1 Samuel 17
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
1 Ora, os filisteus ajuntaram as suas forças para a guerra e congregaram-se em Socó, que pertence a Judá, e acamparam entre Socó e Azeca, em Efes-Damim.
2 ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
2 Saul, porém, e os homens de Israel se ajuntaram e acamparam no vale de Elá, e ordenaram a batalha contra os filisteus.
3 ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು, ಅವರ ಮಧ್ಯದಲ್ಲಿ ತಗ್ಗು ಇತ್ತು.
3 Os filisteus estavam num monte de um lado, e os israelitas estavam num monte do outro lado; e entre eles o vale.
4 ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
4 Então saiu do arraial dos filisteus um campeão, cujo nome era Golias, de Gate, que tinha de altura seis côvados e um palmo.
5 ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು.
5 Trazia na cabeça um capacete de bronze, e vestia uma couraça escameada, cujo peso era de cinco mil siclos de bronze.
6 ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು.
6 Também trazia grevas de bronze nas pernas, e um dardo de bronze entre os ombros.
7 ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
7 A haste da sua lança era como o órgão de um tear, e a ponta da sua lança pesava seiscentos siclos de ferro; adiante dele ia o seu escudeiro.
8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
8 Ele, pois, de pé, clamava às fileiras de Israel e dizia-lhes: Por que saístes a ordenar a batalha? Não sou eu filisteu, e vós servos de Saul? Escolhei dentre vós um homem que desça a mim.
9 ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು.
9 Se ele puder pelejar comigo e matar-me, seremos vossos servos; porem, se eu prevalecer contra ele e o matar, então sereis nossos servos, e nos servireis.
10 ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
10 Disse mais o filisteu: Desafio hoje as fileiras de Israel; dai-me um homem, para que nós dois pelejemos.
11 ಸೌಲನೂ ಸಮಸ್ತ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಎದೆಗುಂದಿ ಬಹು ಭಯಪಟ್ಟರು.
11 Ouvindo, então, Saul e todo o Israel estas palavras do filisteu, desalentaram-se, e temeram muito.
12 ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
12 Ora, Davi era filho de um homem efrateu, de Belém de Judá, cujo nome era Jessé, que tinha oito filhos; e nos dias de Saul este homem era já velho e avançado em idade entre os homens.
13 ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
13 Os três filhos mais velhos de Jessé tinham seguido a Saul à guerra; eram os nomes de seus três filhos que foram à guerra: Eliabe, o primogênito, o segundo Abinadabe, e o terceiro Samá:
14 ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
14 Davi era o mais moço; os três maiores seguiram a Saul,
15 ದಾವೀದನು ಸೌಲನನ್ನು ಬಿಟ್ಟು ಬೇತ್ಲೆಹೇಮಿಗೆ ತನ್ನ ತಂದೆಯ ಕುರಿಗಳನ್ನು ಮೇಯಿಸಲು ಹೋಗಿದ್ದನು.
15 mas Davi ia e voltava de Saul, para apascentar as ovelhas de seu pai em Belém.
16 ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
16 Chegava-se, pois, o filisteu pela manhã e à tarde; e apresentou-se por quarenta dias.
17 ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
17 Disse então Jessé a Davi, seu filho: Toma agora para teus irmãos uma refa deste grão tostado e estes dez pães, e corre a levá-los ao arraial, a teus irmãos.
18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
18 Leva, também, estes dez queijos ao seu comandante de mil; e verás como passam teus irmãos, e trarás notícias deles.
19 ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
19 Ora, estavam Saul, e eles, e todos os homens de Israel no vale de Elá, pelejando contra os filisteus.
20 ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
20 Davi então se levantou de madrugada e, deixando as ovelhas com um guarda, carregou-se e partiu, como Jessé lhe ordenara; e chegou ao arraial quando o exército estava saindo em ordem de batalha e dava gritos de guerra.
21 ಇಸ್ರಾಯೇಲ್ಯರೂ ಫಿಲಿಷ್ಟಿ ಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.
21 Os israelitas e os filisteus se punham em ordem de batalha, fileira contra fileira.
22 ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
22 E Davi, deixando na mão do guarda da bagagem a carga que trouxera, correu às fileiras; e, chegando, perguntou a seus irmãos se estavam bem.
