Atos 2
Kannada Bible (GL_KANNADA) vs VC
VC Versão Católica
1 ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
1 Chegando o dia de Pentecostes, estavam todos reunidos no mesmo lugar.
2 ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
2 De repente, veio do céu um ruído, como se soprasse um vento impetuoso, e encheu toda a casa onde estavam sentados.
3 ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
3 Apareceu-lhes então uma espécie de línguas de fogo que se repartiram e pousaram sobre cada um deles.
4 ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
4 Ficaram todos cheios do Espírito Santo e começaram a falar em línguas, conforme o Espírito Santo lhes concedia que falassem.
5 ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
5 Achavam-se então em Jerusalém judeus piedosos de todas as nações que há debaixo do céu.
6 ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
6 Ouvindo aquele ruído, reuniu-se muita gente e maravilhava-se de que cada um os ouvia falar na sua própria língua.
7 ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
7 Profundamente impressionados, manifestavam a sua admiração: Não são, porventura, galileus todos estes que falam?
8 ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
8 Como então todos nós os ouvimos falar, cada um em nossa própria língua materna?
9 ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
9 Partos, medos, elamitas; os que habitam a Macedônia, a Judéia, a Capadócia, o Ponto, a Ásia,
10 ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
10 a Frígia, a Panfília, o Egito e as províncias da Líbia próximas a Cirene; peregrinos romanos,
11 ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
11 judeus ou prosélitos, cretenses e árabes; ouvimo-los publicar em nossas línguas as maravilhas de Deus!
12 ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
12 Estavam, pois, todos atônitos e, sem saber o que pensar, perguntavam uns aos outros: Que significam estas coisas?
13 ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
13 Outros, porém, escarnecendo, diziam: Estão todos embriagados de vinho doce.
14 ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
14 Pedro então, pondo-se de pé em companhia dos Onze, com voz forte lhes disse: Homens da Judéia e vós todos que habitais em Jerusalém: seja-vos isto conhecido e prestai atenção às minhas palavras.
15 ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
15 Estes homens não estão embriagados, como vós pensais, visto não ser ainda a hora terceira do dia.
16 ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
16 Mas cumpre-se o que foi dito pelo profeta Joel:
17 ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
17 Acontecerá nos últimos dias - é Deus quem fala -, que derramarei do meu Espírito sobre todo ser vivo: profetizarão os vossos filhos e as vossas filhas. Os vossos jovens terão visões, e os vossos anciãos sonharão.
18 ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
18 Sobre os meus servos e sobre as minhas servas derramarei naqueles dias do meu Espírito e profetizarão.
19 ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
19 Farei aparecer prodígios em cima, no céu, e milagres embaixo, na terra: sangue fogo e vapor de fumaça.
20 ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
20 O sol se converterá em trevas e a lua em sangue, antes que venha o grande e glorioso dia do Senhor.
21 ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
21 E então todo o que invocar o nome do Senhor será salvo {Jl 3,1-5}.
22 ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
22 Israelitas, ouvi estas palavras: Jesus de Nazaré, homem de quem Deus tem dado testemunho diante de vós com milagres, prodígios e sinais que Deus por ele realizou no meio de vós como vós mesmos o sabeis,
23 ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
23 depois de ter sido entregue, segundo determinado desígnio e presciência de Deus, vós o matastes, crucificando-o por mãos de ímpios.
24 ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
24 Mas Deus o ressuscitou, rompendo os grilhões da morte, porque não era possível que ela o retivesse em seu poder.
25 ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
25 Pois dele diz Davi: Eu via sempre o Senhor perto de mim, pois ele está à minha direita, para que eu não seja abalado.
26 ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
26 Alegrou-se por isso o meu coração e a minha língua exultou. Sim, também a minha carne repousará na esperança,
27 ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
27 pois não deixarás a minha alma na região dos mortos, nem permitirás que o teu santo conheça a corrupção.
28 ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
28 Fizeste-me conhecer os caminhos da vida, e me encherás de alegria com a visão de tua face {Sl 15,8-11}.
29 ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
29 Irmãos, seja permitido dizer-vos com franqueza: do patriarca Davi dizemos que morreu e foi sepultado, e o seu sepulcro está entre nós até o dia de hoje.
30 ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
30 Mas ele era profeta e sabia que Deus lhe havia jurado que um dos seus descendentes seria colocado no seu trono.
31 ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
31 É, portanto, a ressurreição de Cristo que ele previu e anunciou por estas palavras: Ele não foi abandonado na região dos mortos, e sua carne não conheceu a corrupção.
32 ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
32 A este Jesus, Deus o ressuscitou: do que todos nós somos testemunhas.
33 ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
33 Exaltado pela direita de Deus, havendo recebido do Pai o Espírito Santo prometido, derramou-o como vós vedes e ouvis.
34 ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
34 Pois Davi pessoalmente não subiu ao céu, todavia diz: O Senhor disse a meu Senhor: Senta-te à minha direita
35 ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
35 até que eu ponha os teus inimigos por escabelo dos teus pés {Sl 109,1}.
36 ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
36 Que toda a casa de Israel saiba, portanto, com a maior certeza de que este Jesus, que vós crucificastes, Deus o constituiu Senhor e Cristo.
37 ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
37 Ao ouvirem essas coisas, ficaram compungidos no íntimo do coração e indagaram de Pedro e dos demais apóstolos: Que devemos fazer, irmãos?
38 ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
38 Pedro lhes respondeu: Arrependei-vos e cada um de vós seja batizado em nome de Jesus Cristo para remissão dos vossos pecados, e recebereis o dom do Espírito Santo.
39 ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
39 Pois a promessa é para vós, para vossos filhos e para todos os que ouvirem de longe o apelo do Senhor, nosso Deus.
40 ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
40 Ainda com muitas outras palavras exortava-os, dizendo: Salvai-vos do meio dessa geração perversa!
41 ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
41 que receberam a sua palavra foram batizados. E naquele dia elevou-se a mais ou menos três mil o número dos adeptos.
42 ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
42 Perseveravam eles na doutrina dos apóstolos, na reunião em comum, na fração do pão e nas orações.
43 ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
43 De todos eles se apoderou o temor, pois pelos apóstolos foram feitos também muitos prodígios e milagres em Jerusalém e o temor estava em todos os corações.
44 ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
44 Todos os fiéis viviam unidos e tinham tudo em comum.
45 ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
45 Vendiam as suas propriedades e os seus bens, e dividiam-nos por todos, segundo a necessidade de cada um.
46 ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
46 Unidos de coração freqüentavam todos os dias o templo. Partiam o pão nas casas e tomavam a comida com alegria e singeleza de coração,
47 ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
47 louvando a Deus e cativando a simpatia de todo o povo. E o Senhor cada dia lhes ajuntava outros que estavam a caminho da salvação.
Atalhos do teclado
- Capítulo anterior←
- Próximo capítulo→
- Versículo anteriork
- Próximo versículoj
- Limpar seleçãoEsc
- Esta ajuda?
Estude este capítulo no WhatsApp
Peça à IA da Bíblia Fala para explicar Atos 2, comparar traduções ou montar um estudo — tudo direto pelo WhatsApp.