2 Crônicas 9
Kannada Bible (GL_KANNADA) vs ARA
ARA Almeida Revista e Atualizada 1993
1 1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
1 Tendo a rainha de Sabá ouvido a fama de Salomão, veio a Jerusalém prová-lo com perguntas difíceis, com mui grande comitiva; com camelos carregados de especiarias, de ouro em abundância e pedras preciosas; compareceu perante Salomão e lhe expôs tudo quanto trazia em sua mente.
2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
2 Salomão lhe deu resposta a todas as perguntas, e nada lhe houve profundo demais que não pudesse explicar.
3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ
3 Vendo, pois, a rainha de Sabá a sabedoria de Salomão, e a casa que edificara,
4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
4 e a comida da sua mesa, o lugar dos seus oficiais, o serviço dos seus criados, e os trajes deles, seus copeiros, e os seus trajes, e o holocausto que oferecia na Casa do Senhor , ficou como fora de si
5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.
5 e disse ao rei: Foi verdade a palavra que a teu respeito ouvi na minha terra e a respeito da tua sabedoria.
6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.
6 Eu, contudo, não cria no que se falava, até que vim e vi com os próprios olhos. Eis que não me contaram a metade da grandeza da tua sabedoria; sobrepujas a fama que ouvi.
7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.
7 Felizes os teus homens, felizes estes teus servos que estão sempre diante de ti e ouvem a tua sabedoria!
8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
8 Bendito seja o Senhor , teu Deus, que se agradou de ti para te colocar no seu trono como rei para o Senhor , teu Deus; porque o teu Deus ama a Israel para o estabelecer para sempre; por isso, te constituiu rei sobre ele, para executares juízo e justiça.
9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
9 Deu ela ao rei cento e vinte talentos de ouro, especiarias em grande abundância e pedras preciosas, e nunca houve especiarias tais como as que a rainha de Sabá deu ao rei Salomão.
10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.
10 Os servos de Hirão e os servos de Salomão, que de Ofir tinham trazido ouro, trouxeram também madeira de sândalo e pedras preciosas.
11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
11 Desta madeira de sândalo fez o rei balaústres para a Casa do Senhor e para a casa real, como também harpas e alaúdes para os cantores, quais nunca dantes se viram na terra de Judá.
12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
12 O rei Salomão deu à rainha de Sabá, além do equivalente ao que ela lhe trouxera, mais tudo o que ela desejou e pediu. Assim, voltou e foi para a sua terra, ela e os seus servos.
13 ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
13 O peso do ouro que se trazia a Salomão cada ano era de seiscentos e sessenta e seis talentos,
14 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
14 afora o que entrava dos vendedores e dos negociantes; também todos os reis da Arábia e os governadores dessa mesma terra traziam a Salomão ouro e prata.
15 ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.
15 Fez o rei Salomão duzentos paveses de ouro batido; seiscentos siclos de ouro batido mandou pesar para cada pavês.
16 ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
16 Fez também trezentos escudos de ouro batido; trezentos siclos de ouro mandou pesar para cada escudo. E o rei os pôs na Casa do Bosque do Líbano.
17 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
17 Fez mais o rei um grande trono de marfim e o cobriu de ouro puro.
18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
18 O trono tinha seis degraus e um estrado de ouro a ele pegado; de ambos os lados, tinha braços junto ao assento e dois leões junto aos braços.
19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.
19 Também doze leões estavam ali sobre os seis degraus, um em cada extremo destes. Nunca se fizera obra semelhante em nenhum dos reinos.
20 ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
20 Todas as taças de que se servia o rei Salomão para beber eram de ouro, e também de ouro puro, todas as da Casa do Bosque do Líbano; à prata, nos dias de Salomão, não se dava estimação nenhuma.
21 ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
21 Porque o rei tinha navios que iam a Társis, com os servos de Hirão; de três em três anos, voltavam os navios de Társis, trazendo ouro e prata, marfim, bugios e pavões.
22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
22 Assim, o rei Salomão excedeu a todos os reis do mundo, tanto em riqueza como em sabedoria.
23 ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
23 Todos os reis do mundo procuravam ir ter com ele para ouvir a sabedoria que Deus lhe pusera no coração.
24 ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.
24 Cada um trazia o seu presente, objetos de prata e de ouro, roupas, armaduras, especiarias, cavalos e mulas; assim ano após ano.
25 ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.
25 Tinha Salomão quatro mil cavalos em estrebarias para os seus carros e doze mil cavaleiros, que distribuiu às cidades para os carros e junto ao rei, em Jerusalém.
26 ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.
26 Dominava Salomão sobre todos os reis desde o Eufrates até à terra dos filisteus e até ao limite do Egito.
27 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
27 Fez o rei que, em Jerusalém, houvesse prata como pedras e cedros em abundância como os sicômoros que estão nas planícies.
28 ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.
28 Importavam-se cavalos para Salomão, do Egito e de todas as terras.
29 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
29 Quanto aos mais atos de Salomão, tanto os primeiros como os últimos, porventura, não estão escritos no Livro da História de Natã, o profeta, e na Profecia de Aías, o silonita, e nas Visões de Ido, o vidente, acerca de Jeroboão, filho de Nebate?
30 ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.
30 Quarenta anos reinou Salomão em Jerusalém sobre todo o Israel.
31 ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
31 Descansou com seus pais e foi sepultado na Cidade de Davi, seu pai, e Roboão, seu filho, reinou em seu lugar.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Crônicas 9, comparar traduções ou montar um estudo — tudo direto pelo WhatsApp.