2 Coríntios 6

Kannada Bible (GL_KANNADA) vs VC

Sair da comparação
VC Versão Católica
1 ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
1 Na qualidade de colaboradores seus, exortamo-vos a que não recebais a graça de Deus em vão.
2 (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
2 Pois ele diz: Eu te ouvi no tempo favorável e te ajudei no dia da salvação {Is 49,8}. Agora é o tempo favorável, agora é o dia da salvação.
3 ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
3 A ninguém damos qualquer motivo de escândalo, para que o nosso ministério não seja criticado.
4 ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
4 Mas em todas as coisas nos apresentamos como ministros de Deus, por uma grande constância nas tribulações, nas misérias, nas angústias,
5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
5 nos açoites, nos cárceres, nos tumultos populares, nos trabalhos, nas vigílias, nas privações;
6 ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
6 pela pureza, pela ciência, pela longanimidade, pela bondade, pelo Espírito Santo, por uma caridade sincera,
7 ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
7 pela palavra da verdade, pelo poder de Deus; pelas armas da justiça ofensivas e defensivas,
8 ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
8 através da honra e da desonra, da boa e da má fama.
9 ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
9 Tidos por impostores, somos, no entanto, sinceros; por desconhecidos, somos bem conhecidos; por agonizantes, estamos com vida; por condenados e, no entanto, estamos livres da morte.
10 ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
10 Somos julgados tristes, nós que estamos sempre contentes; indigentes, porém enriquecendo a muitos; sem posses, nós que tudo possuímos!
11 ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
11 Ó coríntios, acabamos de vos falar com toda a franqueza. O nosso coração está todo ele aberto.
12 ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
12 Não é estreito o lugar que nele ocupais. Estreito, isso sim, é vosso íntimo.
13 ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
13 Correspondei-me com igual ternura. Falo como a meus filhos: também vós outros abri largamente os vossos corações.
14 ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
14 Não vos prendais ao mesmo jugo com os infiéis. Que união pode haver entre a justiça e a iniqüidade? Ou que comunidade entre a luz e as trevas?
15 ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
15 Que compatibilidade pode haver entre Cristo e Belial? Ou que acordo entre o fiel e o infiel?
16 ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
16 Como conciliar o templo de Deus e os ídolos? Porque somos o templo de Deus vivo, como o próprio Deus disse: Eu habitarei e andarei entre eles, e serei o seu Deus e eles serão o meu povo {Lv 26,11s}.
17 ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.
17 Portanto, saí do meio deles e separai-vos, diz o Senhor. Não toqueis no que é impuro, e vos receberei.
18 ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
18 Serei para vós um Pai e vós sereis para mim filhos e filhas, diz o Senhor todo-poderoso {Is 52,11; Jr 31,9}.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Coríntios 6, comparar traduções ou montar um estudo — tudo direto pelo WhatsApp.