Atos 13

Kannada Bible (GL_KANNADA) vs ACF

Sair da comparação
ACF Almeida Corrigida Fiel
1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
1 E na igreja que estava em Antioquia havia alguns profetas e doutores, a saber: Barnabé e Simeão chamado Níger, e Lúcio, cireneu, e Manaém, que fora criado com Herodes o tetrarca, e Saulo.
2 ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
2 E, servindo eles ao Senhor, e jejuando, disse o Espírito Santo: Apartai-me a Barnabé e a Saulo para a obra a que os tenho chamado.
3 ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
3 Então, jejuando e orando, e pondo sobre eles as mãos, os despediram.
4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
4 E assim estes, enviados pelo Espírito Santo, desceram a Selêucia e dali navegaram para Chipre.
5 ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
5 E, chegados a Salamina, anunciavam a palavra de Deus nas sinagogas dos judeus; e tinham também a João como cooperador.
6 ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
6 E, havendo atravessado a ilha até Pafos, acharam um certo judeu mágico, falso profeta, chamado Barjesus,
7 ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
7 O qual estava com o procônsul Sérgio Paulo, homem prudente. Este, chamando a si Barnabé e Saulo, procurava muito ouvir a palavra de Deus.
8 ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
8 Mas resistia-lhes Elimas, o encantador (porque assim se interpreta o seu nome), procurando apartar da fé o procônsul.
9 ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
9 Todavia Saulo, que também se chama Paulo, cheio do Espírito Santo, e fixando os olhos nele,
10 ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
10 Disse: Ó filho do diabo, cheio de todo o engano e de toda a malícia, inimigo de toda a justiça, não cessarás de perturbar os retos caminhos do Senhor?
11 ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
11 Eis aí, pois, agora contra ti a mão do Senhor, e ficarás cego, sem ver o sol por algum tempo. E no mesmo instante a escuridão e as trevas caíram sobre ele e, andando à roda, buscava a quem o guiasse pela mão.
12 ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
12 Então o procônsul, vendo o que havia acontecido, creu, maravilhado da doutrina do Senhor.
13 ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
13 E, partindo de Pafos, Paulo e os que estavam com ele chegaram a Perge, da Panfília. Mas João, apartando-se deles, voltou para Jerusalém.
14 ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
14 E eles, saindo de Perge, chegaram a Antioquia, da Pisídia, e, entrando na sinagoga, num dia de sábado, assentaram-se;
15 ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
15 E, depois da lição da lei e dos profetas, lhes mandaram dizer os principais da sinagoga: Homens irmãos, se tendes alguma palavra de consolação para o povo, falai.
16 ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
16 E, levantando-se Paulo, e pedindo silêncio com a mão, disse: Homens israelitas, e os que temeis a Deus, ouvi:
17 ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
17 O Deus deste povo de Israel escolheu a nossos pais, e exaltou o povo, sendo eles estrangeiros na terra do Egito; e com braço poderoso os tirou dela;
18 ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
18 E suportou os seus costumes no deserto por espaço de quase quarenta anos.
19 ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
19 E, destruindo a sete nações na terra de Canaã, deu-lhes por sorte a terra deles.
20 ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
20 E, depois disto, por quase quatrocentos e cinqüenta anos, lhes deu juízes, até ao profeta Samuel.
21 ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
21 E depois pediram um rei, e Deus lhes deu por quarenta anos, a Saul filho de Cis, homem da tribo de Benjamim.
22 ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
22 E, quando este foi retirado, levantou-lhes como rei a Davi, ao qual também deu testemunho, e disse: Achei a Davi, filho de Jessé, homem conforme o meu coração, que executará toda a minha vontade.
23 ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
23 Da descendência deste, conforme a promessa, levantou Deus a Jesus para Salvador de Israel;
24 ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
24 Tendo primeiramente João, antes da vinda dele, pregado a todo o povo de Israel o batismo de arrependimento.
25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
25 Mas João, quando completava a carreira, disse: Quem pensais vós que eu sou? Eu não sou o Cristo; mas eis que após mim vem aquele a quem não sou digno de desatar as alparcas dos pés.
