Apocalipse 11

Kannada Bible (GL_KANNADA) vs ARA

Sair da comparação
ARA Almeida Revista e Atualizada 1993
1 ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
1 Foi-me dado um caniço semelhante a uma vara, e também me foi dito: Dispõe-te e mede o santuário de Deus, o seu altar e os que naquele adoram;
2 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
2 mas deixa de parte o átrio exterior do santuário e não o meças, porque foi ele dado aos gentios; estes, por quarenta e dois meses, calcarão aos pés a cidade santa.
3 ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
3 Darei às minhas duas testemunhas que profetizem por mil duzentos e sessenta dias, vestidas de pano de saco.
4 ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
4 São estas as duas oliveiras e os dois candeeiros que se acham em pé diante do Senhor da terra.
5 ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
5 Se alguém pretende causar-lhes dano, sai fogo da sua boca e devora os inimigos; sim, se alguém pretender causar-lhes dano, certamente, deve morrer.
6 ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
6 Elas têm autoridade para fechar o céu, para que não chova durante os dias em que profetizarem. Têm autoridade também sobre as águas, para convertê-las em sangue, bem como para ferir a terra com toda sorte de flagelos, tantas vezes quantas quiserem.
7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
7 Quando tiverem, então, concluído o testemunho que devem dar, a besta que surge do abismo pelejará contra elas, e as vencerá, e matará,
8 ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
8 e o seu cadáver ficará estirado na praça da grande cidade que, espiritualmente, se chama Sodoma e Egito, onde também o seu Senhor foi crucificado.
9 ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
9 Então, muitos dentre os povos, tribos, línguas e nações contemplam os cadáveres das duas testemunhas, por três dias e meio, e não permitem que esses cadáveres sejam sepultados.
10 ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
10 Os que habitam sobre a terra se alegram por causa deles, realizarão festas e enviarão presentes uns aos outros, porquanto esses dois profetas atormentaram os que moram sobre a terra.
11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
11 Mas, depois dos três dias e meio, um espírito de vida, vindo da parte de Deus, neles penetrou, e eles se ergueram sobre os pés, e àqueles que os viram sobreveio grande medo;
12 ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
12 e as duas testemunhas ouviram grande voz vinda do céu, dizendo-lhes: Subi para aqui. E subiram ao céu numa nuvem, e os seus inimigos as contemplaram.
13 ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
13 Naquela hora, houve grande terremoto, e ruiu a décima parte da cidade, e morreram, nesse terremoto, sete mil pessoas, ao passo que as outras ficaram sobremodo aterrorizadas e deram glória ao Deus do céu.
14 ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
14 Passou o segundo ai. Eis que, sem demora, vem o terceiro ai.
15 ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
15 O sétimo anjo tocou a trombeta, e houve no céu grandes vozes, dizendo: O reino do mundo se tornou de nosso Senhor e do seu Cristo, e ele reinará pelos séculos dos séculos.
16 ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
16 E os vinte e quatro anciãos que se encontram sentados no seu trono, diante de Deus, prostraram-se sobre o seu rosto e adoraram a Deus,
17 ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
17 dizendo: Graças te damos, Senhor Deus, Todo-Poderoso, que és e que eras, porque assumiste o teu grande poder e passaste a reinar.
18 ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನು
18 Na verdade, as nações se enfureceram; chegou, porém, a tua ira, e o tempo determinado para serem julgados os mortos, para se dar o galardão aos teus servos, os profetas, aos santos e aos que temem o teu nome, tanto aos pequenos como aos grandes, e para destruíres os que destroem a terra.
19 ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
19 Abriu-se, então, o santuário de Deus, que se acha no céu, e foi vista a arca da Aliança no seu santuário, e sobrevieram relâmpagos, vozes, trovões, terremoto e grande saraivada.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Apocalipse 11, comparar traduções ou montar um estudo — tudo direto pelo WhatsApp.