1 Samuel 2
Kannada Bible (GL_KANNADA) vs VC
VC Versão Católica
1 ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
1 Ana pronunciou esta prece: Exulta o meu coração no Senhor, nele se eleva a minha força; a minha boca desafia os meus adversários, porque me alegro na vossa salvação.
2 ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
2 Ninguém é santo como o Senhor. Não existe outro Deus, além de vós, nem rochedo semelhante ao nosso Deus.
3 ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
3 Não multipliqueis palavras orgulhosas, não saia da vossa boca linguagem arrogante, porque o Senhor é um Deus que tudo sabe; por ele são pesadas as ações.
4 ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
4 Quebra-se o arco dos fortes, enquanto os fracos se revestem de vigor.
5 ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
5 Os abastados se assalariam para ganharem o que comer, enquanto os famintos são saciados. Sete vezes dá à luz a estéril, enquanto a mãe de numerosos filhos enlanguesce.
6 ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
6 O Senhor dá a morte e a vida, faz descer à habitação dos mortos e de lá voltar.
7 ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
7 O Senhor empobrece e enriquece; humilha e exalta.
8 ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
8 Levanta do pó o mendigo, do esterco retira o indigente, para fazê-los sentar-se entre os nobres e outorgar-lhes um trono de honra, porque do Senhor são as colunas da terra. Sobre elas estabeleceu o mundo.
9 ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
9 Dirige os passos dos seus fiéis, enquanto os ímpios perecem nas trevas; porque homem algum vence pela força.
10 ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
10 Ó Senhor, sejam esmagados os vossos adversários! Dos céus troveje o Altíssimo contra eles, o Senhor julgue os últimos confins da terra! Dará força ao seu rei, e engrandecerá o poder do seu ungido.
11 ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
11 Elcana voltou para a sua casa em Ramá, e o menino ficou ao serviço do Senhor, junto do sacerdote Heli.
12 ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
12 Os filhos de Heli eram maus; não conheciam o Senhor.
13 ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
13 Eis como se comportavam para com o povo: Quando alguém imolava uma vítima, vinha o servo do sacerdote no momento em que se cozia a carne, com um garfo de três dentes,
14 ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
14 e metia-o na caldeira, na marmita, na panela ou no tacho, e tudo o que o tridente trazia, tomava-o para o sacerdote. Assim faziam a todos os israelitas que vinham a Silo.
15 ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
15 Antes que queimassem a gordura, vinha o servo do sacerdote dizer ao que sacrificava: Dá-me a carne de assar para o sacerdote; ele não aceitará carne cozida, mas unicamente a carne crua.
16 ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
16 O homem respondia-lhe: É preciso que se queime antes a gordura; depois disto tomarás o que quiseres. Não, respondia o servo, dá-me logo, senão tomarei à força.
17 ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
17 Era muito grande a iniqüidade desses moços aos olhos de Deus, porque atraíam o desprezo sobre as ofertas feitas ao Senhor.
18 ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
18 Entretanto, Samuel, ainda criança, servia diante do Senhor, trajando um efod de linho.
19 ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು.
19 Sua mãe fazia-lhe cada ano uma pequena túnica, que lhe levava quando subia com o seu marido para o sacrifício anual.
20 ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
20 Heli abençoava Elcana e sua mulher: Conceda-te o Senhor filhos desta mulher, em recompensa do dom que ela lhe faz! E voltavam para a sua casa.
21 ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
21 O Senhor visitou Ana, e ela concebeu, dando à luz três filhos e duas filhas. E o menino Samuel crescia na companhia do Senhor.
22 ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--
22 Heli era muito velho; sabia tudo o que faziam os seus filhos com os israelitas, e como eles dormiam com as mulheres que estavam de serviço à entrada da Tenda da Reunião.
23 ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
23 Por que, dizia-lhes, procedeis desta forma? Sei que todo o povo fala de vossas desordens.
24 ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
24 Não façais assim, meus filhos; não são boas as informações que me chegam a vossos respeito. Estais fazendo pecar o povo do Senhor.
25 ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
25 Se um homem pecar contra outro, Deus o julga; se ele pecar, porém, contra o Senhor, quem intervirá a seu favor? Mas não ouviam a voz do seu pai, porque Deus os queria perder.
26 ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.
26 Entretanto, o menino Samuel ia crescendo, e era agradável tanto ao Senhor como aos homens.
27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
27 Certo dia, um homem de Deus veio ter com Heli e disse-lhe da parte do Senhor: Não me revelei eu claramente à casa de teu pai, quando eles estavam no Egito ao serviço do faraó?
28 ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
28 Escolhi os teus dentre todas as tribos de Israel para serem sacerdotes, subirem ao meu altar, queimarem o incenso e vestirem o efod diante de mim. Dei à casa de teu pai todos os sacrifícios oferecidos pelos israelitas.
29 ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
29 Por que desprezais os meus sacrifícios e as minhas oblações que estabeleci em minha morada? Fazes mais caso dos teus filhos que de mim, engordando-vos com o melhor de todas as ofertas de meu povo de Israel.
30 ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
30 Por isso, eis o que diz o Senhor, Deus de Israel: Eu tinha dito que a tua casa e a casa de teu pai serviria para sempre diante de mim. Mas agora, diz o Senhor, não será mais assim. Eu honro aqueles que me honram e desprezo os que me desprezam.
31 ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
31 Virão dias em que abaterei o teu vigor e o vigor da casa de teu pai, de tal modo que já não haverá ancião em tua casa.
32 ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
32 Israel estará cumulado da alegria, e tu verás a angústia em tua casa. Não haverá jamais ancião em tua família!
33 ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
33 Entretanto, não cortarei todos os teus do meu altar, para que se consumam de inveja os teus olhos e se desfaleça a tua alma; mas todos os outros morrerão na flor da idade.
34 ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
34 O que vai acontecer aos teus dois filhos Ofni e Finéias, será para ti um sinal: morrerão ambos no mesmo dia.
35 ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.
35 Suscitarei para mim um sacerdote fiel, que procederá segundo o meu coração e minha vontade. Edificar-lhe-ei uma casa durável, e ele andará sempre diante do meu ungido.
36 ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
36 Os que sobreviverem de tua família irão prostrar-se diante dele por uma moeda de prata ou por um pedaço de pão, dizendo-lhe: Admiti-me para alguma função sacerdotal, a fim de que eu tenha um bocado de pão para comer.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 2, comparar traduções ou montar um estudo — tudo direto pelo WhatsApp.