2 Timóteo 1

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
1 Paulo, apóstolo de Jesus Cristo, pela vontade de Deus, segundo a promessa da vida que está em Cristo Jesus,
2 ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
2 A Timóteo, meu amado filho: Graça, misericórdia, e paz da parte de Deus Pai, e da de Cristo Jesus, Senhor nosso.
3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
3 Dou graças a Deus, a quem desde os meus antepassados sirvo com uma consciência pura, de que sem cessar faço memória de ti nas minhas orações noite e dia;
4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
4 Desejando muito ver-te, lembrando-me das tuas lágrimas, para me encher de gozo;
5 ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
5 Trazendo à memória a fé não fingida que em ti há, a qual habitou primeiro em tua avó Lóide, e em tua mãe Eunice, e estou certo de que também habita em ti.
6 ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
6 Por cujo motivo te lembro que despertes o dom de Deus que existe em ti pela imposição das minhas mãos.
7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.
7 Porque Deus não nos deu o espírito de temor, mas de fortaleza, e de amor, e de moderação.
8 ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
8 Portanto, não te envergonhes do testemunho de nosso Senhor, nem de mim, que sou prisioneiro seu; antes participa das aflições do evangelho segundo o poder de Deus,
9 ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
9 Que nos salvou, e chamou com uma santa vocação; não segundo as nossas obras, mas segundo o seu próprio propósito e graça que nos foi dada em Cristo Jesus antes dos tempos dos séculos;
10 ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
10 E que é manifesta agora pela aparição de nosso Salvador Jesus Cristo, o qual aboliu a morte, e trouxe à luz a vida e a incorrupção pelo evangelho;
11 ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
11 Para o que fui constituído pregador, e apóstolo, e doutor dos gentios.
12 ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
12 Por cuja causa padeço também isto, mas não me envergonho; porque eu sei em quem tenho crido, e estou certo de que é poderoso para guardar o meu depósito até àquele dia.
13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
13 Conserva o modelo das sãs palavras que de mim tens ouvido, na fé e no amor que há em Cristo Jesus.
14 ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
14 Guarda o bom depósito pelo Espírito Santo que habita em nós.
15 ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
15 Bem sabes isto, que os que estão na Ásia todos se apartaram de mim; entre os quais foram Figelo e Hermógenes.
16 ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
16 O Senhor conceda misericórdia à casa de Onesíforo, porque muitas vezes me recreou, e não se envergonhou das minhas cadeias.
17 ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನು.
17 Antes, vindo ele a Roma, com muito cuidado me procurou e me achou.
18 ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
18 O Senhor lhe conceda que naquele dia ache misericórdia diante do Senhor. E, quanto me ajudou em Éfeso, melhor o sabes tu.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Timóteo 1, comparar traduções ou montar um estudo — tudo direto pelo WhatsApp.