Apocalipse 22
Kannada Bible (GL_KANNADA) vs ACF
ACF Almeida Corrigida Fiel
1 ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
1 E mostrou-me o rio puro da água da vida, claro como cristal, que procedia do trono de Deus e do Cordeiro.
2 ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.
2 No meio da sua praça, e de um e de outro lado do rio, estava a árvore da vida, que produz doze frutos, dando seu fruto de mês em mês; e as folhas da árvore são para a saúde das nações.
3 ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
3 E ali nunca mais haverá maldição contra alguém; e nela estará o trono de Deus e do Cordeiro, e os seus servos o servirão.
4 ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
4 E verão o seu rosto, e nas suas testas estará o seu nome.
5 ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
5 E ali não haverá mais noite, e não necessitarão de lâmpada nem de luz do sol, porque o Senhor Deus os ilumina; e reinarão para todo o sempre.
6 ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
6 E disse-me: Estas palavras são fiéis e verdadeiras; e o Senhor, o Deus dos santos profetas, enviou o seu anjo, para mostrar aos seus servos as coisas que em breve hão de acontecer.
7 ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
7 Eis que presto venho: Bem-aventurado aquele que guarda as palavras da profecia deste livro.
8 ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.
8 E eu, João, sou aquele que vi e ouvi estas coisas. E, havendo-as ouvido e visto, prostrei-me aos pés do anjo que mas mostrava para o adorar.
9 ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
9 E disse-me: Olha, não faças tal; porque eu sou conservo teu e de teus irmãos, os profetas, e dos que guardam as palavras deste livro. Adora a Deus.
10 ಇದಲ್ಲದೆ ಅವನು ನನಗೆ--ಈ ಪುಸ್ತಕದಲ್ಲಿರುವ ಪ್ರವಾದನೆಯ ಹೇಳಿಕೆಗಳಿಗೆ ಮುದ್ರೆಹಾಕಬೇಡ; ಯಾಕಂದರೆ ಸಮಯವು ಸವಿಾಪವಾಗಿದೆ.
10 E disse-me: Não seles as palavras da profecia deste livro; porque próximo está o tempo.
11 ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
11 Quem é injusto, seja injusto ainda; e quem é sujo, seja sujo ainda; e quem é justo, seja justificado ainda; e quem é santo, seja santificado ainda.
12 ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
12 E, eis que cedo venho, e o meu galardão está comigo, para dar a cada um segundo a sua obra.
13 ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
13 Eu sou o Alfa e o Ômega, o princípio e o fim, o primeiro e o derradeiro.
14 ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
14 Bem-aventurados aqueles que guardam os seus mandamentos, para que tenham direito à árvore da vida, e possam entrar na cidade pelas portas.
15 ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
15 Mas, ficarão de fora os cães e os feiticeiros, e os que se prostituem, e os homicidas, e os idólatras, e qualquer que ama e comete a mentira.
16 ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
16 Eu, Jesus, enviei o meu anjo, para vos testificar estas coisas nas igrejas. Eu sou a raiz e a geração de Davi, a resplandecente estrela da manhã.
17 ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
17 E o Espírito e a esposa dizem: Vem. E quem ouve, diga: Vem. E quem tem sede, venha; e quem quiser, tome de graça da água da vida.
18 ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.
18 Porque eu testifico a todo aquele que ouvir as palavras da profecia deste livro que, se alguém lhes acrescentar alguma coisa, Deus fará vir sobre ele as pragas que estão escritas neste livro;
19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
19 E, se alguém tirar quaisquer palavras do livro desta profecia, Deus tirará a sua parte do livro da vida, e da cidade santa, e das coisas que estão escritas neste livro.
20 ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.
20 Aquele que testifica estas coisas diz: Certamente cedo venho. Amém. Ora vem, Senhor Jesus.
21 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
21 A graça de nosso Senhor Jesus Cristo seja com todos vós. Amém.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Apocalipse 22, comparar traduções ou montar um estudo — tudo direto pelo WhatsApp.