Atos 15
Kannada Bible (GL_KANNADA) vs ARC
ARC Almeida Revista e Corrigida 2009
1 ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
1 Então, alguns que tinham descido da Judeia ensinavam assim os irmãos: Se vos não circuncidardes, conforme o uso de Moisés, não podeis salvar-vos.
2 ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
2 Tendo tido Paulo e Barnabé não pequena discussão e contenda contra eles, resolveu-se que Paulo, Barnabé e alguns dentre eles subissem a Jerusalém aos apóstolos e aos anciãos sobre aquela questão.
3 ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
3 E eles, sendo acompanhados pela igreja, passaram pela Fenícia e por Samaria, contando a conversão dos gentios, e davam grande alegria a todos os irmãos.
4 ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
4 Quando chegaram a Jerusalém, foram recebidos pela igreja e pelos apóstolos e anciãos e lhes anunciaram quão grandes coisas Deus tinha feito com eles.
5 ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
5 Alguns, porém, da seita dos fariseus que tinham crido se levantaram, dizendo que era mister circuncidá-los e mandar- lhes que guardassem a lei de Moisés.
6 ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
6 Congregaram-se, pois, os apóstolos e os anciãos para considerar este assunto.
7 ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
7 E, havendo grande contenda, levantou-se Pedro e disse-lhes: Varões irmãos, bem sabeis que já há muito tempo Deus me elegeu dentre vós, para que os gentios ouvissem da minha boca a palavra do evangelho e cressem.
8 ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
8 E Deus, que conhece os corações, lhes deu testemunho, dando-lhes o Espírito Santo, assim como também a nós;
9 ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
9 e não fez diferença alguma entre eles e nós, purificando o seu coração pela fé.
10 ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
10 Agora, pois, por que tentais a Deus, pondo sobre a cerviz dos discípulos um jugo que nem nossos pais nem nós podemos suportar?
11 ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
11 Mas cremos que seremos salvos pela graça do Senhor Jesus Cristo, como eles também.
12 ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
12 Então, toda a multidão se calou e escutava a Barnabé e a Paulo, que contavam quão grandes sinais e prodígios Deus havia feito por meio deles entre os gentios.
13 ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
13 E, havendo-se eles calado, tomou Tiago a palavra, dizendo: Varões irmãos, ouvi-me.
14 ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
14 Simão relatou como, primeiramente, Deus visitou os gentios, para tomar deles um povo para o seu nome.
15 ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
15 E com isto concordam as palavras dos profetas, como está escrito:
16 ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
16 Depois disto, voltarei e reedificarei o tabernáculo de Davi, que está caído; levantá-lo-ei das suas ruínas e tornarei a edificá-lo.
17 ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
17 Para que o resto dos homens busque ao Senhor, e também todos os gentios sobre os quais o meu nome é invocado, diz o Senhor, que faz todas estas coisas
18 ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
18 que são conhecidas desde toda a eternidade.
19 ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
19 Pelo que julgo que não se deve perturbar aqueles, dentre os gentios, que se convertem a Deus,
20 ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
20 mas escrever-lhes que se abstenham das contaminações dos ídolos, da prostituição, do que é sufocado e do sangue.
21 ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
21 Porque Moisés, desde os tempos antigos, tem em cada cidade quem o pregue e, cada sábado, é lido nas sinagogas.
22 ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
22 Então, pareceu bem aos apóstolos e aos anciãos, com toda a igreja, eleger varões dentre eles e enviá-los com Paulo e Barnabé a Antioquia, a saber: Judas, chamado Barsabás, e Silas, varões distintos entre os irmãos.
23 ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
23 E por intermédio deles escreveram o seguinte: Os apóstolos, e os anciãos, e os irmãos, aos irmãos dentre os gentios que estão em Antioquia, Síria e Cilícia, saúde.
24 ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
24 Porquanto ouvimos que alguns que saíram dentre nós vos perturbaram com palavras e transtornaram a vossa alma (não lhes tendo nós dado mandamento),
25 ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
25 pareceu-nos bem, reunidos concordemente, eleger alguns varões e enviá-los com os nossos amados Barnabé e Paulo,
26 ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
26 homens que já expuseram a vida pelo nome de nosso Senhor Jesus Cristo.
27 ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
27 Enviamos, portanto, Judas e Silas, os quais de boca vos anunciarão também o mesmo.
28 ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
28 Na verdade, pareceu bem ao Espírito Santo e a nós não vos impor mais encargo algum, senão estas coisas necessárias:
29 ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
29 Que vos abstenhais das coisas sacrificadas aos ídolos, e do sangue, e da carne sufocada, e da fornicação; destas coisas fareis bem se vos guardardes. Bem vos vá.
30 ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
30 Tendo-se eles, então, despedido, partiram para Antioquia e, ajuntando a multidão, entregaram a carta.
31 ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
31 E, quando a leram, alegraram-se pela exortação.
32 ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
32 Depois, Judas e Silas, que também eram profetas, exortaram e confirmaram os irmãos com muitas palavras.
33 ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
33 E, detendo-se ali algum tempo, os irmãos os deixaram voltar em paz para os apóstolos,
34 ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
34 mas pareceu bem a Silas ficar ali.
35 ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
35 E Paulo e Barnabé ficaram em Antioquia, ensinando e pregando, com muitos outros, a palavra do Senhor.
36 ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
36 Alguns dias depois, disse Paulo a Barnabé: Tornemos a visitar nossos irmãos por todas as cidades em que já anunciamos a palavra do Senhor, para ver como estão.
37 ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
37 E Barnabé aconselhava que tomassem consigo a João, chamado Marcos.
38 ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
38 Mas a Paulo parecia razoável que não tomassem consigo aquele que desde a Panfília se tinha apartado deles e não os acompanhou naquela obra.
39 ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
39 E tal contenda houve entre eles, que se apartaram um do outro. Barnabé, levando consigo a Marcos, navegou para Chipre.
40 ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.
40 E Paulo, tendo escolhido a Silas, partiu, encomendado pelos irmãos à graça de Deus.
41 ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
41 E passou pela Síria e Cilícia, confirmando as igrejas.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 15, comparar traduções ou montar um estudo — tudo direto pelo WhatsApp.