Apocalipse 16
Kannada Bible (GL_KANNADA) vs NAA
NAA Nova Almeida Atualizada 2017
1 ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
1 Ouvi uma voz forte, vinda do santuário, dizendo aos sete anjos: — Vão e derramem sobre a terra as sete taças da ira de Deus.
2 ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
2 O primeiro anjo foi e derramou a sua taça sobre a terra, e apareceram úlceras malignas e dolorosas nas pessoas que tinham a marca da besta e que adoravam a sua imagem.
3 ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
3 O segundo anjo derramou a sua taça no mar, e o mar se transformou em sangue, como de um morto, e morreu todo ser vivo que havia no mar.
4 ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
4 O terceiro anjo derramou a sua taça nos rios e nas fontes de água, e eles se transformaram em sangue.
5 ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
5 Então ouvi o anjo das águas dizendo: “Tu és justo, tu que és e que eras, o Santo, pois julgaste estas coisas.
6 ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
6 Porque derramaram sangue de santos e de profetas, também lhes deste sangue para beber. É o que merecem.”
7 ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
7 Ouvi uma voz do altar, que dizia: “Certamente, ó Senhor Deus, Todo-Poderoso, verdadeiros e justos são os teus juízos.”
8 ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
8 O quarto anjo derramou a sua taça sobre o sol, e lhe foi dado queimar a humanidade com fogo.
9 ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
9 As pessoas se queimaram com o intenso calor e blasfemaram contra o nome de Deus, que tem autoridade sobre estes flagelos. Porém, não se arrependeram para darem glória a Deus.
10 ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
10 O quinto anjo derramou a sua taça sobre o trono da besta. O reino da besta ficou em trevas, e as pessoas mordiam a língua por causa da dor que sentiam
11 ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
11 e blasfemavam contra o Deus do céu por causa das angústias e das úlceras que sofriam. Porém, não se arrependeram de suas obras.
12 ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
12 O sexto anjo derramou a sua taça sobre o grande rio Eufrates. As águas do rio secaram, para que se preparasse o caminho dos reis que vêm do Oriente.
13 ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
13 Então vi sair da boca do dragão, da boca da besta e da boca do falso profeta três espíritos imundos semelhantes a rãs.
14 ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
14 São espíritos de demônios, operadores de sinais, e se dirigem aos reis do mundo inteiro a fim de ajuntá-los para a batalha do grande Dia do Deus Todo-Poderoso.
15 ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
15 “Eis que venho como vem o ladrão. Bem-aventurado aquele que vigia e guarda as suas vestes, para que não ande nu, e não se veja a sua vergonha.”
16 ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
16 Então ajuntaram os reis no lugar que em hebraico se chama Armagedom.
17 ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
17 Então o sétimo anjo derramou a sua taça pelo ar. E uma voz forte saiu do santuário, do lado do trono, dizendo: — Está feito!
18 ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
18 E sobrevieram relâmpagos, vozes e trovões, e ocorreu um grande terremoto, como nunca houve igual desde que há gente sobre a terra, tal foi o terremoto, forte e grande.
19 ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
19 E a grande cidade se dividiu em três partes, e caíram as cidades das nações. E Deus se lembrou da grande Babilônia para dar-lhe o cálice do vinho do furor da sua ira.
20 ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.
20 Todas as ilhas fugiram, e os montes não foram achados.
21 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
21 Também desabou do céu sobre as pessoas uma grande chuva de granizo, com pedras que pesavam mais de trinta quilos. E, por causa do flagelo da chuva de pedras, as pessoas blasfemaram contra Deus, porque esse flagelo do granizo era terrível.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Apocalipse 16, comparar traduções ou montar um estudo — tudo direto pelo WhatsApp.