2 Coríntios 8
Kannada Bible (GL_KANNADA) vs ARIB
ARIB Almeida Revisada Imprensa Bíblica
1 ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
1 Também, irmãos, vos fazemos conhecer a graça de Deus que foi dada às igrejas da Macedônia;
2 ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
2 como, em muita prova de tribulação, a abundância do seu gozo e sua profunda pobreza abundaram em riquezas da sua generosidade.
3 ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
3 Porque, dou-lhes testemunho de que, segundo as suas posses, e ainda acima das suas posses, deram voluntariamente,
4 ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
4 pedindo-nos, com muito encarecimento, o privilégio de participarem deste serviço a favor dos santos;
5 ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
5 e não somente fizeram como nós esperávamos, mas primeiramente a si mesmos se deram ao Senhor, e a nós pela vontade de Deus;
6 ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
6 de maneira que exortamos a Tito que, assim como antes tinha começado, assim também completasse entre vós ainda esta graça.
7 ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
7 Ora, assim como abundais em tudo: em fé, em palavra, em ciência, em todo o zelo, no vosso amor para conosco, vede que também nesta graça abundeis.
8 ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
8 Não digo isto como quem manda, mas para provar, mediante o zelo de outros, a sinceridade de vosso amor;
9 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
9 pois conheceis a graça de nosso Senhor Jesus Cristo, que, sendo rico, por amor de vós se fez pobre, para que pela sua pobreza fôsseis enriquecidos.
10 ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
10 E nisto dou o meu parecer; pois isto vos convém a vós que primeiro começastes, desde o ano passado, não só a participar mas também a querer;
11 ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
11 agora, pois, levai a termo a obra, para que, assim como houve a prontidão no querer, haja também o cumprir segundo o que tendes.
12 ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
12 Porque, se há prontidão de vontade, é aceitável segundo o que alguém tem, e não segundo o que não tem.
13 ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
13 Pois digo isto não para que haja alívio para outros e aperto para vós,
14 ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
14 mas para que haja igualdade, suprindo, neste tempo presente, na vossa abundância a falta dos outros, para que também a abundância deles venha a suprir a vossa falta, e assim haja igualdade;
15 ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
15 como está escrito: Ao que muito colheu, não sobrou; e ao que pouco colheu, não faltou.
16 ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
16 Mas, graças a Deus, que pôs no coração de Tito a mesma solicitude por vós;
17 ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
17 pois, com efeito, aceitou a nossa exortação; mas sendo sobremodo zeloso, foi por sua própria vontade que partiu para vós.
18 ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
18 E juntamente com ele enviamos o irmão cujo louvor no evangelho se tem espalhado por todas as igrejas;
19 ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
19 e não só isto, mas também foi escolhido pelas igrejas para ser nosso companheiro de viagem no tocante a esta graça que por nós é ministrada para glória do Senhor e para provar a nossa boa vontade;
20 ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
20 assim evitando que alguém nos censure com referência a esta abundância, que por nós é ministrada;
21 ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
21 pois zelamos o que é honesto, não só diante do Senhor, mas também diante dos homens.
22 ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
22 Com eles enviamos também outro nosso irmão, o qual muitas vezes e em muitas coisas já experimentamos ser zeloso, mas agora muito mais zeloso ainda pela muita confiança que vós tem.
23 ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.
23 Quanto a Tito, ele é meu companheiro e cooperador para convosco; quanto a nossos irmãos, são mensageiros das igrejas, glória de Cristo.
24 ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
24 Portanto mostrai para com eles, perante a face das igrejas, a prova do vosso amor, e da nossa glória a vosso respeito.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Coríntios 8, comparar traduções ou montar um estudo — tudo direto pelo WhatsApp.