2 Crônicas 30
Kannada Bible (GL_KANNADA) vs ARA
ARA Almeida Revista e Atualizada 1993
1 ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
1 Depois disto, Ezequias enviou mensageiros por todo o Israel e Judá; escreveu também cartas a Efraim e a Manassés para que viessem à Casa do Senhor , em Jerusalém, para celebrarem a Páscoa ao Senhor , Deus de Israel.
2 ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
2 Porque o rei tivera conselho com os seus príncipes e com toda a congregação em Jerusalém, para celebrarem a Páscoa no segundo mês
3 ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.
3 (Porquanto não a puderam celebrar no devido tempo, porque não se tinham santificado sacerdotes em número suficiente, e o povo não se ajuntara ainda em Jerusalém.).
4 ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.
4 Foi isto aprovado pelo rei e toda a congregação;
5 ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
5 e resolveram que se fizesse pregão por todo o Israel, desde Berseba até Dã, para que viessem a celebrar a Páscoa ao Senhor , Deus de Israel, em Jerusalém; porque não a celebravam já com grande número de assistentes, como prescrito.
6 ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.
6 Partiram os correios com as cartas do rei e dos seus príncipes, por todo o Israel e Judá, segundo o mandado do rei, dizendo: Filhos de Israel, voltai-vos ao Senhor , Deus de Abraão, de Isaque e de Israel, para que ele se volte para o restante que escapou do poder dos reis da Assíria.
7 ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
7 Não sejais como vossos pais e como vossos irmãos, que prevaricaram contra o Senhor , Deus de seus pais, pelo que os entregou à desolação, como estais vendo.
8 ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
8 Não endureçais, agora, a vossa cerviz, como vossos pais; confiai-vos ao Senhor , e vinde ao seu santuário que ele santificou para sempre, e servi ao Senhor , vosso Deus, para que o ardor da sua ira se desvie de vós.
9 ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
9 Porque, se vós vos converterdes ao Senhor , vossos irmãos e vossos filhos acharão misericórdia perante os que os levaram cativos e tornarão a esta terra; porque o Senhor , vosso Deus, é misericordioso e compassivo e não desviará de vós o rosto, se vos converterdes a ele.
10 ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
10 Os correios foram passando de cidade em cidade, pela terra de Efraim e Manassés até Zebulom; porém riram-se e zombaram deles.
11 ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
11 Todavia, alguns de Aser, de Manassés e de Zebulom se humilharam e foram a Jerusalém.
12 ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
12 Também em Judá se fez sentir a mão de Deus, dando-lhes um só coração, para cumprirem o mandado do rei e dos príncipes, segundo a palavra do Senhor .
13 ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
13 Ajuntou-se em Jerusalém muito povo, para celebrar a Festa dos Pães Asmos, no segundo mês, mui grande congregação.
14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
14 Dispuseram-se e tiraram os altares que havia em Jerusalém; também tiraram todos os altares do incenso e os lançaram no vale de Cedrom.
15 ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
15 Então, imolaram o cordeiro da Páscoa no décimo quarto dia do segundo mês; os sacerdotes e os levitas se envergonharam, e se santificaram, e trouxeram holocaustos à Casa do Senhor .
16 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
16 Tomaram os seus devidos lugares, segundo a Lei de Moisés, o homem de Deus; e os sacerdotes aspergiam o sangue, tomando-o das mãos dos levitas.
17 ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
17 Porque havia muitos na congregação que não se tinham santificado; pelo que os levitas estavam encarregados de imolar os cordeiros da Páscoa por todo aquele que não estava limpo, para o santificarem ao Senhor .
18 ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
18 Porque uma multidão do povo, muitos de Efraim, de Manassés, de Issacar e de Zebulom não se tinham purificado e, contudo, comeram a Páscoa, não como está escrito; porém Ezequias orou por eles, dizendo: O Senhor , que é bom, perdoe a todo aquele
19 ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
19 que dispôs o coração para buscar o Senhor Deus, o Deus de seus pais, ainda que não segundo a purificação exigida pelo santuário.
20 ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.
20 Ouviu o Senhor a Ezequias e sarou a alma do povo.
21 ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
21 Os filhos de Israel que se acharam em Jerusalém celebraram a Festa dos Pães Asmos por sete dias, com grande júbilo; e os levitas e os sacerdotes louvaram ao Senhor de dia em dia, com instrumentos que tocaram fortemente em honra ao Senhor .
22 ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
22 Ezequias falou ao coração de todos os levitas que revelavam bom entendimento no serviço do Senhor ; e comeram, por sete dias, as ofertas da festa, trouxeram ofertas pacíficas e renderam graças ao Senhor , Deus de seus pais.
23 ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
23 Concordou toda a congregação em celebrar outros sete dias, e, de fato, o fizeram com júbilo;
24 ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
24 pois Ezequias, rei de Judá, apresentou à congregação mil novilhos e sete mil ovelhas para sacrifício; e os príncipes apresentaram à congregação mil novilhos e dez mil ovelhas; e os sacerdotes se santificaram em grande número.
25 ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
25 Alegraram-se toda a congregação de Judá, os sacerdotes, os levitas e toda a congregação de todos os que vieram de Israel, como também os estrangeiros que vieram da terra de Israel e os que habitavam em Judá.
26 ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.
26 Houve grande alegria em Jerusalém; porque desde os dias de Salomão, filho de Davi, rei de Israel, não houve coisa semelhante em Jerusalém.
27 ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
27 Então, os sacerdotes e os levitas se levantaram para abençoar o povo; a sua voz foi ouvida, e a sua oração chegou até à santa habitação de Deus, até aos céus.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 30, comparar traduções ou montar um estudo — tudo direto pelo WhatsApp.