2 Samuel 15

Kannada Bible (GL_KANNADA) vs ARIB

Sair da comparação
ARIB Almeida Revisada Imprensa Bíblica
1 ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
1 Aconteceu depois disso que Absalão adquiriu para si um carro e cavalos, e cinqüenta homens que corressem adiante dele.
2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
2 E levantando-se Absalão cedo, parava ao lado do caminho da porta; e quando algum homem tinha uma demanda para, vir ao rei a juízo, Absalão o chamava a si e lhe dizia: De que cidade és tu? E, dizendo ele: De tal tribo de Israel é teu servo;
3 ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
3 Absalão lhe dizia: Olha, a tua causa é boa e reta, porém não há da parte do rei quem te ouça.
4 ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
4 Dizia mais Absalão: Ah, quem me dera ser constituído juiz na terra! para que viesse ter comigo todo homem que tivesse demanda ou questão, e eu lhe faria justiça.
5 ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
5 Sucedia também que, quando alguém se chegava a ele para lhe fazer reverência, ele estendia a mão e, pegando nele o beijava.
6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
6 Assim fazia Absalão a todo o Israel que vinha ao rei para juízo; desse modo Absalão furtava o coração dos homens de Israel.
7 ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
7 Aconteceu, ao cabo de quatro anos, que Absalão disse ao rei: Deixa-me ir pagar em Hebrom o voto que fiz ao Senhor.
8 ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
8 Porque, morando eu em Gesur, na Síria, fez o teu servo um voto, dizendo: Se o Senhor, na verdade, me fizer tornar a Jerusalém, servirei ao Senhor.
9 ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
9 Então lhe disse o rei: Vai em paz. Levantou-se, pois, e foi para Hebrom.
10 ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
10 Absalão, porém, enviou emissários por todas as tribos de Israel, dizendo: Quando ouvirdes o som da trombeta, direis: Absalão reina em Hebrom.
11 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
11 E de Jerusalém foram com Absalão duzentos homens que tinham sido convidados; mas iam na sua simplicidade, pois nada sabiam daquele desígnio.
12 ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
12 Também Absalão, enquanto oferecia os seus sacrifícios, mandou vir da cidade de Siló, Aitofel, o gilonita, conselheiro de Davi. E a conspiração tornava-se poderosa, crescendo cada vez mais o número do povo que estava com Absalão.
13 ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
13 Então veio um mensageiro a Davi, dizendo: O coração de todo o Israel vai após Absalão.
14 ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
14 Disse, pois, Davi a todos os seus servos que estavam com ele em Jerusalém: Levantai-vos, e fujamos, porque doutra forma não poderemos escapar diante de Absalão. Apressai-vos a sair; não seja caso que ele nos apanhe de súbito, e lance sobre nós a ruína, e fira a cidade ao fio da espada.
15 ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
15 Então os servos do rei lhe disseram: Eis aqui os teus servos para tudo quanto determinar o rei, nosso senhor.
16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
16 Assim saiu o rei, com todos os de sua casa, deixando, porém, dez concubinas para guardarem a casa.
17 ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
17 Tendo, pois, saído o rei com todo o povo, pararam na última casa:
18 ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
18 E todos os seus servos iam ao seu lado; mas todos os quereteus, e todos os peleteus, e todos os giteus, seiscentos homens que o seguiram de Gate, caminhavam adiante do rei.
19 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
19 Disse o rei a Itai, o giteu: Por que irias tu também conosco? Volta e fica-te com o rei, porque és estrangeiro e exilado; torna a teu lugar.
20 ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
20 Ontem vieste, e te levaria eu hoje conosco a vaguear? Pois eu vou para onde puder ir; volta, e lei, e contigo teus irmãos; a misericórdia e a fidelidade sejam contigo.
21 ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
21 Respondeu, porém, Itai ao rei, e disse: Vive o Senhor, e vive o rei meu senhor, que no lugar em que estiver o rei meu senhor, seja para morte, seja para vida, aí estará também o eu servo.
22 ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
22 Então disse Davi a Itai: Vai, pois, e passa adiante. Assim passou Itai, o giteu, e todos os seus homens, e todos os pequeninos que havia com ele.
23 ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
23 Toda a terra chorava em alta voz, enquanto todo o povo passava; e o rei atravessou o ribeiro de Cedrom, e todo o povo caminhava na direção do deserto.
24 ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
24 E chegou Abiatar; e veio também Zadoque, e com ele todos os levitas que levavam a arca do pacto de Deus; e puseram ali a arca de Deus, até que todo o povo acabou de sair da cidade.
25 ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
25 Então disse o rei a Zadoque: Torna a levar a arca de Deus à cidade; pois, se eu achar graça aos olhos do Senhor, ele me fará voltar para lá, e me deixará ver a arca e a sua habitação.
26 ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
26 Se ele, porém, disser: Não tenho prazer em ti; eis-me aqui, faça a mim o que bem lhe parecer.
27 ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
27 Disse mais o rei a Zadoque, o sacerdote: Não és tu porventura vidente? volta, pois, para a cidade em paz, e contigo também teus dois filhos, Aimaaz, teu filho, e Jônatas, filho de Abiatar.
28 ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
28 Vede eu me demorarei nos vaus do deserto até que tenha notícias da vossa parte.
29 ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.
29 Zadoque, pois, e Abiatar tornaram a levar para Jerusalém a arca de Deus, e ficaram ali.
30 ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
30 Mas Davi, subindo pela encosta do monte das Oliveiras, ia chorando; tinha a cabeça coberta, e caminhava com os pés descalços. Também todo o povo que ia com ele tinha a cabeça coberta, e subia chorando sem cessar.
31 ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
31 Então disseram a Davi: Aitofel está entre os que conspiraram com Absalão. Pelo que disse Davi: Ó Senhor, torna o conselho de Aitofel em loucura!
32 ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
32 Ora, aconteceu que, chegando Davi ao cume, onde se costumava adorar a Deus, Husai, o arquita, veio encontrar-se com ele, com a roupa rasgada e a cabeça coberta de terra.
33 ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.
33 Disse-lhe Davi: Se fores comigo, ser-me-ás pesado;
34 ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
34 porém se voltares para a cidade, e disseres a Absalão: Eu serei, ó rei, teu servo; como fui dantes servo de teu pai, assim agora serei teu servo; dissipar-me-ás então a conselho de Aitofel.
35 ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
35 E não estão ali contigo Zadoque e Abiatar, sacerdotes? Portanto, tudo o que ouvires da casa do rei lhes dirás.
36 ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.
36 Eis que estão também ali com eles seus dois filhos, Aimaaz, filho de Zadoque, e Jônatas, filho de Abiatar; por eles me avisareis de tudo o que ouvirdes.
37 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
37 Husai, pois, amigo de Davi, voltou para a cidade. E Absalão entrou em Jerusalém.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 15, comparar traduções ou montar um estudo — tudo direto pelo WhatsApp.