1 Tessalonicenses 5

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
1 Mas, irmãos, acerca dos tempos e das épocas não necessitais de que se vos escreva:
2 ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
2 porque vós mesmos sabeis perfeitamente que o dia do Senhor virá como vem o ladrão de noite;
3 ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
3 pois quando estiverem dizendo: Paz e segurança! então lhes sobrevirá repentina destruição, como as dores de parto àquela que está grávida; e de modo nenhum escaparão.
4 ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
4 Mas vós, irmãos, não estais em trevas, para que aquele dia, como ladrão, vos surpreenda;
5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
5 porque todos vós sois filhos da luz e filhos do dia; nós não somos da noite nem das trevas;
6 ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
6 não durmamos, pois, como os demais, antes vigiemos e sejamos sóbrios.
7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
7 Porque os que dormem, dormem de noite, e os que se embriagam, embriagam-se de noite;
8 ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
8 mas nós, porque somos do dia, sejamos sóbrios, vestindo-nos da couraça da fé e do amor, e tendo por capacete a esperança da salvação;
9 ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
9 porque Deus não nos destinou para a ira, mas para alcançarmos a salvação por nosso Senhor Jesus Cristo,
10 ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
10 que morreu por nós, para que, quer vigiemos, quer durmamos, vivamos juntamente com ele.
11 ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
11 Pelo que exortai-vos uns aos outros e edificai-vos uns aos outros, como na verdade o estais fazendo.
12 ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
12 Ora, rogamo-vos, irmãos, que reconheçais os que trabalham entre vós, presidem sobre vós no Senhor e vos admoestam;
13 ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
13 e que os tenhais em grande estima e amor, por causa da sua obras. Tende paz entre vós.
14 ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
14 Exortamo-vos também, irmãos, a que admoesteis os insubordinados, consoleis os desanimados, ampareis os fracos e sejais longânimos para com todos.
15 ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
15 Vede que ninguém dê a outrem mal por mal, mas segui sempre o bem, uns para com os outros, e para com todos.
16 ಯಾವಾಗಲೂ ಸಂತೋಷಿಸಿರಿ;
16 Regozijai-vos sempre.
17 ಎಡೆಬಿಡದೆ ಪ್ರಾರ್ಥನೆ ಮಾಡಿರಿ.
17 Orai sem cessar.
18 ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
18 Em tudo dai graças; porque esta é a vontade de Deus em Cristo Jesus para convosco.
19 ಆತ್ಮನನ್ನು ನಂದಿಸಬೇಡಿರಿ;
19 Não extingais o Espírito;
20 ಪ್ರವಾದನೆಗಳನ್ನು ಹೀನೈಸಬೇಡಿರಿ;
20 não desprezeis as profecias,
21 ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
21 mas ponde tudo à prova. Retende o que é bom;
22 ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
22 Abstende-vos de toda espécie de mal.
23 ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
23 E o próprio Deus de paz vos santifique completamente; e o vosso espírito, e alma e corpo sejam plenamente conservados irrepreensíveis para a vinda de nosso Senhor Jesus Cristo.
24 ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
24 Fiel é o que vos chama, e ele também o fará.
25 ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
25 Irmãos, orai por nós.
26 ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
26 Saudai a todos os irmãos com ósculo santo.
27 ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.
27 Pelo Senhor vos conjuro que esta epístola seja lida a todos os irmãos.
28 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
28 A graça de nosso Senhor Jesus Cristo seja convosco.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 1 Tessalonicenses 5, comparar traduções ou montar um estudo — tudo direto pelo WhatsApp.