2 Crônicas 6

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.
1 Então, disse Salomão: O Senhor tem dito que habitaria nas trevas.
2 ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
2 E eu te tenho edificado uma casa para morada e um lugar para a tua eterna habitação.
3 ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
3 Então, o rei virou o rosto e abençoou a toda a congregação de Israel, e toda a congregação de Israel estava em pé.
4 ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
4 E ele disse: Bendito seja o Senhor , Deus de Israel, que falou pela sua boca a Davi, meu pai, e, pelas suas mãos, o cumpriu, dizendo:
5 ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
5 Desde o dia em que tirei o meu povo da terra do Egito, não escolhi cidade alguma de todas as tribos de Israel, para edificar nela uma casa em que estivesse o meu nome; nem escolhi homem algum para ser chefe do meu povo de Israel.
6 ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
6 Porém escolhi Jerusalém para que ali estivesse o meu nome; e escolhi Davi, para que tivesse cargo do meu povo de Israel.
7 ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
7 Também Davi, meu pai, teve no seu coração o edificar uma casa ao nome do Senhor , Deus de Israel.
8 ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
8 Porém o Senhor disse a Davi, meu pai: Porquanto tiveste no teu coração o edificar uma casa ao meu nome, bem fizeste, de ter isso no teu coração.
9 ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
9 Contudo, tu não edificarás a casa; mas teu filho, que há de descender de ti, esse edificará a casa ao meu nome.
10 ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
10 Assim, confirmou o Senhor a sua palavra que ele falou; porque eu me levantei em lugar de Davi, meu pai, e me assentei sobre o trono de Israel, como o Senhor disse, e edifiquei a casa ao nome do Senhor , Deus de Israel.
11 ಕರ್ತನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
11 E pus nela a arca em que está o concerto que o Senhor fez com os filhos de Israel.
12 ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
12 E pôs-se em pé perante o altar do Senhor , defronte de toda a congregação de Israel, e estendeu as mãos.
13 ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
13 Porque Salomão tinha feito uma base de metal, de cinco côvados de comprimento, e de cinco côvados de largura, e de três côvados de altura, e a tinha posto no meio do pátio; e pôs-se nela em pé, e ajoelhou-se em presença de toda a congregação de Israel, e estendeu as mãos para o céu,
14 ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
14 e disse: Ó Senhor , Deus de Israel, não há Deus semelhante a ti, nem nos céus nem na terra, como tu, que guardas o concerto e a beneficência aos teus servos que caminham perante ti de todo o seu coração;
15 ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
15 que guardaste ao teu servo Davi, meu pai, o que lhe prometeste; porque tu, pela tua boca, o disseste e, pela tua mão, o cumpriste, como se vê neste dia.
16 ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
16 Agora, pois, Senhor , Deus de Israel, faze a teu servo Davi, meu pai, o que prometeste, dizendo: Nunca faltará de ti varão de diante de mim, que se assente sobre o trono de Israel; tão somente que teus filhos guardem seu caminho, andando na minha lei, como tu andaste diante de mim.
17 ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
17 E, agora, Senhor , Deus de Israel, verifique-se a tua palavra que disseste ao teu servo, a Davi.
18 ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
18 Mas verdadeiramente habitará Deus com os homens na terra? Eis que o céu e o céu dos céus não te podem conter, quanto menos esta casa que tenho edificado?
19 ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
19 Atende, pois, à oração do teu servo e à sua súplica, ó Senhor , meu Deus, para ouvires o clamor e a oração que o teu servo faz perante ti.
20 ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
20 Que os teus olhos estejam dia e noite abertos sobre este lugar, de que disseste que ali porias o teu nome, para ouvires a oração que o teu servo fizer neste lugar.
21 ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
21 Ouve, pois, as súplicas do teu servo, e do teu povo de Israel, que fizerem neste lugar; e ouve tu do lugar da tua habitação, desde os céus; ouve, pois, e perdoa.
22 ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
22 Quando alguém pecar contra o seu próximo e lhe impuser juramento de maldição, para se amaldiçoar a si mesmo, e o juramento de maldição vier perante o teu altar, nesta casa,
23 ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
23 ouve tu, então, desde os céus, e age, e julga a teus servos, pagando ao ímpio, lançando o seu proceder sobre a sua cabeça e justificando o justo, dando-lhe segundo a sua justiça.
