2 Reis 5
Kannada Bible (GL_KANNADA) vs VC
VC Versão Católica
1 ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
1 Naamã, general do exército do rei da Síria, gozava de grande prestígio diante de seu amo, e era muito considerado, porque, por meio dele, o Senhor salvou a Síria; era um homem valente, mas leproso.
2 ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
2 Ora, tendo os sírios feito uma incursão no território de Israel, levaram consigo uma jovem, a qual ficou a serviço da mulher de Naamã.
3 ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
3 Ela disse à sua senhora: Ah, se meu amo fosse ter com o profeta que reside em Samaria, ele o curaria da lepra!
4 ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
4 Ouvindo isso, Naamã foi e contou ao seu soberano o que dissera a jovem israelita.
5 ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
5 O rei da Síria respondeu-lhe: Vai, que eu enviarei uma carta ao rei de Israel. Naamã partiu com dez talentos de prata, seis mil siclos de ouro e dez vestes de festa.
6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
6 Levou ao rei de Israel uma carta concebida nestes termos: Ao receberes esta carta, saberás que te mando Naamã, meu servo, para que o cures da lepra.
7 ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
7 Tendo lido a missiva, o rei de Israel rasgou as vestes e exclamou: Sou eu porventura um deus, que possa dar a morte ou a vida, para que esse me mande dizer que cure um homem da lepra? Vede bem que ele anda buscando pretextos contra mim.
8 ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
8 Quando Eliseu, o homem de Deus, soube que o rei tinha rasgado as vestes, mandou-lhe dizer: Por que rasgaste as tuas vestes? Que ele venha a mim, e saberá que há um profeta em Israel.
9 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.
9 Naamã veio com seu carro e seus cavalos e parou à porta de Eliseu.
10 ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
10 Este mandou-lhe dizer por um mensageiro: Vai, lava-te sete vezes no Jordão e tua carne ficará limpa.
11 ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
11 Naamã se foi, despeitado, dizendo: Eu pensava que ele viria em pessoa, e, diante de mim, invocaria o Senhor, seu Deus, poria a mão no lugar infetado e me curaria da lepra.
12 ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
12 Porventura os rios de Damasco, o Abana e o Farfar, não são melhores que todas as águas de Israel? Não me poderia eu lavar neles e ficar limpo? E, voltando-se, retirou-se encolerizado.
13 ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.
13 Mas seus servos, aproximando-se dele, disseram-lhe: Meu pai, mesmo que o profeta te tivesse ordenado algo difícil, não o deverias fazer? Quanto mais agora que ele te disse: Lava-te e serás curado.
14 ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
14 Naamã desceu ao Jordão e banhou-se ali sete vezes, como lhe ordenara o homem de Deus, e sua carne tornou-se tenra como a de uma criança.
15 ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
15 Voltando então para o homem de Deus, com toda a sua comitiva, entrou, apresentou-se diante dele e disse: Reconheço que não há outro Deus em toda a terra, senão o de Israel. Aceita este presente do teu servo.
16 ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
16 Pela vida do Senhor a quem sirvo, replicou Eliseu, não aceitarei nada. E apesar da instância de Naamã, ele recusou.
17 ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
17 Então Naamã disse: Se não o aceitas, permite ao menos que se dê ao teu servo da terra deste país, tanto quanto possam carregar duas mulas, porque doravante este teu servo não oferecerá mais holocausto nem sacrifício a outros deuses, mas só ao Senhor.
18 ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.
18 Entretanto, que o Senhor perdoe ao teu servo no seguinte: Quando o meu soberano entrar no templo de Remon para adorar, apoiando-se no meu braço, e que eu também me prostrar no templo de Remon, que o Senhor perdoe esse gesto ao teu servo.
19 ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
19 Eliseu respondeu: Faze-o tranqüilamente. E Naamã o deixou.
20 ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
20 Naamã estava já a certa distância, quando Giezi, servo de Eliseu, disse consigo: Eis que meu amo poupou a esse sírio, Naamã, recusando aceitar de sua mão o que ele tinha trazido. Pela vida de Deus! Vou correr atrás dele, e obterei dele alguma coisa.
21 ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
21 E Giezi foi ao alcance de Naamã, o qual, vendo-o correr, desceu do carro e veio-lhe ao encontro. E disse-lhe: Tudo vai bem?
22 ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
22 Sim, respondeu Giezi; meu senhor manda-me dizer-te: Acabam de chegar à minha casa, da montanha de Efraim, dois jovens, filhos de profetas. Rogo-te que me dês para eles um talento de prata e dois hábitos de festa.
23 ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
23 Naamã respondeu: É melhor que leves dois talentos. Naamã insistiu e, atando dois talentos e dois hábitos de festa em dois sacos, entregou-os a dois de seus escravos para que os levassem a Giezi.
24 ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.
24 Quando atingiram a colina, Giezi tomou os objetos de suas mãos e guardou-os na sua casa. Depois disso, despediu os dois homens e estes se retiraram.
25 ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
25 E, tendo entrado, apresentou-se ao seu amo. Eliseu disse-lhe: De onde vens, Giezi? Teu servo não foi a parte alguma, respondeu ele.
26 ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?
26 Mas Eliseu replicou: Não estava porventura presente o meu espírito, quando um homem saltou de seu carro ao teu encontro? É este o momento de aceitar dinheiro, adquirir vestes, oliveiras e vinhas, ovelhas e bois, servos e servas?
27 ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
27 A lepra de Naamã se pegará a ti e a toda a tua descendência para sempre. E Giezi saiu da presença de Eliseu coberto de uma lepra branca como a neve.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Reis 5, comparar traduções ou montar um estudo — tudo direto pelo WhatsApp.