26 ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
26 Homens irmãos, filhos da geração de Abraão, e os que dentre vós temem a Deus, a vós vos é enviada a palavra desta salvação.
27 ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
27 Por não terem conhecido a este, os que habitavam em Jerusalém, e os seus príncipes, condenaram-no, cumprindo assim as vozes dos profetas que se lêem todos os sábados.
28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
28 E, embora não achassem alguma causa de morte, pediram a Pilatos que ele fosse morto.
29 ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
29 E, havendo eles cumprido todas as coisas que dele estavam escritas, tirando-o do madeiro, o puseram na sepultura;
30 ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
30 Mas Deus o ressuscitou dentre os mortos.
31 ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
31 E ele por muitos dias foi visto pelos que subiram com ele da Galiléia a Jerusalém, e são suas testemunhas para com o povo.
32 ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
32 E nós vos anunciamos que a promessa que foi feita aos pais, Deus a cumpriu a nós, seus filhos, ressuscitando a Jesus;
33 ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
33 Como também está escrito no salmo segundo: Meu filho és tu, hoje te gerei.
34 ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
34 E que o ressuscitaria dentre os mortos, para nunca mais tornar à corrupção, disse-o assim: As santas e fiéis bênçãos de Davi vos darei.
35 ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
35 Por isso também em outro salmo diz: Não permitirás que o teu santo veja corrupção.
36 ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
36 Porque, na verdade, tendo Davi no seu tempo servido conforme a vontade de Deus, dormiu, foi posto junto de seus pais e viu a corrupção.
37 ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
37 Mas aquele a quem Deus ressuscitou nenhuma corrupção viu.
38 ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
38 Seja-vos, pois, notório, homens irmàos, que por este se vos anuncia a remissão dos pecados.
39 ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
39 E de tudo o que, pela lei de Moisés, não pudestes ser justificados, por ele é justificado todo aquele que crê.
40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
40 Vede, pois, que não venha sobre vós o que está dito nos profetas:
41 ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
41 Vede, ó desprezadores, e espantai-vos e desaparecei;porque opero uma obra em vossos dias,ora tal que não crereis, se alguém vo-la contar.
42 ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
42 E, saídos os judeus da sinagoga, os gentios rogaram que no sábado seguinte lhes fossem ditas as mesmas coisas.
43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
43 E, despedida a sinagoga, muitos dos judeus e dos prosélitos religiosos seguiram Paulo e Barnabé; os quais, falando-lhes, os exortavam a que permanecessem na graça de Deus.
44 ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
44 E no sábado seguinte ajuntou-se quase toda a cidade para ouvir a palavra de Deus.
45 ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
45 Então os judeus, vendo a multidão, encheram-se de inveja e, blasfemando, contradiziam o que Paulo falava.
46 ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
46 Mas Paulo e Barnabé, usando de ousadia, disseram: Era mister que a vós se vos pregasse primeiro a palavra de Deus; mas, visto que a rejeitais, e não vos julgais dignos da vida eterna, eis que nos voltamos para os gentios;
47 ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
47 Porque o Senhor assim no-lo mandou:eu te pus para luz dos gentios,a fim de que sejas para salvação até os confins da terra.
48 ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
48 E os gentios, ouvindo isto, alegraram-se, e glorificavam a palavra do Senhor; e creram todos quantos estavam ordenados para a vida eterna.
49 ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
49 E a palavra do Senhor se divulgava por toda aquela província.
50 ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
50 Mas os judeus incitaram algumas mulheres religiosas e honestas, e os principais da cidade, e levantaram perseguição contra Paulo e Barnabé, e os lançaram fora dos seus termos.
51 ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.
51 Sacudindo, porém, contra eles o pó dos seus pés, partiram para Icônio.
52 ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
52 E os discípulos estavam cheios de alegria e do Espírito Santo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 13, comparar traduções ou montar um estudo — tudo direto pelo WhatsApp.