24 ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
24 Quando também o teu povo de Israel for ferido diante do inimigo, por ter pecado contra ti, e eles se converterem, e confessarem o teu nome, e orarem, e suplicarem perante ti nesta casa,
25 ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
25 então, ouve tu desde os céus, e perdoa os pecados de teu povo de Israel, e faze-os tornar à terra que tens dado a eles e a seus pais.
26 ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
26 Quando os céus se cerrarem, e não houver chuva, por terem pecado contra ti, e orarem neste lugar, e confessarem teu nome, e se converterem dos seus pecados, quando tu os afligires,
27 ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
27 então, ouve tu desde os céus, e perdoa o pecado de teus servos e do teu povo de Israel, ensinando-lhes o bom caminho, em que andem, e dá chuva sobre a tua terra, que deste ao teu povo em herança.
28 ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
28 Havendo fome na terra, havendo peste, havendo queimadura dos trigos, ou ferrugem, gafanhotos, ou lagarta, cercando-a algum dos seus inimigos nas terras das suas portas, ou quando houver qualquer praga, ou qualquer enfermidade,
29 ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
29 toda oração, e toda súplica que qualquer homem fizer ou todo o teu povo de Israel, conhecendo cada um a sua praga e a sua dor e estendendo as suas mãos para esta casa,
30 ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
30 então, ouve tu desde os céus, do assento da tua habitação, e perdoa, e dá a cada um conforme todos os seus caminhos, segundo conheces o seu coração (pois só tu conheces o coração dos filhos dos homens),
31 ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
31 a fim de que te temam, para andarem nos teus caminhos, todos os dias que viverem na terra que deste a nossos pais.
32 ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
32 Assim também ao estrangeiro que não for do teu povo de Israel, mas vier de terras remotas por amor do teu grande nome, e da tua poderosa mão, e do teu braço estendido, vindo ele e orando nesta casa,
33 ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
33 então, ouve tu desde os céus, do assento da tua habitação, e faze conforme tudo o que o estrangeiro te suplicar, a fim de que todos os povos da terra conheçam o teu nome e te temam, como o teu povo de Israel, e a fim de saberem que pelo teu nome é chamada esta casa que edifiquei.
34 ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
34 Quando o teu povo sair à guerra contra os seus inimigos, pelo caminho que os enviares, e orarem a ti para a banda desta cidade que escolheste, e desta casa que edifiquei ao teu nome,
35 ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
35 ouve, então, desde os céus a sua oração e a sua súplica e executa o seu direito.
36 ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
36 Quando pecarem contra ti (pois não há homem que não peque), e tu te indignares contra eles e os entregares diante do inimigo, para que os que os cativarem os levem em cativeiro para alguma terra, remota ou vizinha;
37 ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
37 e, na terra para onde forem levados em cativeiro, tornarem a si, e se converterem, e, na terra do seu cativeiro, a ti suplicarem, dizendo: Pecamos, e perversamente fizemos, e impiamente procedemos,
38 ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
38 e se converterem a ti com todo o seu coração e com toda a sua alma, na terra do seu cativeiro, a que os levaram presos, e orarem para a banda da sua terra que deste a seus pais, e desta cidade que escolheste e desta casa que edifiquei ao teu nome,
39 ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
39 ouve, então, desde os céus, do assento da tua habitação, a sua oração e as suas súplicas, e executa o seu direito, e perdoa ao teu povo que houver pecado contra ti.
40 ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
40 Agora, pois, ó meu Deus, estejam os teus olhos abertos, e os teus ouvidos atentos à oração deste lugar.
41 ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.
41 Levanta-te, pois, agora, Senhor Deus, e entra para o teu repouso, tu e a arca da tua fortaleza; e os teus sacerdotes, ó Senhor Deus, sejam vestidos de salvação, e os teus santos se alegrem do bem.
42 ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
42 Ah! Senhor Deus, não faças virar o rosto do teu ungido; lembra-te das misericórdias de Davi, teu servo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Crônicas 6, comparar traduções ou montar um estudo — tudo direto pelo WhatsApp.