1 Samuel 15
Kannada Bible (GL_KANNADA) vs VC
VC Versão Católica
1 ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
1 Samuel disse a Saul: O Senhor enviou-me para que te consagrasse rei de seu povo de Israel. Ouve agora o que diz o Senhor.
2 ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
2 Assim fala o Senhor dos exércitos: Vou pedir contas a Amalec do que ele fez a Israel, opondo-se-lhe no caminho, quando saiu do Egito.
3 ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
3 Vai, pois, fere Amalec e vota ao interdito tudo o que lhe pertence, sem nada poupar: matarás homens e mulheres, crianças e meninos de peito, bois e ovelhas, camelos e jumentos.
4 ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
4 Saul comunicou isso ao povo e fez o seu recenseamento em Telaim: havia duzentos mil homens de Israel e dez mil de Judá.
5 ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
5 Saul avançou até a cidade de Amalec e pôs-se de emboscada no vale.
6 ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
6 Disse aos cineus: Retirai-vos, separai-vos dos amalecitas, não suceda que eu vos envolva com eles {no massacre}, porque tratastes bem os israelitas quando saíram do Egito. E os cineus separaram-se dos amalecitas.
7 ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
7 Saul bateu os amalecitas desde Hévila até Sur, que está ao oriente do Egito.
8 ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
8 Tomou vivo Agag, rei de Amalec, e votou todo o povo ao interdito, passando-o ao fio da espada.
9 ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
9 Mas Saul e seus homens pouparam a Agag assim como o melhor do rebanho miúdo e do grande, os animais cevados e os cordeiros, e tudo o que havia de melhor; não quiseram votá-los ao interdito. Só exterminaram o que era ordinário e sem valor.
10 ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
10 O Senhor disse a Samuel:
11 ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
11 Arrependo-me de ter feito rei a Saul; ele se desviou de mim e não executou as minhas ordens. Samuel irritou-se com isso, e clamou ao Senhor durante toda a noite.
12 ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
12 Na manhã seguinte, indo ao encontro de Saul, alguém veio dizer-lhe: Saul chegou ao Carmelo e erigiu ali uma estela, retomando em seguida o seu caminho para Gálgala.
13 ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
13 Samuel foi ter com ele; Saul disse-lhe: Deus te abençoe! Cumpri, a ordem do Senhor.
14 ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
14 Samuel disse-lhe: Mas que balidos de ovelhas são esses que ressoam aos meus ouvidos, e esses mugidos de gado que ouço?
15 ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
15 É a presa tomada aos amalecitas, respondeu Saul. O povo poupou o melhor das ovelhas e dos bois para os sacrificar ao Senhor, teu Deus; o resto, votamo-lo ao interdito.
16 ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
16 Samuel disse-lhe: Basta! vou cientificar-te do que o Senhor me disse esta noite. Fala, disse Saul.
17 ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
17 E Samuel: Por pequeno que foste aos teus próprios olhos, acaso não te tornaste o chefe das tribos de Israel, e não te consagrou o Senhor, rei de Israel?
18 ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
18 O Senhor te havia dado uma ordem, e te havia dito que votasses ao interdito esses pecadores, os amalecitas, combatendo-os até o completo extermínio.
19 ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
19 Por que não ouviste a sua voz? Por que te lançaste sobre os despojos fazendo o mal aos olhos do Senhor.?
20 ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
20 Mas eu obedeci à voz do Senhor, replicou Saul; fui pelo caminho que ele me traçou, trouxe Agag, rei de Amalec, e votei ao interdito os amalecitas.
21 ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
21 O povo somente tomou dos despojos algumas ovelhas e bois, à guisa de primícias do interdito, para os sacrificar ao Senhor, teu Deus, em Gálgala.
22 ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
22 Samuel replicou-lhe: Acaso o Senhor se compraz tanto nos holocaustos e sacrifícios como na obediência à sua voz? A obediência é melhor que o sacrifício e a submissão vale mais que a gordura dos carneiros.
23 ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
23 A rebelião é tão culpável quanto a superstição; a desobediência é como o pecado de idolatria. Pois que rejeitaste a palavra do Senhor, também ele te rejeita e te despoja da realeza!
24 ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
24 Saul disse: Pequei! Transgredi a ordem do Senhor e as tuas instruções, pois tive medo do povo e ouvi a sua voz.
25 ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
25 Agora, peço-te, perdoa o meu pecado, e volta comigo para que eu adore o Senhor.
26 ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
26 Não voltarei contigo!, exclamou Samuel. Rejeitaste a palavra do Senhor, por isso o Senhor te rejeita, e não quer mais que sejas rei de Israel.
27 ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
27 Samuel voltou-se e ia-se retirando, mas Saul agarrou-o pela ponta do manto, o qual se rasgou.
28 ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
28 Samuel disse-lhe: Assim o Senhor arranca hoje de ti a realeza sobre Israel, a fim de dá-la a outro melhor do que tu.
29 ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
29 Aquele que é a verdade de Israel não mente, nem se arrepende, pois não é um homem para se arrepender.
30 ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
30 Saul respondeu: Pequei, mas rogo-te que {continues} a honrar-me na presença. dos anciãos de meu povo e diante de Israel. Volta comigo, para eu adorar o Senhor, teu Deus!
31 ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
31 Samuel voltou, pois, com o rei, e este adorou o Senhor.
32 ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
32 Samuel disse: Trazei-me Agag, rei de Amalec. Aproximou-se Agag, cheio de alegria, dizendo: Certamente passou a amargura da morte!
33 ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
33 Tua espada, disse-lhe Samuel, privou as mulheres de seus filhos; agora, é tua mãe que será uma mulher sem filho. E Samuel fê-lo em pedaços diante do Senhor, em Gálgala.
34 ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.
34 Depois disso Samuel retirou-se para Ramá, e Saul voltou para a sua casa em Gabaa de Saul.
35 ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
35 O profeta não tornou mais a ver Saul até o dia de sua morte. Samuel afligia-se por causa de Saul, por se ter o Senhor arrependido de tê-lo feito rei de Israel.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 15, comparar traduções ou montar um estudo — tudo direto pelo WhatsApp.