1 Samuel 9
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
1 Ora, havia um homem de Benjamim, cujo nome era Quis, filho de Abiel, filho de Zeror, filho de Becorate, filho de Afias, filho dum benjamita; era varão forte e valoroso.
2 ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
2 Tinha este um filho, chamado Saul, jovem e tão belo que entre os filhos de Israel não havia outro homem mais belo de que ele; desde os ombros para cima sobressaía em altura a todo o povo.
3 ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.
3 Tinham-se perdido as jumentas de Quis, pai de Saul; pelo que disse Quis a Saul, seu filho: Toma agora contigo um dos moços, levanta-te e vai procurar as jumentas.
4 ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
4 Passaram, pois, pela região montanhosa de Efraim, como também pela terra e Salisa, mas não as acharam; depois passaram pela terra de Saalim, porém tampouco estavam ali; passando ainda pela terra de Benjamim, não as acharam.
5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.
5 Vindo eles, então, à terra de Zufe, Saul disse para o moço que ia com ele: Vem! Voltemos, para que não suceda que meu pai deixe de inquietar-se pelas jumentas e se aflija por causa de nós.
6 ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
6 Mas ele lhe disse: Eis que há nesta cidade um homem de Deus, e ele é muito considerado; tudo quanto diz, sucede infalivelmente. Vamos, pois, até lá; porventura nos mostrará o caminho que devemos seguir.
7 ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
7 Então Saul disse ao seu moço: Porém se lá formos, que levaremos ao homem? Pois o pão de nossos alforjes se acabou, e presente nenhum temos para levar ao homem de Deus; que temos?
8 ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
8 O moço tornou a responder a Saul, e disse: Eis que ainda tenho em mão um quarto dum siclo de prata, o qual darei ao homem de Deus, para que nos mostre o caminho.
9 (ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
9 {Antigamente em Israel, indo alguém consultar a Deus, dizia assim: Vinde, vamos ao vidente; porque ao profeta de hoje, outrora se chamava vidente.}
10 ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
10 Então disse Saul ao moço: Dizes bem; vem, pois, vamos! E foram-se à cidade onde estava e homem de Deus.
11 ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
11 Quando eles iam subindo à cidade, encontraram umas moças que saíam para tirar água; e perguntaram-lhes: Está aqui o vidente?
12 ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
12 Ao que elas lhes responderam: Sim, eis aí o tens diante de ti; apressa-te, porque hoje veio à cidade, porquanto o povo tem hoje sacrifício no alto.
13 ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
13 Entrando vós na cidade, logo o achareis, antes que ele suba ao alto para comer; pois o povo não comerá até que ele venha, porque ele é o que abençoa a sacrifício, e depois os convidados comem. Subi agora, porque a esta hora o achareis.
14 ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.
14 Subiram, pois, à cidade; e, ao entrarem, eis que Samuel os encontrou, quando saía para subir ao alto.
15 ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
15 Ora, o Senhor revelara isto aos ouvidos de Samuel, um dia antes de Saul chegar, dizendo:
16 ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
16 Amanhã a estas horas te enviarei um homem da terra de Benjamim, o qual ungirás por príncipe sobre o meu povo de Israel; e ele livrará o meu povo da mão dos filisteus; pois olhei para o meu povo, porque o seu clamor chegou a mim.
17 ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
17 E quando Samuel viu a Saul, o Senhor e disse: Eis aqui o homem de quem eu te falei. Este dominará sobre o meu povo.
18 ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.
18 Então Saul se chegou a Samuel na porta, e disse: Mostra-me, peço-te, onde é a casa do vidente.
19 ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.
19 Respondeu Samuel a Saul: Eu sou o vidente; sobe diante de mim ao alto, porque comereis hoje comigo; pela manhã te despedirei, e tudo quanto está no teu coração to declararei.
20 ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.
20 Também quanto às jumentas que há três dias se te perderam, não te preocupes com elas, porque já foram achadas. Mas para quem é tudo o que é desejável em Israel? porventura não é para ti, e para toda a casa de teu pai?
21 ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
21 Então respondeu Saul: Acaso não sou eu benjamita, da menor das tribos de Israel? E não é a minha família a menor de todas as famílias da tribo de Benjamim? Por que, pois, me falas desta maneira?
22 ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.
22 Samuel, porém, tomando a Saul e ao seu moço, levou-os à câmara, e deu-lhes o primeiro lugar entre os convidados, que eram cerca de trinta homens.
23 ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು.
23 Depois disse Samuel ao cozinheiro: Traze a porção que te dei, da qual te disse: põe-na à parte contigo.
24 ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.
24 Levantou, pois, o cozinheiro a espádua, com o que havia nela, e pô-la diante de Saul. E disse Samuel: Eis que o que foi reservado está diante de ti. Come; porque te foi guardado para esta ocasião, para que o comesses com os convidados. Assim comeu Saul naquele dia com Samuel.
25 ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
25 Então desceram do alto para a cidade, e falou Samuel com Saul, no eirado.
26 ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.
26 E se levantaram de madrugada, quase ao subir da alva, pois Samuel chamou a Saul, que estava no eirado, dizendo: Levanta-te para eu te despedir. Levantou-se, pois, Saul, e sairam ambos, ele e Samuel.
27 ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
27 Quando desciam para a extremidade da cidade, Samuel disse a Saul: Dize ao moço que passe adiante de nós {e ele passou}; tu, porém, espera aqui, e te farei ouvir a palavra de Deus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 1 Samuel 9, comparar traduções ou montar um estudo — tudo direto pelo WhatsApp.