2 Tessalonicenses 2

Kannada Bible (GL_KANNADA) vs VC

Sair da comparação
VC Versão Católica
1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
1 No que diz respeito à vinda de nosso Senhor Jesus Cristo e nossa reunião com ele, rogamo-vos, irmãos,
2 ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
2 não vos deixeis facilmente perturbar o espírito e alarmar-vos, nem por alguma pretensa revelação nem por palavra ou carta tidas como procedentes de nós e que vos afirmassem estar iminente o dia do Senhor.
3 ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
3 Ninguém de modo algum vos engane. Porque primeiro deve vir a apostasia, e deve manifestar-se o homem da iniqüidade, o filho da perdição,
4 ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
4 o adversário, aquele que se levanta contra tudo o que é divino e sagrado, a ponto de tomar lugar no templo de Deus, e apresentar-se como se fosse Deus.
5 ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
5 Não vos lembrais de que vos dizia estas coisas, quando estava ainda convosco?
6 ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ.
6 Agora, sabeis perfeitamente que algo o detém, de modo que ele só se manifestará a seu tempo.
7 ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
7 Porque o mistério da iniqüidade já está em ação, apenas esperando o desaparecimento daquele que o detém.
8 ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
8 Então o tal ímpio se manifestará. Mas o Senhor Jesus o destruirá com o sopro de sua boca e o aniquilará com o resplendor da sua vinda.
9 ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
9 A manifestação do ímpio será acompanhada, graças ao poder de Satanás, de toda a sorte de portentos, sinais e prodígios enganadores.
10 ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
10 Ele usará de todas as seduções do mal com aqueles que se perdem, por não terem cultivado o amor à verdade que os teria podido salvar.
11 ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
11 Por isso, Deus lhes enviará um poder que os enganará e os induzirá a acreditar no erro.
12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
12 Desse modo, serão julgados e condenados todos os que não deram crédito à verdade, mas consentiram no mal.
13 ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
13 Nós, porém, sentimo-nos na obrigação de incessantemente dar graças a Deus a respeito de vós, irmãos queridos de Deus, porque desde o princípio vos escolheu Deus para vos dar a salvação, pela santificação do Espírito e pela fé na verdade.
14 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
14 E pelo anúncio do nosso Evangelho vos chamou para tomardes parte na glória de nosso Senhor Jesus Cristo.
15 ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
15 Assim, pois, irmãos, ficai firmes e conservai os ensinamentos que de nós aprendestes, seja por palavras, seja por carta nossa.
16 ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂ
16 Nosso Senhor Jesus Cristo e Deus, nosso Pai, que nos amou e nos deu consolação eterna e boa esperança pela sua graça,
17 ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
17 consolem os vossos corações e os confirmem para toda boa obra e palavra!

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar 2 Tessalonicenses 2, comparar traduções ou montar um estudo — tudo direto pelo WhatsApp.