Apocalipse 5

Kannada Bible (GL_KANNADA) vs BKJ

Sair da comparação
1 ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
1 E eu vi na destra do que estava assentado no trono um livro escrito por dentro e por fora, selado com sete selos.
2 ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
2 E eu vi um forte anjo proclamando em alta voz: Quem é digno de abrir o livro e romper os seus selos?
3 ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
3 E nenhum homem no céu, nem na terra, nem debaixo da terra, era capaz de abrir o livro, nem de olhar para ele.
4 ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
4 E eu chorei muito, porque nenhum homem foi achado digno de abrir e ler o livro, nem de olhar para ele.
5 ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
5 E um dos anciãos me disse: Não chores; eis que o Leão da tribo de Judá, a Raiz de Davi, prevaleceu para abrir o livro e romper os seus sete selos.
6 ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
6 E eu olhei, e eis que estava no meio do trono e dos quatro animais, e no meio dos anciãos um Cordeiro em pé, como se tivesse sido morto; tendo sete chifres e sete olhos, que são os sete Espíritos de Deus enviados a toda a terra.
7 ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
7 E ele veio e tomou o livro da destra do que estava assentado no trono.
8 ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
8 E havendo tomado o livro, os quatro animais e os vinte e quatro anciãos prostraram-se diante do Cordeiro; tendo cada um deles harpa e vasos de ouro cheios de incenso, que são as orações dos santos.
9 ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
9 E eles cantavam uma nova canção, dizendo: Tu és digno de tomar o livro, e de abrir seus selos; porque foste morto e nos resgatastes para Deus pelo teu sangue, de cada família, e língua, e povo e nação;
10 ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
10 e nos fizeste reis e sacerdotes para o nosso Deus, e nós reinaremos sobre a terra.
11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
11 E eu olhei, e ouvi a voz de muitos anjos ao redor do trono, e dos animais, e dos anciãos; e o número deles era dez mil, vezes dez mil, e milhares de milhares;
12 ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
12 dizendo em alta voz: Digno é o Cordeiro que foi morto para receber poder, e riquezas, e sabedoria, e força, e honra, e glória, e bênção.
13 ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.
13 E cada criatura que está no céu, e na terra, e debaixo da terra, assim como as que estão no mar, e tudo o que neles há, eu as ouvi dizendo: Bênção, e honra, e glória, e poder, sejam àquele que está assentado sobre o trono, e ao Cordeiro, para sempre e sempre.
14 ಆಗ ನಾಲ್ಕು ಜೀವಿಗಳು--ಆಮೆನ್‌ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
14 E os quatro animais disseram: Amém. E os vinte e quatro anciãos se prostraram e adoraram aquele que vive para sempre e sempre.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Apocalipse 5, comparar traduções ou montar um estudo — tudo direto pelo WhatsApp.