1 Samuel 22

Kannada Bible (GL_KANNADA) vs NAA

Sair da comparação
NAA Nova Almeida Atualizada 2017
1 ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
1 Davi saiu daquele lugar e se refugiou na caverna de Adulão. Quando os seus irmãos e toda a casa de seu pai souberam disso, foram ficar com ele.
2 ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
2 Ajuntaram-se a ele todos os homens que estavam em dificuldades, os que tinham dívidas, e todos os amargurados de espírito, e Davi se tornou o chefe deles. E havia com ele uns quatrocentos homens.
3 ದಾವೀದನು ಅಲ್ಲಿಂದ ಹೊರಟು ಮೋವಾಬ್‌ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
3 Daquele lugar Davi foi a Mispa, em Moabe, e disse ao rei de Moabe: — Deixe que o meu pai e a minha mãe fiquem com vocês, até que eu saiba o que Deus vai fazer de mim.
4 ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
4 Davi levou-os ao rei de Moabe, e eles moraram com ele durante todo o tempo em que Davi esteve naquele lugar seguro.
5 ಆದರೆ ಗಾದ್‌ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್‌ ಎಂಬ ಅರಣ್ಯಕ್ಕೆ ಬಂದನು.
5 Porém o profeta Gade disse a Davi: — Não fique neste lugar seguro; vá e entre na terra de Judá. Então Davi saiu e foi para o bosque de Herete.
6 ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)
6 Saul ficou sabendo que Davi e os homens que o acompanhavam foram descobertos. Saul se encontrava em Gibeá, debaixo de um arvoredo, numa colina, com a sua lança na mão, e todos os seus servos estavam com ele.
7 ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
7 Saul disse aos servos que o rodeavam: — Escutem, filhos de Benjamim! Será que o filho de Jessé dará também a todos vocês terras e vinhas e fará de todos vocês chefes de milhares e chefes de centenas,
8 ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
8 para que todos vocês tenham conspirado contra mim? Não houve ninguém que me avisasse que o meu filho fez aliança com o filho de Jessé. Não há nenhum de vocês que tenha pena de mim e me conte que o meu filho instigou contra mim o meu servo, para me armar ciladas, como se vê neste dia.
9 ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
9 Então Doegue, o edomita, que também estava com os servos de Saul, disse: — Eu vi o filho de Jessé chegar a Nobe, para falar com Aimeleque, filho de Aitube.
10 ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
10 A pedido dele, Aimeleque consultou o Senhor . Também lhe deu mantimento e a espada de Golias, o filisteu.
11 ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
11 Então o rei mandou chamar o sacerdote Aimeleque, filho de Aitube, e toda a casa de seu pai, a saber, os sacerdotes que estavam em Nobe. E todos eles vieram ao rei.
12 ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
12 Saul disse: — Escute, filho de Aitube! Este respondeu: — Eis-me aqui, meu senhor!
13 ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.
13 Então Saul lhe disse: — Por que você conspirou contra mim, você e o filho de Jessé? Pois você lhe deu pão e espada e consultou Deus a favor dele, para que se levantasse contra mim e me armasse ciladas, como hoje se vê.
14 ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
14 Aimeleque respondeu ao rei: — E quem, entre todos os seus servos, é tão fiel quanto Davi, o genro do rei, chefe da sua guarda pessoal e honrado na sua casa?
15 ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
15 Por acaso foi essa a primeira vez que consultei Deus em favor dele? Não! Que o rei jamais acuse este seu servo, nem ninguém da casa de meu pai, pois este seu servo de nada soube de tudo isso, nem muito nem pouco.
16 ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.
16 O rei respondeu: — Aimeleque, você certamente morrerá, você e toda a casa de seu pai.
17 ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
17 Então o rei disse aos guardas que o rodeavam: — Voltem-se e matem os sacerdotes do Porém os servos do rei não quiseram estender as mãos contra os sacerdotes do
18 ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
18 Então o rei disse a Doegue: — Volte-se você e mate os sacerdotes. Então Doegue, o edomita, se voltou e investiu contra os sacerdotes. Naquele dia ele matou oitenta e cinco homens que vestiam estola sacerdotal de linho.
19 ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
19 Também a Nobe, a cidade desses sacerdotes, passou a fio de espada. Matou homens e mulheres, meninos e crianças de peito, bois, jumentos e ovelhas.
20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
20 Porém dos filhos de Aimeleque, filho de Aitube, um só, cujo nome era Abiatar, se salvou e fugiu para Davi.
21 ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.
21 Abiatar anunciou a Davi que Saul tinha matado os sacerdotes do Senhor .
22 ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.
22 Então Davi disse a Abiatar: — Naquele dia, quando vi que Doegue, o edomita, estava ali, eu sabia que ele não deixaria de contar tudo a Saul. Eu fui a causa da morte de todas as pessoas da casa de seu pai.
23 ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
23 Fique comigo, não tenha medo, porque quem procura a minha morte procura também a sua; mas comigo você estará a salvo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 22, comparar traduções ou montar um estudo — tudo direto pelo WhatsApp.