Atos 26
Kannada Bible (GL_KANNADA) vs ACF
ACF Almeida Corrigida Fiel
1 ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
1 Depois Agripa disse a Paulo: É permitido que te defendas. Então Paulo, estendendo a mão em sua defesa, respondeu:
2 ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
2 Tenho-me por feliz, ó rei Agripa, de que perante ti me haja hoje de defender de todas as coisas de que sou acusado pelos judeus;
3 ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
3 Mormente sabendo eu que tens conhecimento de todos os costumes e questões que há entre os judeus; por isso te rogo que me ouças com paciência.
4 ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
4 Quanto à minha vida, desde a mocidade, como decorreu desde o princípio entre os da minha nação, em Jerusalém, todos os judeus a conhecem,
5 ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
5 Sabendo de mim desde o princípio (se o quiserem testificar), que, conforme a mais severa seita da nossa religião, vivi fariseu.
6 ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
6 E agora pela esperança da promessa que por Deus foi feita a nossos pais estou aqui e sou julgado.
7 ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
7 À qual as nossas doze tribos esperam chegar, servindo a Deus continuamente, noite e dia. Por esta esperança, ó rei Agripa, eu sou acusado pelos judeus.
8 ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
8 Pois quê? julga-se coisa incrível entre vós que Deus ressuscite os mortos?
9 ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
9 Bem tinha eu imaginado que contra o nome de Jesus Nazareno devia eu praticar muitos atos;
10 ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
10 O que também fiz em Jerusalém. E, havendo recebido autorização dos principais dos sacerdotes, encerrei muitos dos santos nas prisões; e quando os matavam eu dava o meu voto contra eles.
11 ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
11 E, castigando-os muitas vezes por todas as sinagogas, os obriguei a blasfemar. E, enfurecido demasiadamente contra eles, até nas cidades estranhas os persegui.
12 ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
12 Sobre o que, indo então a Damasco, com poder e comissão dos principais dos sacerdotes,
13 ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
13 Ao meio-dia, ó rei, vi no caminho uma luz do céu, que excedia o esplendor do sol, cuja claridade me envolveu a mim e aos que iam comigo.
14 ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
14 E, caindo nós todos por terra, ouvi uma voz que me falava, e em língua hebraica dizia: Saulo, Saulo, por que me persegues? Dura coisa te é recalcitrar contra os aguilhões.
15 ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
15 E disse eu: Quem és, Senhor? E ele respondeu: Eu sou Jesus, a quem tu persegues;
16 ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
16 Mas levanta-te e põe-te sobre teus pés, porque te apareci por isto, para te pôr por ministro e testemunha tanto das coisas que tens visto como daquelas pelas quais te aparecerei ainda;
17 ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
17 Livrando-te deste povo, e dos gentios, a quem agora te envio,
18 ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
18 Para lhes abrires os olhos, e das trevas os converteres à luz, e do poder de Satanás a Deus; a fim de que recebam a remissão de pecados, e herança entre os que são santificados pela fé em mim.
19 ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
19 Por isso, ó rei Agripa, não fui desobediente à visão celestial.
20 ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
20 Antes anunciei primeiramente aos que estão em Damasco e em Jerusalém, e por toda a terra da Judéia, e aos gentios, que se emendassem e se convertessem a Deus, fazendo obras dignas de arrependimento.
21 ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
21 Por causa disto os judeus lançaram mão de mim no templo, e procuraram matar-me.
22 ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
22 Mas, alcançando socorro de Deus, ainda até ao dia de hoje permaneço dando testemunho tanto a pequenos como a grandes, não dizendo nada mais do que o que os profetas e Moisés disseram que devia acontecer,
23 ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
23 Isto é, que o Cristo devia padecer, e sendo o primeiro da ressurreição dentre os mortos, devia anunciar a luz a este povo e aos gentios.
24 ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
24 E, dizendo ele isto em sua defesa, disse Festo em alta voz: Estás louco, Paulo; as muitas letras te fazem delirar.
25 ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
25 Mas ele disse: Não deliro, ó potentíssimo Festo; antes digo palavras de verdade e de um são juízo.
26 ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
26 Porque o rei, diante de quem também falo com ousadia, sabe estas coisas, pois não creio que nada disto lhe é oculto; porque isto não se fez em qualquer canto.
27 ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
27 Crês tu nos profetas, ó rei Agripa? Bem sei que crês.
28 ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
28 E disse Agripa a Paulo: Por pouco me queres persuadir a que me faça cristão!
29 ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
29 E disse Paulo: Prouvera a Deus que, ou por pouco ou por muito, não somente tu, mas também todos quantos hoje me estão ouvindo, se tornassem tais qual eu sou, exceto estas cadeias.
30 ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
30 E, dizendo ele isto, levantou-se o rei, o presidente, e Berenice, e os que com eles estavam assentados.
31 ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
31 E, apartando-se dali falavam uns com os outros, dizendo: Este homem nada fez digno de morte ou de prisões.
32 ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
32 E Agripa disse a Festo: Bem podia soltar-se este homem, se não houvera apelado para César.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 26, comparar traduções ou montar um estudo — tudo direto pelo WhatsApp.