2 Samuel 19

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.
1 E disseram a Joabe: Eis que o rei anda chorando e lastima-se por Absalão.
2 ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.
2 Então, a vitória se tornou, naquele mesmo dia, em tristeza para todo o povo; porque, naquele mesmo dia, o povo ouvira dizer: Mui triste está o rei por causa de seu filho.
3 ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು.
3 E, naquele mesmo dia, o povo entrou às furtadelas na cidade, como o povo de vergonha se escoa quando foge da peleja.
4 ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
4 Estava, pois, o rei com o rosto coberto; e o rei gritava a alta voz: Meu filho Absalão, Absalão, meu filho, meu filho!
5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
5 Então, entrou Joabe ao rei, em casa, e disse: Hoje, envergonhaste a face de todos os teus servos, que livraram hoje a tua vida, e a vida de teus filhos, e de tuas filhas, e a vida de tuas mulheres, e a vida de tuas concubinas,
6 ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.
6 amando tu aos que te aborrecem e aborrecendo aos que te amam; porque, hoje, dás a entender que nada valem para contigo capitães e servos; porque entendo, hoje, que, se Absalão vivesse, e todos nós, hoje, fôssemos mortos, então, bem te parecera aos teus olhos.
7 ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
7 Levanta-te, pois, agora; sai e fala conforme o coração de teus servos; porque, pelo Senhor , te juro que, se não saíres, nem um só homem ficará contigo esta noite; e maior mal te será isso do que todo o mal que tem vindo sobre ti desde a tua mocidade até agora.
8 ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
8 Então, o rei se levantou e se assentou à porta, e fizeram saber a todo o povo, dizendo: Eis que o rei está assentado à porta. Então, todo o povo veio apresentar-se diante do rei; porém Israel fugiu cada um para as suas tendas.
9 ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
9 E todo o povo, em todas as tribos de Israel, andava altercando entre si, dizendo: O rei nos tirou das mãos de nossos inimigos, e ele nos livrou das mãos dos filisteus; e agora fugiu da terra por causa de Absalão.
10 ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
10 E Absalão, a quem ungimos sobre nós, já morreu na peleja; agora, pois, por que vos calais e não fazeis voltar o rei?
11 ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
11 Então, o rei Davi enviou a Zadoque e a Abiatar, sacerdotes, dizendo: Falai aos anciãos de Judá, dizendo: Por que seríeis vós os últimos em tornar a trazer o rei para a sua casa? (Porque as palavras de todo o Israel chegaram ao rei, até à sua casa.)
12 ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?
12 Vós sois meus irmãos, meus ossos e minha carne sois vós; por que, pois, seríeis os últimos em tornar a trazer o rei?
13 ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
13 E a Amasa direis: Porventura, não és tu meu osso e minha carne? Assim me faça Deus, e outro tanto, se não fores chefe do arraial diante de mim para sempre, em lugar de Joabe.
14 ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
14 Assim, moveu o coração de todos os homens de Judá, como o de um só homem; e enviaram ao rei, dizendo: Volta tu com todos os teus servos.
15 ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.
15 Então, o rei voltou e chegou até ao Jordão; e Judá veio a Gilgal, para ir encontrar-se com o rei, à outra banda do Jordão.
16 ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
16 E apressou-se Simei, filho de Gera, filho de Benjamim, que era de Baurim; e desceu com os homens de Judá a encontrar-se com o rei Davi.
17 ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
17 E com ele mil varões de Benjamim, como também Ziba, servo da casa de Saul, e seus quinze filhos, e seus vinte servos com ele; e prontamente passaram o Jordão adiante do rei.
18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--
18 E, passando a barca, para fazer passar a casa do rei e para fazer o que bem parecesse aos seus olhos, então, Simei, filho de Gera, se prostrou diante do rei, passando ele o Jordão.
19 ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
19 E disse ao rei: Não me impute meu senhor a minha culpa, e não te lembres do que tão perversamente fez teu servo, no dia em que o rei, meu senhor, saiu de Jerusalém; não conserve o rei isso no coração.
20 ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.
20 Porque teu servo deveras confessa que eu pequei; porém eis que eu sou o primeiro que de toda a casa de José desci a encontrar-me com o rei, meu senhor.
21 ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.
21 Então, respondeu Abisai, filho de Zeruia, e disse: Não morreria, pois, Simei por isso, havendo amaldiçoado ao ungido do Senhor ?
