1 Samuel 23

Kannada Bible (GL_KANNADA) vs VC

Sair da comparação
VC Versão Católica
1 ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
1 Disseram a Davi: Os filisteus estão atacando Ceila e pilhando as eiras.
2 ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
2 Davi consultou o Senhor: Devo ferir os filisteus? O Senhor respondeu: Vai; tu os ferirás e libertarás Ceila.
3 ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.
3 Os homens de Davi, porém, disseram-lhe: Mesmo aqui em Judá estamos cheios de medo; quanto mais se formos a Ceila contra as tropas dos filisteus?
4 ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
4 Davi consultou novamente o Senhor, que lhe respondeu: Vai; desce a Ceila, porque entrego os filisteus nas tuas mãos.
5 ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
5 Davi foi para Ceila com os seus homens e atacou os filisteus, tomando-lhes o gado e infligindo-lhes uma grande derrota. Assim libertou os habitantes de Ceila.
6 ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು.
6 {Ora, quando Abiatar, filho de Aquimelec, fugira para junto de Davi a Ceila, levava consigo o efod.}
7 ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
7 Saul foi informado de que Davi se encontrava em Ceila, e disse: Deus entregou-o nas minhas mãos, pois foi encerrar-se em uma cidade com portas e ferrolhos.
8 ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
8 O rei convocou todo o povo às armas para descer a Ceila e sitiar Davi com sua tropa.
9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
9 Mas Davi, sabendo que Saul maquinava perdê-lo, disse ao sacerdote Abiatar: Traze o efod!
10 ದಾವೀದನುಓ ಇಸ್ರಾಯೇಲ್‌ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
10 E ajuntou: Senhor, Deus de Israel, vosso servo sabe que Saul pretende penetrar em Ceila para destruir a cidade por causa de mim.
11 ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
11 Será que os habitantes de Ceila me entregarão nas suas mãos? Saul descerá como o vosso servo ouviu dizer? Senhor, Deus de Israel, fazei-o saber ao vosso servo. O Senhor respondeu: Ele descerá.
12 ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
12 E Davi ajuntou: Os habitantes de Ceila entregar-me-ão a mim e a meus homens, nas mãos de Saul? O Senhor respondeu: Entregarão.
13 ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
13 Então Davi partiu precipitadamente com a sua tropa, em número de aproximadamente seiscentos homens, e saíram de Ceila, marchando ao acaso. Saul, informado de que Davi deixara Ceila, renunciou à expedição.
14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
14 Davi permaneceu no deserto, em lugares bem protegidos, e habitou no monte do deserto de Zif. Saul procurava-o sem cessar; mas Deus não o entregou nas suas mãos.
15 ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್‌ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
15 Davi, sabendo que Saul tinha saído para tirar-lhe a vida, ficou no deserto de Zif, em Horcha.
16 ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
16 Então Jônatas, filho de Saul, foi ter com ele em Horcha. E confortou-o em Deus, dizendo:
17 ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
17 Não temas, porque não te atingirá a mão de meu pai. Tu reinarás sobre Israel, e eu serei o teu segundo; meu pai bem o sabe.
18 ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.
18 Fizeram ambos aliança diante do Senhor. Davi ficou em Horcha e Jônatas voltou para a sua casa.
19 ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
19 Alguns zifeus subiram a ter com Saul em Gabaa, e disseram-lhe: Davi está escondido entre nós no fortim de Horcha, na colina de Haquila, à direita do deserto.
20 ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
20 Desce, pois, ó rei, já que tanto o desejas, e nós nos encarregamos de entregá-lo nas tuas mãos.
21 ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
21 Que o Senhor vos abençoe, respondeu Saul, porque vos compadecestes de mim.
22 ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;
22 Ide, informai-vos diligentemente, e procurai saber o lugar onde ele se encontra, ou se alguém o viu, porque me foi dito que ele é muito astuto!
23 ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
23 Explorai e descobri todos os seus esconderijos, e voltai a mim com notícias seguras, a fim de eu ir convosco, pois se ele estiver na terra, eu o descobrirei entre a multidão de Judá.
24 ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
24 Partiram antes de Saul para Zif; mas Davi e os seus estavam já no deserto de Maon, na planície ao sul do deserto.
25 ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
25 Saul partiu com seus homens à sua procura. Mas Davi, informado disso, desceu à Rocha e permaneceu no deserto de Maon. Saul o soube e foi persegui-lo ali.
26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
26 Saul ia por um flanco da montanha, e Davi com os seus pelo outro, em fuga precipitada para escapar de Saul. No momento, porém, em que Saul com seus homens iam apoderar-se de Davi e sua gente,
27 ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
27 veio um mensageiro anunciar ao rei: Vem depressa; os filisteus entraram na terra.
28 ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.
28 Saul abandonou a perseguição e foi combater os filisteus. Por isso, àquele lugar foi dado o nome de Rocha da Separação.
29 ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
29 Subindo dali, veio Davi habitar nas alturas de Engadi.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Samuel 23, comparar traduções ou montar um estudo — tudo direto pelo WhatsApp.