1 Samuel 5
Kannada Bible (GL_KANNADA) vs ARA
ARA Almeida Revista e Atualizada 1993
1 ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
1 Os filisteus tomaram a arca de Deus e a levaram de Ebenézer a Asdode.
2 ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
2 Tomaram os filisteus a arca de Deus e a meteram na casa de Dagom, junto a este.
3 ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
3 Levantando-se, porém, de madrugada os de Asdode, no dia seguinte, eis que estava caído Dagom com o rosto em terra, diante da arca do Senhor ; tomaram-no e tornaram a pô-lo no seu lugar.
4 ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.
4 Levantando-se de madrugada no dia seguinte, pela manhã, eis que Dagom jazia caído de bruços diante da arca do Senhor ; a cabeça de Dagom e as duas mãos estavam cortadas sobre o limiar; dele ficara apenas o tronco.
5 ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
5 Por isso, os sacerdotes de Dagom e todos os que entram no seu templo não lhe pisam o limiar em Asdode, até ao dia de hoje.
6 ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
6 Porém a mão do Senhor castigou duramente os de Asdode, e os assolou, e os feriu de tumores, tanto em Asdode como no seu território.
7 ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
7 Vendo os homens de Asdode que assim era, disseram: Não fique conosco a arca do Deus de Israel; pois a sua mão é dura sobre nós e sobre Dagom, nosso deus.
8 ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.
8 Pelo que enviaram mensageiros, e congregaram a si todos os príncipes dos filisteus, e disseram: Que faremos da arca do Deus de Israel? Responderam: Seja levada a arca do Deus de Israel até Gate e, depois, de cidade em cidade. E a levaram até Gate.
9 ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
9 Depois de a terem levado, a mão do Senhor foi contra aquela cidade, com mui grande terror; pois feriu os homens daquela cidade, desde o pequeno até ao grande; e lhes nasceram tumores.
10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
10 Então, enviaram a arca de Deus a Ecrom. Sucedeu, porém, que, em lá chegando, os ecronitas exclamaram, dizendo: Transportaram até nós a arca do Deus de Israel, para nos matarem, a nós e ao nosso povo.
11 ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.
11 Então, enviaram mensageiros, e congregaram a todos os príncipes dos filisteus, e disseram: Devolvei a arca do Deus de Israel, e torne para o seu lugar, para que não mate nem a nós nem ao nosso povo. Porque havia terror de morte em toda a cidade, e a mão de Deus castigara duramente ali.
12 ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
12 Os homens que não morriam eram atingidos com os tumores; e o clamor da cidade subiu até ao céu.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 5, comparar traduções ou montar um estudo — tudo direto pelo WhatsApp.