1 Tessalonicenses 2

Kannada Bible (GL_KANNADA) vs VC

Sair da comparação
VC Versão Católica
1 ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
1 Bem sabeis, irmãos, que a nossa ida a vós não foi em vão.
2 ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
2 Apesar de maltratados e ultrajados em Filipos, como sabeis, ousamos, confiados em nosso Deus, pregar-vos o Evangelho de Deus em meio de muitas lutas.
3 ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
3 A nossa pregação não provém de erro, nem de intenções fraudulentas, nem de engano.
4 ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
4 Mas, como Deus nos julgou dignos de nos confiar o Evangelho, falamos, não para agradar aos homens, e sim a Deus, que sonda os nossos corações.
5 ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
5 Com efeito, nunca usamos de adulação, como sabeis, nem fomos levados por fins interesseiros. Deus é testemunha.
6 ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
6 Não buscamos glórias humanas, nem de vós nem de outros.
7 ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
7 Na qualidade de apóstolos de Cristo, poderíamos apresentar-nos como pessoas de autoridade. Todavia, nos fizemos discretos no meio de vós. Como a mãe a acariciar os seus filhinhos,
8 ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
8 assim, em nossa ternura por vós, desejávamos não só comunicar-vos o Evangelho de Deus, mas até a nossa própria vida, porquanto nos sois muito queridos.
9 ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
9 Vós vos lembrais, irmãos, dos nossos trabalhos e de nossa fadiga. Trabalhando noite e dia, para não sermos pesados a nenhum de vós, pregamo-vos o Evangelho de Deus.
10 ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
10 Vós sois testemunhas, e também Deus, de quão santa, justa e irrepreensivelmente nos portamos convosco que crestes.
11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
11 E sabeis que procedemos com cada um de vós como um pai com seus filhos:
12 ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
12 nós vos temos exortado, estimulado, conjurado a vos comportardes de maneira digna de Deus, que vos chama ao seu Reino e à sua glória.
13 ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
13 Por isso é que também nós não cessamos de dar graças a Deus, porque recebestes a palavra de Deus, que de nós ouvistes, e a acolhestes, não como palavra de homens, mas como aquilo que realmente é, como palavra de Deus, que age eficazmente em vós, os fiéis.
14 ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
14 Com efeito, irmãos, vós vos tornastes imitadores das igrejas de Deus que estão na Judéia, das igrejas de Jesus Cristo. Tivestes que sofrer da parte dos vossos compatriotas o mesmo que eles sofreram dos judeus,
15 ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
15 aqueles judeus que mataram o Senhor Jesus, que nos perseguiram, que não são do agrado de Deus, que são inimigos de todos os homens,
16 ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
16 visto que nos proíbem pregar aos gentios para que se salvem. E com isto vão enchendo sempre mais a medida dos seus pecados. Mas a ira de Deus acabou por atingi-los.
17 ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
17 Nós, irmãos, separados de vós por algum tempo - de vista, não de coração -, temos o mais vivo e ardente desejo de vos rever.
18 ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
18 Pelo que fizemos o possível por ir visitar-vos, ao menos eu, Paulo, em diversas ocasiões. Mas Satanás nos impediu.
19 ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?
19 Pois quem, senão vós, será a nossa esperança, a nossa alegria e a nossa coroa de glória ante nosso Senhor Jesus, no dia de sua vinda?
20 ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
20 Sim, sois vós a nossa glória e a nossa alegria!

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Tessalonicenses 2, comparar traduções ou montar um estudo — tudo direto pelo WhatsApp.