2 Crônicas 32

Kannada Bible (GL_KANNADA) vs VC

Sair da comparação
VC Versão Católica
1 ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
1 Depois desses feitos, que eram provas de fidelidade, Senaquerib, rei da Assíria, invadiu Judá e assediou as cidades fortes com o desígnio de se apoderar delas.
2 ಸನ್ಹೇರೀಬನು ಬಂದದ್ದನ್ನೂ ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ಮುಖ ತಿರುಗಿಸಿದ್ದನ್ನೂ ಹಿಜ್ಕೀಯನು ಕಂಡಾಗ
2 Quando Ezequias viu que o objetivo de Senaquerib era Jerusalém,
3 ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
3 resolveu, de acordo com os chefes e seus oficiais, obstruir as águas das nascentes que se encontravam fora da cidade; e todos o ajudaram a executar esse projeto.
4 ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
4 Juntou muita gente; obstruíram todas as fontes, como também o riacho que corria no meio da terra. Por que, diziam eles, os reis da Assíria haveriam de encontrar, chegando aqui, água em abundância?
5 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
5 Ezequias, cheio de energia, reparou a muralha em ruína, levantou torres, construiu um segundo muro exterior, restaurou Milo, na cidade de Davi, e mandou fabricar lanças e escudos em grande abundância.
6 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
6 Colocou à frente do exército chefes militares; reuniu-os perto de si na praça da porta da cidade e exortou-os à coragem.
7 ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
7 Sede valentes, disse-lhes ele; cobrai coragem, nenhum temor ou pavor diante do rei da Assíria e toda essa multidão que ele arrasta após si. Há mais conosco do que com ele.
8 ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
8 Com ele, um braço de carne; conosco, o Senhor, nosso Deus, para nos auxiliar e combater conosco. A estas palavras de Ezequias, rei de Judá, o povo recobrou confiança.
9 ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
9 Senaquerib, que se encontrava diante de Laquis com todas as suas forças armadas, enviou uma delegação a Jerusalém para dizer a Ezequias e aos homens de Judá:
10 ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ?
10 Eis o que diz Senaquerib, rei da Assíria: em que confiais vós para vos encerrardes dessa maneira em Jerusalém?
11 ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
11 Não vedes que Ezequias vos engana para vos fazer perecer de fome e sede, quando vos diz: o Senhor, nosso Deus, nos salvará das mãos do rei da Assíria?
12 ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
12 Não foi ele, Ezequias, quem suprimiu os lugares altos e os altares do Senhor, ordenando a Judá e a Jerusalém não se prostrar e não oferecer incenso, senão diante de um só altar?
13 ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
13 Não sabeis o que fizemos, meus pais e eu, a todos os povos das outras terras? Puderam os deuses dessas nações salvar seus países de minha mão?
14 ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?
14 Entre todos os deuses dessas nações que meus pais exterminaram, qual deles subtraiu sua nação de meu poder, para que vosso Deus vos possa livrar do meu braço?
15 ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
15 Não vos deixeis, portanto, iludir por Ezequias, nem seduzir. Não confieis nele. Nenhum deus de nenhuma nação nem de algum reino pôde livrar seu povo de minha mão, nem da mão de meus pais. Quanto menos vossos deuses poderiam livrar-vos da minha!
16 ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.
16 Os homens de Senaquerib ajuntaram ainda muitas outras palavras contra o Senhor Deus e contra Ezequias, seu servo.
17 ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
17 Ele escreveu também uma carta cheia de ultrajes contra o Senhor, Deus de Israel, na qual o atacava dizendo: Assim como os deuses das nações não puderam subtraí-las de minha mão, assim também o Deus de Ezequias não poderá livrar seu povo da minha.
18 ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು.
18 E tudo isso foi gritado em alta voz em hebraico, com o fim de intimidar e assustar o povo de Jerusalém, que se encontrava na muralha, a fim de apoderar-se da cidade.
19 ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
19 Falavam do Deus de Jerusalém como dos deuses das nações pagãs que não passam de obras feitas pela mão do homem.
20 ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
20 Nessa altura, o rei Ezequias e o profeta Isaías, filho de Amós, puseram-se em oração para implorar aos céus.
21 ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
21 E o Senhor enviou um anjo que exterminou todo o exército do rei da Assíria, no próprio acampamento, com os chefes e os generais; e o rei voltou para a sua terra inteiramente confuso. Quando ele entrava no templo de seu deus, seus filhos, saídos de sua própria carne, assassinaram-no com um golpe de espada.
22 ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
22 Desse modo o Senhor livrou Ezequias e os habitantes de Jerusalém da mão de Senaquerib e de todos os seus inimigos, protegendo-os contra todos os seus vizinhos.
23 ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
23 Muitos foram os que levaram a Jerusalém oferendas para o Senhor e ricos presentes para Ezequias, rei de Judá, que conquistou desde então um grande prestígio aos olhos das nações pagãs.
24 ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
24 Por aqueles dias, Ezequias caiu numa doença mortal. Orou ao Senhor, e este lhe respondeu por um prodígio.
25 ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
25 Mas Ezequias não se mostrou reconhecido pelo benefício recebido: seu coração se ensoberbeceu e a ira do Senhor se inflamou contra ele, como também contra Judá e Jerusalém.
26 ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
26 Todavia, como ele se humilhou com os habitantes de Jerusalém, do orgulho de seu coração, não se desencadeou sobre ele a ira do Senhor, durante sua vida.
27 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
27 Ezequias possuía muita riqueza e glória. Mandou fazer depósitos para a prata, o ouro, as pedras preciosas, os aromas, os escudos e os outros objetos de valor;
28 ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
28 armazéns para o trigo, o mosto e o azeite; estábulos para toda a espécie de gado e apriscos para os rebanhos.
29 ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
29 Construiu para si cidades. Adquiriu um grande número de rebanhos, de gado grande e miúdo, pois o Senhor lhe tinha dado imensas riquezas.
30 ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.
30 Foi ele, Ezequias, quem fechou a saída superior das águas do Gião, e as dirigiu para o ocidente da cidade de Davi. Teve bom êxito em tudo o que empreendeu.
31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
31 Todavia, quando os chefes de Babilônia lhe enviaram mensageiros para se informar do prodígio que tinha acontecido na terra, Deus o abandonou para provar e conhecer o âmago de seu coração.
32 ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್‌ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
32 Os outros atos de Ezequias, suas obras piedosas, tudo isso se acha relatado na visão do profeta Isaías, filho de Amós, e nos livros dos reis de Judá e de Israel.
33 ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
33 Ezequias adormeceu entre seus pais e foi sepultado na parte superior dos sepulcros dos filhos de Davi. Todo o Judá e os habitantes de Jerusalém lhe prestaram as honras fúnebres. Seu filho Manassés sucedeu-lhe no trono.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 32, comparar traduções ou montar um estudo — tudo direto pelo WhatsApp.