22 ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
22 Porém Davi disse: Que tenho eu convosco, filhos de Zeruia, para que hoje me sejais adversários? Morreria alguém hoje em Israel? Por que, porventura, não sei que hoje fui feito rei sobre Israel?
23 ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
23 E disse o rei a Simei: Não morrerás. E o rei lho jurou.
24 ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
24 Também Mefibosete, filho de Saul, desceu a encontrar-se com o rei e não tinha lavado os pés, nem tinha feito a barba, nem tinha lavado as suas vestes desde o dia em que o rei tinha saído até ao dia em que voltou em paz.
25 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
25 E sucedeu que, vindo ele a Jerusalém a encontrar-se com o rei, disse-lhe o rei: Por que não foste comigo, Mefibosete?
26 ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
26 E disse ele: Ó rei, meu senhor, o meu servo me enganou; porque o teu servo dizia: Albardarei um jumento, e nele montarei, e irei com o rei; pois o teu servo é coxo.
27 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
27 De mais disso, falsamente acusou o teu servo diante do rei, meu senhor; porém o rei, meu senhor, é como um anjo de Deus; faze, pois, o que parecer bem aos teus olhos.
28 ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
28 Porque toda a casa de meu pai não era senão de homens dignos de morte diante do rei meu senhor; e, contudo, puseste a teu servo entre os que comem à tua mesa; e que mais direito tenho eu de clamar ao rei?
29 ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
29 E disse-lhe o rei: Por que ainda falas mais de teus negócios? Já disse eu: Tu e Ziba, reparti as terras.
30 ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
30 E disse Mefibosete ao rei: Tome ele também tudo, pois já veio o rei, meu senhor, em paz à sua casa.
31 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
31 Também Barzilai, o gileadita, desceu de Rogelim e passou com o rei o Jordão, para o acompanhar à outra banda do Jordão.
32 ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
32 E era Barzilai mui velho, da idade de oitenta anos; e ele tinha sustentado o rei, quando tinha a sua morada em Maanaim, porque era homem mui grande.
33 ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
33 E disse o rei a Barzilai: Passa tu comigo, e sustentar-te-ei comigo em Jerusalém.
34 ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
34 Porém Barzilai disse ao rei: Quantos serão os dias dos anos da minha vida, para que suba com o rei a Jerusalém?
35 ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
35 Da idade de oitenta anos sou eu hoje; poderia eu discernir entre bom e mau? Poderia o teu servo ter gosto no que comer e beber? Poderia eu mais ouvir a voz dos cantores e cantoras? E por que será o teu servo ainda pesado ao rei, meu senhor?
36 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
36 Com o rei passará teu servo ainda um pouco mais além do Jordão; e por que me recompensará o rei com tal recompensa?
37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
37 Deixa voltar o teu servo, e morrerei na minha cidade junto à sepultura de meu pai e de minha mãe; mas eis aí está o teu servo Quimã; que passe com o rei, meu senhor, e faze-lhe o que bem parecer aos teus olhos.
38 ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
38 Então, disse o rei: Quimã passará comigo, e eu lhe farei como bem parecer aos teus olhos, e tudo quanto me pedires te farei.
39 ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
39 Havendo, pois, todo o povo passado o Jordão, e, passando também o rei, beijou o rei a Barzilai e o abençoou; e ele voltou para o seu lugar.
40 ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
40 E dali passou o rei a Gilgal, e Quimã passou com ele; e todo o povo de Judá conduziu o rei, como também a metade do povo de Israel.
41 ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
41 E eis que todos os homens de Israel vieram ao rei e disseram ao rei: Por que te furtaram nossos irmãos, os homens de Judá, e conduziram o rei e a sua casa por sobre o Jordão e todos os homens de Davi com eles?
42 ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.
42 Então, responderam todos os homens de Judá aos homens de Israel: Porquanto o rei é nosso parente; e por que vos irais por isso? Porventura, comemos à custa do rei ou nos apresentou algum presente?
43 ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
43 E responderam os homens de Israel aos homens de Judá e disseram: Dez partes temos no rei e até em Davi mais temos nós do que vós; porque, pois, fizestes pouca conta de nós, para que a nossa palavra não fosse a primeira, para tornar a trazer o nosso rei? Porém a palavra dos homens de Judá foi mais forte do que a palavra dos homens de Israel.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Samuel 19, comparar traduções ou montar um estudo — tudo direto pelo WhatsApp.