Apocalipse 19
Kannada Bible (GL_KANNADA) vs NVI
NVI Nova Versão Internacional
1 ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
1 Depois disso ouvi no céu algo semelhante à voz de uma grande multidão, que exclamava: "Aleluia! A salvação, a glória e o poder pertencem ao nosso Deus,
2 ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
2 pois verdadeiros e justos são os seus juízos. Ele condenou a grande prostituta que corrompia a terra com a sua prostituição. Ele cobrou dela o sangue dos seus servos".
3 ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
3 E mais uma vez a multidão exclamou: "Aleluia! A fumaça que dela vem, sobe para todo o sempre".
4 ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
4 Os vinte e quatro anciãos e os quatro seres viventes prostraram-se e adoraram a Deus, que estava assentado no trono, e exclamaram: "Amém, Aleluia! "
5 ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
5 Então veio do trono uma voz, conclamando: "Louvem o nosso Deus, todos vocês, seus servos, vocês que o temem, tanto pequenos como grandes! "
6 ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
6 Então ouvi algo semelhante ao som de uma grande multidão, como o estrondo de muitas águas e fortes trovões, que bradava: "Aleluia! pois reina o Senhor, o nosso Deus, o Todo-poderoso.
7 ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
7 Regozijemo-nos! Vamos nos alegrar e dar-lhe glória! Pois chegou a hora do casamento do Cordeiro, e a sua noiva já se aprontou.
8 ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
8 Foi-lhe dado para vestir-se linho fino, brilhante e puro". O linho fino são os atos justos dos santos.
9 ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
9 E o anjo me disse: "Escreva: Felizes os convidados para o banquete do casamento do Cordeiro! " E acrescentou: "Estas são as palavras verdadeiras de Deus".
10 ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
10 Então caí aos seus pés para adorá-lo, mas ele me disse: "Não faça isso! Sou servo como você e como os seus irmãos que se mantêm fiéis ao testemunho de Jesus. Adore a Deus! O testemunho de Jesus é o espírito de profecia".
11 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
11 Vi o céu aberto e diante de mim um cavalo branco, cujo cavaleiro se chama Fiel e Verdadeiro. Ele julga e guerreia com justiça.
12 ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
12 Seus olhos são como chamas de fogo, e em sua cabeça há muitas coroas e um nome que só ele conhece, e ninguém mais.
13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
13 Está vestido com um manto tingido de sangue, e o seu nome é Palavra de Deus.
14 ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
14 Os exércitos do céu o seguiam, vestidos de linho fino, branco e puro, e montados em cavalos brancos.
15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
15 De sua boca sai uma espada afiada, com a qual ferirá as nações. "Ele as governará com cetro de ferro". Ele pisa o lagar do vinho do furor da ira do Deus todo-poderoso.
16 ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
16 Em seu manto e em sua coxa está escrito este nome: REI DOS REIS E SENHOR DOS SENHORES.
17 ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
17 Vi um anjo que estava de pé no sol e que clamava em alta voz a todas as aves que voavam pelo meio do céu: "Venham, reúnam-se para o grande banquete de Deus,
18 ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
18 para comerem carne de reis, generais e poderosos, carne de cavalos e seus cavaleiros, carne de todos: livres e escravos, pequenos e grandes".
19 ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
19 Então vi a besta, os reis da terra e os seus exércitos reunidos para guerrearem contra aquele que está montado no cavalo e contra o seu exército.
20 ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
20 Mas a besta foi presa, e com ela o falso profeta que havia realizado os sinais miraculosos em nome dela, com os quais ele havia enganado os que receberam a marca da besta e adoraram a imagem dela. Os dois foram lançados vivos no lago de fogo que arde com enxofre.
21 ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
21 Os demais foram mortos com a espada que saía da boca daquele que está montado no cavalo. E todas as aves se fartaram com a carne deles.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Apocalipse 19, comparar traduções ou montar um estudo — tudo direto pelo WhatsApp.