2 Coríntios 11

Kannada Bible (GL_KANNADA) vs VC

Sair da comparação
VC Versão Católica
1 ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
1 Oxalá suportásseis um pouco de loucura de minha parte! Oh, sim! Tolerai-me.
2 ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
2 Eu vos consagro um carinho e amor santo, porque vos desposei com um esposo único e vos apresentei a Cristo como virgem pura.
3 ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
3 Mas temo que, como a serpente enganou Eva com a sua astúcia, assim se corrompam os vossos pensamentos e se apartem da sinceridade para com Cristo.
4 ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
4 Porque quando aparece alguém pregando-vos outro Jesus, diferente daquele que vos temos pregado, ou se trata de receber outro espírito, diferente do que haveis recebido, ou outro evangelho, diverso do que haveis abraçado, de boa mente o aceitais.
5 ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
5 Mas penso que em nada tenho sido inferior a esses eminentes apóstolos!
6 ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
6 Pois, embora eu seja de pouca eloqüência, não acontece o mesmo quanto à ciência: é o que em tudo e a cada passo vos temos manifestado.
7 ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
7 Porventura cometi alguma falta, em vos ter pregado o Evangelho de Deus gratuitamente, humilhando-me para vos exaltar?
8 ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
8 Para vos servir, despojei outras igrejas, recebendo delas o meu sustento.
9 ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
9 Estando convosco e passando alguma necessidade, não fui pesado a ninguém, porque os irmãos que vieram da Macedônia supriram o que me faltava. Em tudo me guardei e me guardarei de vos ser pesado.
10 ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
10 Tão certo como a verdade de Cristo está em mim, não me será tirada esta glória nas regiões de Acaia.
11 ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
11 E por quê?... Será por que não vos amo? Deus o sabe!
12 ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
12 Mas o que faço, continuarei a fazer, para cortar pela raiz todo pretexto àqueles que procuram algum pretexto para se envaidecerem e se afirmarem iguais a nós.
13 ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
13 Esses tais são falsos apóstolos, operários desonestos, que se disfarçam em apóstolos de Cristo,
14 ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
14 o que não é de espantar. Pois, se o próprio Satanás se transfigura em anjo de luz,
15 ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
15 parece bem normal que seus ministros se disfarcem em ministros de justiça, cujo fim, no entanto, será segundo as suas obras.
16 ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
16 Repito: não me queiram tomar por um louco. No mínimo, aceitai-me como tal, para que também eu possa me gloriar!
17 ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
17 O que vou dizer, na certeza de poder gloriar-me, não o digo sob a inspiração do Senhor, mas como num acesso de delírio.
18 ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
18 Porque muitos se gloriam segundo a carne, também eu me gloriarei.
19 ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
19 Vós, sendo homens sensatos, suportais de boa mente os loucos...
20 ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
20 Sim, tolerais a quem vos escraviza, a quem vos devora, a quem vos faz violência, a quem vos trata com orgulho, a quem vos dá no rosto.
21 ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
21 Sinto vergonha de o dizer; temos mostrado demasiada fraqueza... Entretanto, de tudo aquilo de que outrem se ufana {falo como um insensato}, disto também eu me ufano.
22 ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
22 São hebreus? Também eu. São israelitas? Também eu.
23 ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
23 São ministros de Cristo? Falo como menos sábio: eu, ainda mais. Muito mais pelos trabalhos, muito mais pelos cárceres, pelos açoites sem medida. Muitas vezes vi a morte de perto.
24 ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
24 Cinco vezes recebi dos judeus os quarenta açoites menos um.
25 ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
25 Três vezes fui flagelado com varas. Uma vez apedrejado. Três vezes naufraguei, uma noite e um dia passei no abismo.
26 ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
26 Viagens sem conta, exposto a perigos nos rios, perigos de salteadores, perigos da parte de meus concidadãos, perigos da parte dos pagãos, perigos na cidade, perigos no deserto, perigos no mar, perigos entre falsos irmãos!
27 ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
27 Trabalhos e fadigas, repetidas vigílias, com fome e sede, freqüentes jejuns, frio e nudez!
28 ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
28 Além de outras coisas, a minha preocupação cotidiana, a solicitude por todas as igrejas!
29 ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
29 Quem é fraco, que eu não seja fraco? Quem sofre escândalo, que eu não me consuma de dor?
30 ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
30 Se for preciso que a gente se glorie, eu me gloriarei na minha fraqueza.
31 ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
31 Deus, Pai de nosso Senhor Jesus Cristo, que é bendito pelos séculos, sabe que não minto.
32 ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.
32 Em Damasco, o governador do rei Aretas mandou guardar a cidade dos damascenos para me prender.
33 ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
33 Mas, dentro de um cesto, desceram-me por uma janela ao longo da muralha, e assim escapei das suas mãos.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Coríntios 11, comparar traduções ou montar um estudo — tudo direto pelo WhatsApp.