1 Samuel 31
Kannada Bible (GL_KANNADA) vs NVI
NVI Nova Versão Internacional
1 ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
1 E aconteceu que, em combate com os filisteus, os israelitas foram postos em fuga e muitos caíram mortos no monte Gilboa.
2 ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
2 Os filisteus perseguiram Saul e seus filhos, e mataram Jônatas, Abinadabe e Malquisua, filhos de Saul.
3 ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.
3 O combate foi se tornando cada vez mais violento em torno de Saul, até que os flecheiros o alcançaram e o feriram gravemente.
4 ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
4 Então Saul ordenou ao seu escudeiro: "Tire sua espada e mate-me com ela, senão sofrerei a vergonha de cair nas mãos desses incircuncisos". Mas seu escudeiro estava apavorado e não quis fazê-lo. Saul, então, pegou a própria espada e jogou-se sobre ela.
5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.
5 Quando o escudeiro viu que Saul estava morto, jogou-se também sobre sua espada e morreu com ele.
6 ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
6 De maneira que Saul, seus três filhos, seu escudeiro e todos os seus soldados morreram juntos naquele dia.
7 ಇಸ್ರಾಯೇಲ್ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
7 Quando os israelitas que habitavam do outro lado do vale e a leste do Jordão viram que o exército tinha fugido, e que Saul e seus filhos estavam mortos, fugiram abandonando suas cidades. Depois os filisteus foram ocupá-las.
8 ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
8 No dia seguinte, quando os filisteus foram saquear os mortos, encontraram Saul e seus três filhos caídos no monte Gilboa.
9 ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
9 Cortaram a cabeça de Saul, pegaram suas armas, e enviaram mensageiros por toda a terra dos filisteus proclamando a notícia nos templos de seus ídolos e entre seu povo.
10 ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
10 Expuseram as armas de Saul no templo dos postes sagrados e penduraram seu corpo no muro de Bete-Seã.
11 ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
11 Quando os habitantes de Jabes-Gileade ficaram sabendo do que os filisteus tinham feito com Saul,
12 ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.
12 os mais corajosos dentre eles foram durante a noite a Bete-Seã. Baixaram os corpos de Saul e de seus filhos do muro de Bete-Seã e foram para Jabes, onde os queimaram.
13 ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
13 Depois enterraram seus ossos debaixo de uma tamargueira em Jabes, e jejuaram por sete dias.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 31, comparar traduções ou montar um estudo — tudo direto pelo WhatsApp.