1 Samuel 1

Kannada Bible (GL_KANNADA) vs NTLH

Sair da comparação
NTLH Nova Tradução na Linguagem de Hoje 2000
1 ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.
1 Havia um homem da tribo de Efraim, chamado Elcana, que vivia na cidade de Ramá, na região montanhosa de Efraim. Ele era filho de Jeroão, neto de Eliú, bisneto de Toú e trineto de Zufe.
2 ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.
2 Elcana tinha duas mulheres, Ana e Penina. Penina tinha filhos, porém Ana não tinha.
3 ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.
3 Todos os anos Elcana saía da sua cidade e ia a Siló a fim de adorar e oferecer sacrifícios ao Senhor Todo-Poderoso. Hofni e Fineias, os filhos de Eli, eram sacerdotes do Senhor Deus, em Siló.
4 ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.
4 Cada vez que Elcana oferecia o seu sacrifício, ele dava uma parte para Penina e outra para todos os seus filhos e filhas.
5 ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
5 Mas para Ana ele dava duas vezes mais. Elcana a amava muito, embora o Senhor não permitisse que ela tivesse filhos.
6 ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
6 Penina, sua rival, provocava e humilhava Ana porque o Senhor não permitia que ela tivesse filhos.
7 ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
7 Isso acontecia ano após ano. Sempre que iam ao santuário do Senhor , Penina irritava tanto Ana, que ela ficava só chorando e não comia nada.
8 ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
8 Um dia o seu marido Elcana lhe perguntou: — Ana, por que você está chorando? Por que não come? Por que está sempre triste? Por acaso, eu não sou melhor para você do que dez filhos?
9 ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
9 Certa vez eles estavam em Siló e tinham acabado de comer. Eli, o sacerdote, estava sentado na sua cadeira, na porta da Tenda Sagrada .
10 ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
10 Aí Ana se levantou aflita e, chorando muito, orou a Deus, o Senhor .
11 ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
11 E fez esta promessa solene: — Ó
12 ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.
12 Ana continuou orando ao Senhor durante tanto tempo, que Eli começou a prestar atenção nela
13 ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.
13 e notou que os seus lábios se mexiam, porém não saía nenhum som. Ana estava orando em silêncio, mas Eli pensou que ela estava bêbada
14 ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.
14 e disse: — Até quando você vai ficar embriagada? Veja se para de beber!
15 ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
15 — Senhor — respondeu ela —, eu não estou bêbada. Não bebi nem vinho nem cerveja. Estou desesperada e estava orando, contando a minha aflição ao Senhor .
16 ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
16 Não pense que sou uma mulher sem moral. Eu estava orando daquele jeito porque sou muito infeliz e sofredora.
17 ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.
17 Então Eli disse: — Vá em paz. Que o Deus de Israel lhe dê o que você pediu!
18 ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
18 — Que o senhor sempre pense bem de mim! — respondeu ela. E saiu. Então comeu alguma coisa e já não estava tão triste.
19 ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
19 Na manhã seguinte Elcana e a sua família se levantaram cedo e adoraram a Deus, o Senhor . Aí voltaram para casa, em Ramá. Elcana teve relações com a sua esposa Ana, e o Senhor respondeu à oração dela.
20 ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
20 Ela ficou grávida e, no tempo certo, deu à luz um filho. Pôs nele o nome de Samuel e explicou: — Eu pedi esse filho a Deus, o
21 ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
21 Elcana e a sua família foram a Siló para oferecer ao Senhor o sacrifício anual e o sacrifício especial que ele havia prometido.
22 ಅವನು ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಅಲ್ಲಿ ಎಂದೆಂದಿಗೂ ಇರುವದಕ್ಕೆ ನಾನು ಅವನನ್ನು ಆಗ ತಕ್ಕೊಂಡು ಬರುವೆನು ಅಂದಳು.
22 Ana, porém, não foi. Ela disse ao marido: — Assim que o menino for desmamado, eu o levarei ao santuário de Deus, o
23 ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ--ನೀನು ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವ ಹಾಗೆ ಮಾಡು. ಅವನು ಮೊಲೆ ಬಿಡುವವರೆಗೂ ಕಾದುಕೊಂಡಿರು. ಕರ್ತನು ತನ್ನ ವಾಕ್ಯವನ್ನು ಸ್ಥಿರಮಾಡಲಿ ಅಂದನು. ಹಾಗೆಯೇ ಅವಳು ಉಳಿದು ತನ್ನ ಮಗುವು ಮೊಲೆ ಬಿಡುವವರೆಗೂ ಅವನಿಗೆ ಮೊಲೆ ಕೊಡುತ್ತಿದ್ದಳು.
23 Elcana respondeu: — Faça o que achar melhor. Fique em casa até que ele seja desmamado. E o Então Ana ficou em casa e amamentou o filho.
24 ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
24 Depois que ele foi desmamado, ela o levou a Siló. Levou também um touro de três anos, dez quilos de farinha e um odre cheio de vinho. Samuel era muito novo quando a sua mãe o levou à casa do Senhor , em Siló.
25 ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
25 Os pais de Samuel ofereceram o touro em sacrifício e levaram o menino para Eli.
26 ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
26 Ana disse: — Meu senhor, juro pela sua vida que sou aquela mulher que o senhor viu aqui de pé, orando.
27 ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.
27 Eu pedi esta criança a Deus, o Senhor , e ele me deu o que pedi.
28 ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.
28 Por isso agora eu estou dedicando este menino ao Senhor . Enquanto ele viver, pertencerá ao Senhor . Então eles adoraram a Deus ali.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 1, comparar traduções ou montar um estudo — tudo direto pelo WhatsApp.