2 Samuel 17

Kannada Bible (GL_KANNADA) vs BKJ

Sair da comparação
1 ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
1 Além disso, Aitofel disse a Absalão: Deixa com que eu escolha, agora, doze mil homens, e eu me levantarei e perseguirei Davi esta noite;
2 ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
2 e eu lhe sobrevirei enquanto ele está exausto e com a mão fragilizada, e fá-lo-ei temoroso; e todo o povo que está com ele fugirá; e eu ferirei somente o rei;
3 ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
3 e eu trarei de volta a ti todo o povo; o homem ao qual tu buscas é como se todos retornassem; assim todo o povo estará em paz.
4 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
4 E o dizer mui agradou a Absalão, e a todos os anciãos de Israel.
5 ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.
5 Então disse Absalão: Chame, agora, também Husai, o arquita, e ouçamos do mesmo modo o que ele diz.
6 ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
6 E quando Husai chegou a Absalão, Absalão lhe falou, dizendo: Aitofel falou desta maneira: Devemos proceder conforme o seu dizer? Caso não, fala tu.
7 ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.
7 E Husai disse a Absalão: O conselho que Aitofel deu não é bom nesta hora.
8 ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
8 Porque Husai disse: Tu conheces o teu pai e os seus homens, que são homens valentes, e estão amargurados nas suas mentes, como uma ursa cujos filhotes lhe foram roubados no campo; e o teu pai é um homem de guerra, e não se alojará com o povo.
9 ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
9 Eis que agora ele está escondido em algum fosso, ou em algum outro lugar; e será que, quando alguns forem derrubados inicialmente, quem quer que ouvir isto dirá: Há um massacre entre o povo que segue Absalão.
10 ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
10 E também aquele que for valente, cujo coração for como o coração de um leão, derreter-se-á por completo; porque todo o Israel sabe que o teu pai é um homem valente, e aqueles que estão com ele são homens valentes.
11 ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
11 Portanto, eu aconselho que todo o Israel se reúna a ti, desde Dã até Berseba, como a areia que está junto ao mar em multidão; e que tu saias pessoalmente em batalha.
12 ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
12 Assim, viremos sobre ele em algum lugar onde ele será achado, e nos lançaremos sobre ele como o orvalho cai sobre o solo; e dele e de todos os homens que estão com ele não restará nada mais do que um.
13 ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
13 Além disso, se ele for retido em uma cidade, então todo o Israel trará cordas àquela cidade, e nós a arrastaremos para o rio, até que nela não haja mais nem uma pedrinha.
14 ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
14 E Absalão e todos os homens de Israel disseram: O conselho de Husai, o arquita, é melhor do que o conselho de Aitofel. Porque o SENHOR ordenou a derrota do bom conselho de Aitofel, com o intento de que o SENHOR pudesse trazer o mal sobre Absalão.
15 ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
15 Então disse Husai a Zadoque e a Abiatar, os sacerdotes: Assim e assim Aitofel aconselhou Absalão e os anciãos de Israel; e assim e assim tenho eu aconselhado.
16 ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
16 Agora, portanto, enviai rapidamente, e contai a Davi, dizendo: Não te alojes nesta noite nas planícies do deserto, mas atravessa depressa; para que o rei não seja engolido, e todo o povo que está com ele.
17 ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
17 Ora, Jônatas e Aimaás permaneceram em En-Rogel; porque eles não poderiam ser vistos entrando na cidade; e uma criada foi e lhes contou; e eles foram e contaram ao rei Davi.
18 ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
18 Todavia, um moço os viu e contou a Absalão; mas os dois se foram rapidamente, e chegaram à casa de um homem em Baurim, o qual tinha um poço no seu pátio, no qual eles desceram.
19 ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
19 E a mulher tomou e espalhou uma cobertura sobre a boca do poço, e espalhou sobre ela cereal do chão; e a coisa não era percebida.
20 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
20 E quando os servos de Absalão chegaram à mulher na casa, eles disseram: Onde está Aimaás e Jônatas? E a mulher disse a eles: Eles passaram por cima do regato de água. E quando procuraram e não conseguiram encontrá-los, eles retornaram a Jerusalém.
21 ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
21 E sucedeu que, depois que eles partiram, eles saíram do poço, e foram e falaram ao rei Davi, e disseram a Davi: Levanta-te e passa depressa sobre a água; porquanto assim Aitofel aconselhou contra ti.
22 ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
22 Então Davi se levantou, e todo o povo que estava com ele, e eles atravessaram o Jordão; pela luz da manhã não faltava ali nenhum deles que não houvesse atravessado o Jordão.
23 ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
23 E quando Aitofel viu que o seu conselho não fora seguido, ele selou o seu jumento, e se levantou, e o levou para a sua casa, para a sua cidade, e pôs a sua casa em ordem, e se enforcou, e morreu, e foi enterrado no sepulcro do seu pai.
24 ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
24 Então Davi veio até Maanaim. E Absalão atravessou o Jordão, ele e todos os homens de Israel com ele.
25 ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
25 E Absalão constitui Amasa capitão do exército em lugar de Joabe; esse Amasa era filho de um homem cujo nome era Itra, um israelita, que entrou em Abigail, filha de Naás, irmã de Zeruia, mãe de Joabe.
26 ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.
26 Assim, Israel e Absalão acamparam na terra de Gileade.
27 ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌
27 E sucedeu que, quando Davi havia chegado a Maanaim, Sobi, o filho de Naás de Rabá, dos filhos de Amom, e Maquir, o filho de Amiel de Lo-Debar, e Barzilai, o gileadita de Rogelim,
28 ರೋಗೆಲೀಮ್‌ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂ
28 trouxeram camas, e bacias, e vasos de barro, e trigo, e cevada, e farinha, e cereal tostado, e feijões, e lentilhas, e legumes tostados,
29 ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
29 e mel, e manteiga, e ovelhas e queijo de vacas para Davi, e para o povo que estava com ele comer; porquanto disseram: O povo está faminto, exausto e sedento no deserto.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 17, comparar traduções ou montar um estudo — tudo direto pelo WhatsApp.