obedeceu ao mandamento do Senhor".
15 ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.
15 Então Samuel partiu de Gilgal e foi a Gibeá de Benjamim, e Saul contou soldados que estavam com ele. Eram cerca de seiscentos.
16 ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
16 Saul e seu filho Jônatas, acompanhados de seus soldados, ficaram em Gibeá de Benjamim, enquanto os filisteus estavam acampados em Micmás.
17 ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ದೇಶದ ಕಡೆಗೆ ಹೋಯಿತು;
17 Uma tropa de ataque saiu do acampamento filisteu em três divisões. Uma foi em direção a Ofra, nos arredores de Sual,
18 ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್‌ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
18 outra para Bete-Horom, e a terceira para a região fronteiriça de onde se avista o vale de Zeboim, diante do deserto.
19 ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್‌ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
19 Naquela época não havia nem mesmo um único ferreiro em toda a terra de Israel, pois os filisteus não queriam que os hebreus fizessem espadas e lanças.
20 ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು.
20 Assim, eles tinham que ir aos filisteus para afiar seus arados, enxadas, machados e foices.
21 ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
21 O preço para afiar rastelos e enxadas era oito gramas de prata, e quatro gramas de prata para afiar tridentes, machados e pontas de aguilhadas.
22 ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.
22 Por isso no dia da batalha nenhum soldado de Saul e Jônatas tinha espada ou lança nas mãos, exceto o próprio Saul e seu filho Jônatas.
23 ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
23 Aconteceu que um destacamento filisteu foi para o desfiladeiro de Micmás.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 13, comparar traduções ou montar um estudo — tudo direto pelo WhatsApp.