2 Samuel 16
Kannada Bible (GL_KANNADA) vs ACF
ACF Almeida Corrigida Fiel
1 ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
1 E passando Davi um pouco mais adiante do cume, eis que Ziba, o servo de Mefibosete, veio encontrar-se com ele, com um par de jumentos albardados, e sobre eles duzentos pães, com cem cachos de passas, e cem de frutas de verão e um odre de vinho.
2 ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
2 E disse o rei a Ziba: Que pretendes com isto? E disse Ziba: Os jumentos são para a casa do rei, para se montarem neles; e o pão e as frutas de verão para comerem os moços; e o vinho para beberem os cansados no deserto.
3 ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
3 Então disse o rei: Ora, onde está o filho de teu senhor? E disse Ziba ao rei: Eis que ficou em Jerusalém; porque disse: Hoje me restituirá a casa de Israel o reino de meu pai.
4 ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
4 Então disse o rei a Ziba: Eis que teu é tudo quanto tem Mefibosete. E disse Ziba: Eu me inclino, que eu ache graça em teus olhos, ó rei meu senhor.
5 ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
5 E, chegando o rei Davi a Baurim, eis que dali saiu um homem da linhagem da casa de Saul, cujo nome era Simei, filho de Gera, e, saindo, ia amaldiçoando.
6 ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
6 E atirava pedras contra Davi, e contra todos os servos do rei Davi; ainda que todo o povo e todos os valentes iam à sua direita e à sua esquerda.
7 ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
7 E, amaldiçoando-o Simei, assim dizia: Sai, sai, homem de sangue, e homem de Belial.
8 ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
8 O Senhor te deu agora a paga de todo o sangue da casa de Saul, em cujo lugar tens reinado; já deu o Senhor o reino na mão de Absalão teu filho; e eis-te agora na tua desgraça, porque és um homem de sangue.
9 ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
9 Então disse Abisai, filho de Zeruia, ao rei: Por que amaldiçoaria este cão morto ao rei meu senhor? Deixa-me passar, e lhe tirarei a cabeça.
10 ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
10 Disse, porém, o rei: Que tenho eu convosco, filhos de Zeruia? Ora deixai-o amaldiçoar; pois o Senhor lhe disse: Amaldiçoa a Davi; quem pois diria: Por que assim fizeste?
11 ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
11 Disse mais Davi a Abisai, e a todos os seus servos: Eis que meu filho, que saiu das minhas entranhas, procura a minha morte; quanto mais ainda este benjamita? Deixai-o, que amaldiçoe; porque o Senhor lho disse.
12 ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
12 Porventura o Senhor olhará para a minha miséria; e o Senhor me pagará com bem a sua maldição deste dia.
13 ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
13 Prosseguiram, pois, o seu caminho, Davi e os seus homens; e também Simei ia ao longo do monte, defronte dele, caminhando e amaldiçoando, e atirava pedras contra ele, e levantava poeira.
14 ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
14 E o rei e todo o povo que ia com ele chegaram cansados, e refrescaram-se ali.
15 ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು
15 Absalão, pois, e todo o povo, os homens de Israel, vieram a Jerusalém; e Aitofel com ele.
16 ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
16 E sucedeu que, chegando Husai, o arquita, amigo de Davi, a Absalão, disse Husai a Absalão: Viva o rei, viva o rei!
17 ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
17 Porém Absalão disse a Husai: É esta a tua beneficência para com o teu amigo? Por que não foste com o teu amigo?
18 ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
18 E disse Husai a Absalão: Não, porém daquele que eleger o Senhor, e todo este povo, e todos os homens de Israel, dele serei e com ele ficarei.
19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
19 E, demais disto, a quem serviria eu? Porventura não seria diante de seu filho? Como servi diante de teu pai, assim serei diante de ti.
20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
20 Então disse Absalão a Aitofel: Dai conselho entre vós sobre o que devemos fazer.
21 ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
21 E disse Aitofel a Absalão: Possue as concubinas de teu pai, que deixou para guardarem a casa; e assim todo o Israel ouvirá que te fizeste aborrecível para com teu pai; e se fortalecerão as mãos de todos os que estão contigo.
22 ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.
22 Estenderam, pois, para Absalão uma tenda no terraço; e Absalão possuiu as concubinas de seu pai, perante os olhos de todo o Israel.
23 ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
23 E era o conselho de Aitofel, que aconselhava naqueles dias, como se a palavra de Deus se consultara; tal era todo o conselho de Aitofel, assim para com Davi como para com Absalão.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Samuel 16, comparar traduções ou montar um estudo — tudo direto pelo WhatsApp.