2 Timóteo 4
Kannada Bible (GL_KANNADA) vs ARA
ARA Almeida Revista e Atualizada 1993
1 ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
1 Conjuro-te, perante Deus e Cristo Jesus, que há de julgar vivos e mortos, pela sua manifestação e pelo seu reino:
2 ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
2 prega a palavra, insta, quer seja oportuno, quer não, corrige, repreende, exorta com toda a longanimidade e doutrina.
3 ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
3 Pois haverá tempo em que não suportarão a sã doutrina; pelo contrário, cercar-se-ão de mestres segundo as suas próprias cobiças, como que sentindo coceira nos ouvidos;
4 ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
4 e se recusarão a dar ouvidos à verdade, entregando-se às fábulas.
5 ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು.
5 Tu, porém, sê sóbrio em todas as coisas, suporta as aflições, faze o trabalho de um evangelista, cumpre cabalmente o teu ministério.
6 ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
6 Quanto a mim, estou sendo já oferecido por libação, e o tempo da minha partida é chegado.
7 ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
7 Combati o bom combate, completei a carreira, guardei a fé.
8 ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
8 Já agora a coroa da justiça me está guardada, a qual o Senhor, reto juiz, me dará naquele Dia; e não somente a mim, mas também a todos quantos amam a sua vinda.
9 ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;
9 Procura vir ter comigo depressa.
10 ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
10 Porque Demas, tendo amado o presente século, me abandonou e se foi para Tessalônica; Crescente foi para a Galácia, Tito, para a Dalmácia.
11 ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
11 Somente Lucas está comigo. Toma contigo Marcos e traze-o, pois me é útil para o ministério.
12 ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
12 Quanto a Tíquico, mandei-o até Éfeso.
13 ತ್ರೋವ ದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟುಬಂದ ಮೇಲಂಗಿ ಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದ ಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
13 Quando vieres, traze a capa que deixei em Trôade, em casa de Carpo, bem como os livros, especialmente os pergaminhos.
14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
14 Alexandre, o latoeiro, causou-me muitos males; o Senhor lhe dará a paga segundo as suas obras.
15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
15 Tu, guarda-te também dele, porque resistiu fortemente às nossas palavras.
16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
16 Na minha primeira defesa, ninguém foi a meu favor; antes, todos me abandonaram. Que isto não lhes seja posto em conta!
17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
17 Mas o Senhor me assistiu e me revestiu de forças, para que, por meu intermédio, a pregação fosse plenamente cumprida, e todos os gentios a ouvissem; e fui libertado da boca do leão.
18 ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
18 O Senhor me livrará também de toda obra maligna e me levará salvo para o seu reino celestial. A ele, glória pelos séculos dos séculos. Amém!
19 ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
19 Saúda Prisca, e Áquila, e a casa de Onesíforo.
20 ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
20 Erasto ficou em Corinto. Quanto a Trófimo, deixei-o doente em Mileto.
21 ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
21 Apressa-te a vir antes do inverno. Êubulo te envia saudações; o mesmo fazem Prudente, Lino, Cláudia e os irmãos todos.
22 ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
22 O Senhor seja com o teu espírito. A graça seja convosco.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar 2 Timóteo 4, comparar traduções ou montar um estudo — tudo direto pelo WhatsApp.