23 ಅವನು ಇವರ ಸಂಗಡ ಮಾತನಾಡುತ್ತಾ ಇರುವಾಗ ಇಗೋ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು ಮೊದಲಿನ ಹಾಗೆಯೇ ಮಾತನಾಡಿದನು; ಆ ಮಾತುಗಳನ್ನು ದಾವೀದನು ಕೇಳಿದನು.
23 Enquanto ainda falava com eles, eis que veio subindo do exército dos filisteus o campeão, cujo nome era Golias, o filisteu de Gate, e falou conforme aquelas palavras; e Davi as ouviu.
24 ಇಸ್ರಾಯೇಲ್ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
24 E todos os homens de Israel, vendo aquele homem, fugiam, de diante dele, tomados de pavor.
25 ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
25 Diziam os homens de Israel: Vistes aquele homem que subiu? pois subiu para desafiar a Israel. Ao homem, pois, que o matar, o rei cumulará de grandes riquezas, e lhe dará a sua filha, e fará livre a casa de seu pai em Israel.
26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
26 Então falou Davi aos homens que se achavam perto dele, dizendo: Que se fará ao homem que matar a esse filisteu, e tirar a afronta de sobre Israel? pois quem é esse incircunciso filisteu, para afrontar os exércitos do Deus vivo?
27 ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
27 E o povo lhe repetiu aquela palavra, dizendo: Assim se fará ao homem que o matar.
28 ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
28 Eliabe, seu irmão mais velho, ouviu-o quando falava àqueles homens; pelo que se acendeu a sua ira contra Davi, e disse: Por que desceste aqui, e a quem deixaste aquelas poucas ovelhas no deserto? Eu conheço a tua presunção, e a maldade do teu coração; pois desceste para ver a peleja.
29 ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
29 Respondeu Davi: Que fiz eu agora? porventura não há razão para isso?
30 ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
30 E virou-se dele para outro, e repetiu as suas perguntas; e o povo lhe respondeu como da primeira vez.
31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ಅವನನ್ನು ಕರೇ ಕಳುಹಿಸಿದನು.
31 Então, ouvidas as palavras que Davi falara, foram elas referidas a Saul, que mandou chamá-lo.
32 ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
32 E Davi disse a Saul: Não desfaleça o coração de ninguém por causa dele; teu servo irá, e pelejará contra este filisteu.
33 ಆಗ ಸೌಲನು ದಾವೀದ ನಿಗೆ--ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು; ಯಾಕಂದರೆ ನೀನು ಹುಡುಗನಾಗಿದ್ದೀ; ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ ಅಂದನು.
33 Saul, porém, disse a Davi: Não poderás ir contra esse filisteu para pelejar com ele, pois tu ainda és moço, e ele homem de guerra desde a sua mocidade.
34 ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
34 Então disse Davi a Saul: Teu servo apascentava as ovelhas de seu pai, e sempre que vinha um leão, ou um urso, e tomava um cordeiro do rebanho,
35 ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
35 eu saía após ele, e o matava, e lho arrancava da boca; levantando-se ele contra mim, segurava-o pela queixada, e o feria e matava.
36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
36 O teu servo matava tanto ao leão como ao urso; e este incircunciso filisteu será como um deles, porquanto afrontou os exércitos do Deus vivo.
37 ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
37 Disse mais Davi: O Senhor, que me livrou das garras do leão, e das garras do urso, me livrará da mão deste filisteu. Então disse Saul a Davi: Vai, e o Senhor seja contigo.
38 ಆಗ ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ತೊಡಿಸಿ ಅವನ ತಲೆಯ ಮೇಲೆ ಒಂದು ಹಿತ್ತಾಳೆಯ ಶಿರಸ್ತ್ರಾಣವನ್ನು ಇಟ್ಟು ಅವನಿಗೆ ಕವಚವನ್ನು ತೊಡಿಸಿದನು.
