Atos 27

Kannada Bible (GL_KANNADA) vs ARC

Sair da comparação
ARC Almeida Revista e Corrigida 2009
1 ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
1 Como se determinou que havíamos de navegar para a Itália, entregaram Paulo e alguns outros presos a um centurião por nome Júlio, da Coorte Augusta.
2 ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
2 E, embarcando nós em um navio adramitino, partimos navegando pelos lugares da costa da Ásia, estando conosco Aristarco, macedônio de Tessalônica.
3 ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
3 E chegamos no dia seguinte a Sidom, e Júlio, tratando Paulo humanamente, lhe permitiu ir ver os amigos, para que cuidassem dele.
4 ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
4 E, partindo dali, fomos navegando abaixo de Chipre, porque os ventos eram contrários.
5 ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
5 E, tendo atravessado o mar ao longo da Cilícia e Panfília, chegamos a Mirra, na Lícia.
6 ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
6 Achando ali o centurião um navio de Alexandria, que navegava para a Itália, nos fez embarcar nele.
7 ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
7 E, como por muitos dias navegássemos vagarosamente, havendo chegado apenas defronte de Cnido, não nos permitindo o vento ir mais adiante, navegamos abaixo de Creta, junto de Salmona.
8 ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
8 E, costeando-a dificilmente, chegamos a um lugar chamado Bons Portos, perto do qual estava a cidade de Laseia.
9 ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
9 Passado muito tempo, e sendo já perigosa a navegação, pois também o jejum já tinha passado, Paulo os admoestava,
10 ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
10 dizendo-lhes: Varões, vejo que a navegação há de ser incômoda e com muito dano, não só para o navio e a carga, mas também para a nossa vida.
11 ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
11 Mas o centurião cria mais no piloto e no mestre do que no que dizia Paulo.
12 ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
12 E, como aquele porto não era cômodo para invernar, os mais deles foram de parecer que se partisse dali para ver se podiam chegar a Fenice, que é um porto de Creta que olha para a banda do vento da África e do Coro, e invernar ali.
13 ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
13 E, soprando o vento sul brandamente, lhes pareceu terem já o que desejavam, e, fazendo-se de vela, foram de muito perto costeando Creta.
14 ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
14 Mas, não muito depois, deu nela um pé de vento, chamado Euroaquilão.
15 ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
15 E, sendo o navio arrebatado e não podendo navegar contra o vento, dando de mão a tudo, nos deixamos ir à toa.
16 ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
16 E, correndo abaixo de uma pequena ilha chamada Cauda, apenas pudemos ganhar o batel.
17 ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
17 E, levado este para cima, usaram de todos os meios, cingindo o navio; e, temendo darem à costa na Sirte, amainadas as velas, assim foram à toa.
18 ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
18 Andando nós agitados por uma veemente tempestade, no dia seguinte, aliviaram o navio.
19 ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
19 E, ao terceiro dia, nós mesmos, com as próprias mãos, lançamos ao mar a armação do navio.
20 ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
20 E, não aparecendo, havia já muitos dias, nem sol nem estrelas, e caindo sobre nós uma não pequena tempestade, fugiu-nos toda a esperança de nos salvarmos.
21 ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
21 Havendo já muito que se não comia, então, Paulo, pondo-se em pé no meio deles, disse: Fora, na verdade, razoável, ó varões, ter-me ouvido a mim e não partir de Creta, e assim evitariam este incômodo e esta perdição.
22 ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
22 Mas, agora, vos admoesto a que tenhais bom ânimo, porque não se perderá a vida de nenhum de vós, mas somente o navio.
23 ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
23 Porque, esta mesma noite, o anjo de Deus, de quem eu sou e a quem sirvo, esteve comigo,
24 ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
24 dizendo: Paulo, não temas! Importa que sejas apresentado a César, e eis que Deus te deu todos quantos navegam contigo.
25 ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
25 Portanto, ó varões, tende bom ânimo! Porque creio em Deus que há de acontecer assim como a mim me foi dito.
26 ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
26 É, contudo, necessário irmos dar numa ilha.
27 ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
27 Quando chegou a décima quarta noite, sendo impelidos de uma e outra banda no mar Adriático, lá pela meia-noite, suspeitaram os marinheiros que estavam próximos de alguma terra.
28 ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
28 E, lançando o prumo, acharam vinte braças; passando um pouco mais adiante, tornando a lançar o prumo, acharam quinze braças.
29 ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
29 E, temendo ir dar em alguns rochedos, lançaram da popa quatro âncoras, desejando que viesse o dia.
30 ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
30 Procurando, porém, os marinheiros fugir do navio e tendo já deitado o batel ao mar, como que querendo lançar as âncoras pela proa,
31 ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
31 disse Paulo ao centurião e aos soldados: Se estes não ficarem no navio, não podereis salvar-vos.
32 ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
32 Então, os soldados cortaram os cabos do batel e o deixaram cair.
33 ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
33 E, enquanto o dia vinha, Paulo exortava a todos a que comessem alguma coisa, dizendo: É já hoje o décimo quarto dia que esperais e permaneceis sem comer, não havendo provado nada.
34 ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
34 Portanto, exorto-vos a que comais alguma coisa, pois é para a vossa saúde; porque nem um cabelo cairá da cabeça de qualquer de vós.
35 ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
35 E, havendo dito isto, tomando o pão, deu graças a Deus na presença de todos e, partindo- o, começou a comer.
36 ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
36 E, tendo já todos bom ânimo, puseram-se também a comer.
37 ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.
37 E éramos ao todo no navio duzentas e setenta e seis almas.
38 ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
38 Refeitos com a comida, aliviaram o navio, lançando o trigo ao mar.
39 ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
39 E, sendo já dia, não reconheceram a terra; enxergaram, porém, uma enseada que tinha praia e consultaram-se sobre se deveriam encalhar nela o navio.
40 ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
40 Levantando as âncoras, deixaram-no ir ao mar, largando também as amarras do leme; e, alçando a vela maior ao vento, dirigiram-se para a praia.
41 ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
41 Dando, porém, num lugar de dois mares, encalharam ali o navio; e, fixa a proa, ficou imóvel, mas a popa abria-se com a força das ondas.
42 ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
42 Então, a ideia dos soldados foi que matassem os presos para que nenhum fugisse, escapando a nado.
43 ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ
43 Mas o centurião, querendo salvar a Paulo, lhes estorvou este intento; e mandou que os que pudessem nadar se lançassem primeiro ao mar e se salvassem em terra;
44 ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
44 e os demais, uns em tábuas e outros em coisas do navio. E assim aconteceu que todos chegaram à terra, a salvo.

Ler em outra tradução

Comparar com outra

Estude este capítulo no WhatsApp

Peça à IA da Bíblia Fala para explicar Atos 27, comparar traduções ou montar um estudo — tudo direto pelo WhatsApp.