38 E vestiu a Davi da sua própria armadura, pôs-lhe sobre a cabeça um capacete de bronze, e o vestiu de uma couraça.
39 ದಾವೀದನು ಅವನ ಕತ್ತಿಯನ್ನು ತನ್ನ ಆಯುಧಗಳ ಮೇಲೆ ಕಟ್ಟಿಕೊಂಡು ಹೋಗಬೇಕೆಂದಿದ್ದನು. ಆದರೆ ಅದು ಅವನಿಗೆ ಅಭ್ಯಾಸ ವಿದ್ದಿಲ್ಲ, ಆಗ ದಾವೀದನು ಸೌಲನಿಗೆ--ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗ ಲಾರೆನು ಎಂದು ಹೇಳಿ ಅವುಗಳನ್ನು ಬಿಚ್ಚಿಹಾಕಿ
39 Davi cingiu a espada sobre a armadura e procurou em vão andar, pois não estava acostumado àquilo. Então disse Davi a Saul: Não posso andar com isto, pois não estou acostumado. E Davi tirou aquilo de sobre si.
40 ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು.
40 Então tomou na mão o seu cajado, escolheu do ribeiro cinco seixos lisos e pô-los no alforje de pastor que trazia, a saber, no surrão, e, tomando na mão a sua funda, foi-se chegando ao filisteu.
41 ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.
41 O filisteu também vinha se aproximando de Davi, tendo a: sua frente o seu escudeiro.
42 ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ
42 Quando o filisteu olhou e viu a Davi, desprezou-o, porquanto era mancebo, ruivo, e de gentil aspecto.
43 ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.
43 Disse o filisteu a Davi: Sou eu algum cão, para tu vires a mim com paus? E o filisteu, pelos seus deuses, amaldiçoou a Davi.
44 ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
44 Disse mais o filisteu a Davi: Vem a mim, e eu darei a tua carne às aves do céu e às bestas do campo.
45 ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
45 Davi, porém, lhe respondeu: Tu vens a mim com espada, com lança e com escudo; mas eu venho a ti em nome do Senhor dos exércitos, o Deus dos exércitos de Israel, a quem tens afrontado.
46 ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
46 Hoje mesmo o Senhor te entregará na minha mão; ferir-te-ei, e tirar-te-ei a cabeça; os cadáveres do arraial dos filisteus darei hoje mesmo às aves do céu e às feras da terra; para que toda a terra saiba que há Deus em Israel;
47 ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
47 e para que toda esta assembléia saiba que o Senhor salva, não com espada, nem com lança; pois do Senhor é a batalha, e ele vos entregará em nossas mãos.
48 ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ
48 Quando o filisteu se levantou e veio chegando para se defrontar com Davi, este se apressou e correu ao combate, a encontrar-se com o filisteu.
49 ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
49 E Davi, metendo a mão no alforje, tirou dali uma pedra e com a funda lha atirou, ferindo o filisteu na testa; a pedra se lhe cravou na testa, e ele caiu com o rosto em terra.
50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
50 Assim Davi prevaleceu contra o filisteu com uma funda e com uma pedra; feriu-o e o matou; e não havia espada na mão de Davi.
51 ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
51 Correu, pois, Davi, pôs-se em pé sobre o filisteu e, tomando a espada dele e tirando-a da bainha, o matou, decepando-lhe com ela a cabeça. Vendo então os filisteus que o seu campeão estava morto, fugiram.
52 ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
52 Então os homens de Israel e de Judá se levantaram gritando, e perseguiram os filisteus até a entrada de Gai e até as portas de Ecrom; e caíram os feridos dos filisteus pelo caminho de Saraim até Gate e até Ecrom.
53 ಇಸ್ರಾಯೇಲ್ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.
53 Depois voltaram os filhos de Israel de perseguirem os filisteus, e despojaram os seus arraiais.
54 ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
54 Davi tomou a cabeça do filisteu e a trouxe a Jerusalém; porém pôs as armas dele na sua tenda.
55 ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
55 Quando Saul viu Davi sair e encontrar-se com o filisteu, perguntou a Abner, o chefe do exército: De quem é filho esse jovem, Abner? Respondeu Abner: Vive a tua alma, ó rei, que não sei.
56 ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.
56 Disse então o rei: Pergunta, pois, de quem ele é filho.
57 ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
57 Voltando, pois, Davi de ferir o filisteu, Abner o tomou consigo, e o trouxe à presença de Saul, trazendo Davi na mão a cabeça do filisteu.
58 ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
58 E perguntou-lhe Saul: De quem és filho, jovem? Respondeu Davi: Filho de teu servo Jessé, belemita.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 17, comparar traduções ou montar um estudo — tudo direto pelo WhatsApp.